ಖಿನ್ನತೆಯಿಂದ ಬಳಲುತ್ತಿದ್ದ 23ರ ಟ್ರೈನಿ ವೈದ್ಯೆ 5ನೇ ಮಹಡಿಯಿಂದ ಹಾರಿ ಆತ್ಮಹತ್ಯೆ

Public TV
1 Min Read
Tamil Nadu suicide

– ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ನಡೆದ ಘಟನೆ

ತಮಿಳುನಾಡು: ಖಿನ್ನತೆಯಿಂದ ಬಳಲುತ್ತಿದ್ದ 23ರ  ಟ್ರೈನಿ ವೈದ್ಯೆ (Trainee Doctor) 5ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಮಿಳುನಾಡಿನ (Tamil Nadu) ಕಾಂಚಿಪುರಂ ಜಿಲ್ಲೆಯ ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ನಡೆದಿದೆ.

ಶಾರ್ಲಿನ್ (23) ಮೃತ ತರಬೇತಿ ವೈದ್ಯೆ. ಈಕೆ ಐದನೇ ವರ್ಷದ ವಿದ್ಯಾರ್ಥಿನಿಯಾಗಿ ವ್ಯಾಸಂಗ ಮಾಡುತ್ತಿದ್ದು, ತರಬೇತಿ ವೈದ್ಯೆಯಾಗಿಯೂ ಕೆಲಸ ನಿರ್ವಹಿಸುತ್ತಿದ್ದರು. ಈ ಖಾಸಗಿ ಕಾಲೇಜಿನಲ್ಲಿ ವಿವಿಧ ರಾಜ್ಯಗಳ ವಿದ್ಯಾರ್ಥಿಗಳೂ ಇದ್ದರು. ಇದನ್ನೂ ಓದಿ: ಜಮ್ಮು-ಕಾಶ್ಮೀರದಲ್ಲಿ ಭೂ ಕುಸಿತ; ಇಬ್ಬರು ವೈಷ್ಣೋದೇವಿ ಯಾತ್ರಿಕರ ಸಾವು

ಭಾನುವಾರ ರಾತ್ರಿ ಕಾಲೇಜಿನ ಕಿಟಕಿಯ ಪಕ್ಕದಲ್ಲಿ ಇತರೆ ವಿದ್ಯಾರ್ಥಿಗಳು ಕೂಡ ಕುಳಿತಿದ್ದು, ಅವರ ಕ್ಯಾಮೆರಾದಲ್ಲಿ ಈ ಘಟನೆಯ ದೃಶ್ಯ ಸೆರೆಯಾಗಿದೆ. ಸಹ ವಿದ್ಯಾರ್ಥಿನಿಯರು ತಕ್ಷಣವೇ ಆಕೆಯನ್ನ ಆಸ್ಪತ್ರೆಗೆ ಕೊಂಡೊಯ್ದರೂ ಚಿಕಿತ್ಸೆ ಫಲಕಾರಿ ಆಗದೇ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಎಕ್ಸ್‌ಪ್ರೆಸ್‌ ವೇಯಲ್ಲಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಸರ್ವಿಸ್ ರಸ್ತೆಗೆ ಉರುಳಿದ ಕಾರು

ವೈಯಕ್ತಿಕ ಕಾರಣಗಳಿಂದ ಆಕೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪ್ರಾಥಮಿಕ ವರದಿಯಿಂದ ತಿಳಿದುಬಂದಿದೆ. ಹೆಚ್ಚಿನ ತನಿಖೆಗಾಗಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: MUDA Scam | ಸಿಎಂ ಸಿದ್ದರಾಮಯ್ಯಗೆ ಮಧ್ಯಂತರ ರಿಲೀಫ್ –‌ ಸೆ.9ಕ್ಕೆ ಮತ್ತೆ ವಿಚಾರಣೆ ಮುಂದೂಡಿಕೆ!

Share This Article