ಬಾಕ್ಸ್‌ನಲ್ಲಿ ಬಿರಿಯಾನಿ ತಂದ ಕಾರಣಕ್ಕೆ ನರ್ಸರಿ ವಿದ್ಯಾರ್ಥಿಯನ್ನು ಅಮಾನತುಗೊಳಿಸಿದ ಪ್ರಾಂಶುಪಾಲ

Public TV
1 Min Read
chicken biryani

ಲಕ್ನೋ: ಶಾಲೆಗೆ ಊಟದ ಬಾಕ್ಸ್‌ನಲ್ಲಿ ಬಿರಿಯಾನಿ ತಂದ ಆರೋಪದ ಮೇಲೆ ನರ್ಸರಿ ವಿದ್ಯಾರ್ಥಿಯನ್ನು ಪ್ರಾಂಶುಪಾಲರು ಅಮಾನತುಗೊಳಿಸಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಅಮ್ರೋಹಾದ (Amroha) ಖಾಸಗಿ ಶಾಲೆಯಲ್ಲಿ ನಡೆದಿದೆ. ಪ್ರಾಂಶುಪಾಲರ ಜೊತೆಗೆ ಮಗುವಿನ ತಾಯಿ ತೀವ್ರ ವಾಗ್ವಾದ ನಡೆಸಿದ ವಿಡಿಯೋ ವೈರಲ್ ಆದ ಬಳಿಕ ಘಟನೆ ಬೆಳಕಿಗೆ ಬಂದಿದೆ.

ನಮ್ಮ ದೇವಸ್ಥಾನಗಳನ್ನು ಕೆಡವಿ ಶಾಲೆಗೆ ನಾನ್ ವೆಜ್ ತರುವ ಇಂತಹ ಮಕ್ಕಳಿಗೆ ನೈತಿಕತೆಯನ್ನು ಕಲಿಸಲು ನಾವು ಬಯಸುವುದಿಲ್ಲ ಎಂದು ಪ್ರಾಂಶುಪಾಲರು ತಾಯಿಗೆ ಹೇಳುವುದು ವಿಡಿಯೋದಲ್ಲಿ ರೆಕಾರ್ಡ್ ಆಗಿದೆ. ಎಲ್ಲರಿಗೂ ನಾನ್ ವೆಜ್ ತಿನ್ನಿಸಿ ಅವರನ್ನು ಇಸ್ಲಾಂಗೆ ಪರಿವರ್ತಿಸುವ ಬಗ್ಗೆ ಬಾಲಕ ಮಾತನಾಡಿದ್ದಾನೆ ಎಂದು ಅವರು ಆರೋಪಿಸಿದ್ದಾರೆ.ಇದನ್ನೂ ಓದಿ: ಮಂತ್ರಾಲಯ ಗುರುರಾಯರ ಮೊರೆ ಹೋದ ನಟ ದರ್ಶನ್‌ ಪತ್ನಿ

ಮಹಿಳೆ ಪ್ರಾಂಶುಪಾಲರ ಆರೋಪಗಳನ್ನು ತಳ್ಳಿಹಾಕಿದ್ದಾರೆ. ತನ್ನ ಮಗನಂತಹ 7 ವರ್ಷದ ಹುಡುಗ ಅಂತಹ ವಿಷಯಗಳ ಬಗ್ಗೆ ಮಾತನಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ, ಅದಕ್ಕೆ ಪ್ರಾಂಶುಪಾಲರು ಮಗು ಮನೆಯಲ್ಲಿ ಎಲ್ಲವನ್ನೂ ಕಲಿಯುತ್ತದೆ, ಅವರ ಪೋಷಕರು ಕಲಿಸುತ್ತಾರೆ. ಇತರ ವಿದ್ಯಾರ್ಥಿಗಳ ಪೋಷಕರಿಗೆ ಸಮಸ್ಯೆ ಇದ್ದ ಕಾರಣ ಶಾಲೆಯ ರಿಜಿಸ್ಟರ್‌ನಿಂದ ವಿದ್ಯಾರ್ಥಿಯ ಹೆಸರನ್ನು ತೆಗೆದುಹಾಕಲಾಗಿದೆ ಎಂದು ಪ್ರಾಂಶುಪಾಲರು ಹೇಳಿದ್ದಾರೆ.

ಪ್ರಾಂಶುಪಾಲರ ಹೇಳಿಕೆಗೆ ಮಗುವಿನ ತಾಯಿ, ಶಾಲೆಯಲ್ಲಿ ವಿದ್ಯಾರ್ಥಿಗಳು ದೇಶದ ಹಿಂದೂ-ಮುಸ್ಲೀಂ ಸಮಸ್ಯೆಗಳ ಬಗ್ಗೆ ವಾದಿಸುತ್ತಾರೆ. ಮತ್ತೊಂದು ವಿದ್ಯಾರ್ಥಿ ತಮ್ಮ ಮಗನಿಗೆ ಹೊಡೆದು ಆಗಾಗ್ಗೆ ತೊಂದರೆ ನೀಡುತ್ತಿದೆ ಎಂದು ಆರೋಪಿಸಿದ್ದಾರೆ.ಇದನ್ನೂ ಓದಿ: ನನ್ನನ್ನು, ದೇವೇಗೌಡರನ್ನು ಮುಗಿಸೋಕೆ ಯಾರಿಂದಲೂ ಆಗಲ್ಲ: ಹೆಚ್.ಡಿ.ರೇವಣ್ಣ

ಈ ವೇಳೆ ಪ್ರಾಂಶುಪಾಲರು, ಮಹಿಳೆ ಮತ್ತೊಬ್ಬ ವಿದ್ಯಾರ್ಥಿಯ ಮೇಲೆ ಆರೋಪ-ಪ್ರತ್ಯಾರೋಪಗಳನ್ನು ಮಾಡುವ ಮೂಲಕ ಶಾಲೆಯನ್ನು ದಾರಿತಪ್ಪಿಸಲು ಪ್ರಯತ್ನಿಸುತ್ತಿದ್ದಾಳೆ ಎಂದು ಹೇಳಿದ್ದಾರೆ.

ಸುಮಾರು 7 ನಿಮಿಷಗಳ ಅವಧಿಯ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಅಮ್ರೋಹಾ ಪೊಲೀಸರು, ಜಿಲ್ಲಾ ಶಾಲಾ ಇನ್ಸ್‌ಪೆಕ್ಟರ್‌ (DIS) ಕ್ರಮಕ್ಕೆ ಮುಂದಾಗಿದ್ದಾರೆ ಮತ್ತು ಈ ವಿಷಯದಲ್ಲಿ ತನಿಖೆ ಮತ್ತು ಮುಂದಿನ ಕ್ರಮ ತೆಗೆದುಕೊಳ್ಳಲು ಮೂರು ಸದಸ್ಯರ ವಿಚಾರಣಾ ಸಮಿತಿಯನ್ನು ರಚಿಸಲಾಗಿದೆ ಎಂದು ತಿಳಿಸಿದ್ದಾರೆ.

Share This Article