ಪ್ರಧಾನಿ ಮೋದಿ ಸಿಂಗಾಪುರ ಭೇಟಿ – ಮಹತ್ವದ 4 ಒಪ್ಪಂದಗಳಿಗೆ ಸಹಿ

Public TV
2 Min Read
PM Modi

ನವದೆಹಲಿ: ಸಿಂಗಾಪುರ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ತಮ್ಮ ಸಹವರ್ತಿ ಲಾರೆನ್ಸ್ ವಾಂಗ್ (Lawrence Wong) ಜೊತೆಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದು, ಡಿಜಿಟಲ್ ತಂತ್ರಜ್ಞಾನ, ಆರೋಗ್ಯ ಸಹಕಾರ, ಕೌಶಲ್ಯ ಸೇರಿ ಪ್ರಮುಖ ನಾಲ್ಕು ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ.

ಡಿಜಿಟಲ್ ತಂತ್ರಜ್ಞಾನಗಳಲ್ಲಿ (Digital Tech) ಸಹಕರಿಸಲು ಭಾರತದ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಮತ್ತು ಸಿಂಗಾಪುರದ ಡಿಜಿಟಲ್ ಅಭಿವೃದ್ಧಿ ಮತ್ತು ಮಾಹಿತಿ ಸಚಿವಾಲಯದ ನಡುವೆ ಮೊದಲ ತಿಳುವಳಿಕಾ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಇದನ್ನೂ ಓದಿ: Bigg Boss Tamil 8: ದೊಡ್ಮನೆ ಆಟಕ್ಕೆ ವಿಜಯ್ ಸೇತುಪತಿ ಹೋಸ್ಟ್- ಪ್ರೋಮೋ ಔಟ್

ಈ ಒಪ್ಪಂದವು ಡಿಜಿಟಲ್ ತಂತ್ರಜ್ಞಾನಗಳಾದ ಡಿಪಿಐ, ಸೈಬರ್-ಸೆಕ್ಯುರಿಟಿ, ಸೂಪರ್-ಕಂಪ್ಯೂಟಿಂಗ್, ಕ್ವಾಂಟಮ್ ಕಂಪ್ಯೂಟಿಂಗ್ ಮತ್ತು ಕೃತಕ ಬುದ್ಧಿಮತ್ತೆಯಂತಹ ಉದಯೋನ್ಮುಖ ತಂತ್ರಜ್ಞಾನಗಳ ಕ್ಷೇತ್ರಗಳಲ್ಲಿ ಇದು ಉಭಯ ದೇಶಗಳ ನಡುವೆ ನಿಕಟ ಸಹಕಾರವನ್ನು ಸುಲಭಗೊಳಿಸಲು ಸಹಾಯ ಮಾಡುತ್ತದೆ. ಇದನ್ನೂ ಓದಿ: ಕೊಲೆಗೂ ಮುನ್ನ ದರ್ಶನ್‌ ಪಾರ್ಟಿ ಮಾಡಿದ್ದ ಸ್ಟೋನಿ ಬ್ರೂಕ್‌ ಪಬ್‌ನಲ್ಲಿ ಸ್ಥಳ ಮಹಜರು; ಫೋಟೊ ರಿವೀಲ್‌

ಭಾರತ-ಸಿಂಗಪುರ ಸೆಮಿಕಂಡಕ್ಟರ್ ಪರಿಸರ ವ್ಯವಸ್ಥೆಯ ಪಾಲುದಾರಿಕೆಯ ಕುರಿತಾದ ತಿಳುವಳಿಕಾ ಒಪ್ಪಂದಕ್ಕೆ ಭಾರತದ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಮತ್ತು ಸಿಂಗಾಪುರದ ವ್ಯಾಪಾರ ಮತ್ತು ಕೈಗಾರಿಕಾ ಸಚಿವಾಲಯ ಸಹಿ ಮಾಡಿದೆ. ಈ ಒಪ್ಪಂದದ ಅಡಿಯಲ್ಲಿ, ಭಾರತ ಮತ್ತು ಸಿಂಗಾಪುರಗಳು ಸೆಮಿಕಂಡಕ್ಟರ್ (Semiconductor) ಕ್ಲಸ್ಟರ್ ಅನ್ನು ಅಭಿವೃದ್ಧಿಪಡಿಸಲು ಮತ್ತು ಸೆಮಿಕಂಡಕ್ಟರ್ ವಿನ್ಯಾಸ ಮತ್ತು ಉತ್ಪಾದನೆಯಲ್ಲಿ ಪ್ರತಿಭೆಯನ್ನು ಬೆಳೆಸುವಲ್ಲಿ ಸಹಕರಿಸುತ್ತವೆ.

PM Modi 3

ಆರೋಗ್ಯ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ಸಹಕಾರಕ್ಕಾಗಿ ಭಾರತದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮತ್ತು ಸಿಂಗಾಪುರದ ಆರೋಗ್ಯ ಸಚಿವಾಲಯವು ಮತ್ತೊಂದು ತಿಳುವಳಿಕಾ ಒಪ್ಪಂದಕ್ಕೆ ಸಹಿ ಹಾಕಿದೆ. ಈ ಒಪ್ಪಂದವು ಪರಸ್ಪರ ಆರೋಗ್ಯ ಕ್ಷೇತ್ರಗಳಲ್ಲಿ ಸಂಶೋಧನೆ ಮತ್ತು ನಾವೀನ್ಯತೆಗಳ ಜಂಟಿ ಪ್ರಯತ್ನಗಳನ್ನು ಸುಗಮಗೊಳಿಸುತ್ತದೆ. ಆರೋಗ್ಯ ಮತ್ತು ಔಷಧೀಯ ಕ್ಷೇತ್ರಗಳಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿಯಲ್ಲಿ ನಿಕಟ ಸಹಕಾರವನ್ನು ಉತ್ತೇಜಿಸುತ್ತದೆ. ಈ ಒಪ್ಪಂದವು ಸಿಂಗಾಪುರದಲ್ಲಿ ಭಾರತೀಯ ಆರೋಗ್ಯ ವೃತ್ತಿಪರರನ್ನು ಉತ್ತೇಜಿಸುವ ಪ್ರಯತ್ನಗಳಿಗೆ ಪೂರಕವಾಗಲಿದೆ.

PM Modi 2

ಶೈಕ್ಷಣಿಕ ಸಹಕಾರ ಮತ್ತು ಕೌಶಲ್ಯ ಅಭಿವೃದ್ಧಿಯ ಅಂತಿಮ ಒಪ್ಪಂದಕ್ಕೆ ಭಾರತದ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯ ಮತ್ತು ಸಿಂಗಾಪುರದ ಶಿಕ್ಷಣ ಸಚಿವಾಲಯ ಸಹಿ ಮಾಡಿದೆ. ಈ ಒಪ್ಪಂದವು ತಾಂತ್ರಿಕ ಮತ್ತು ವೃತ್ತಿಪರ ಶಿಕ್ಷಣ ಮತ್ತು ತರಬೇತಿಯ ಕ್ಷೇತ್ರಗಳಲ್ಲಿ ನಿಕಟ ಸಹಕಾರವನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ ಮತ್ತು ಕೌಶಲ್ಯ ಅಭಿವೃದ್ಧಿಯಲ್ಲಿ ನಡೆಯುತ್ತಿರುವ ಸಕ್ರಿಯ ಸಹಯೋಗಕ್ಕೆ ಪೂರಕವಾಗಿರುತ್ತದೆ. ಇದನ್ನೂ ಓದಿ: ಅಗ್ನಿಪಥ್‌ನಲ್ಲಿ ಬದಲಾವಣೆ? – ಯೋಜನೆ ಪರಿಷ್ಕರಣೆಗೆ ರಕ್ಷಣಾ ಇಲಾಖೆ ಶಿಫಾರಸು

Share This Article