Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರೀತಿಯಿಂದ ಸುಧಾಕರ್ ಸವಾಲನ್ನು ಸ್ವೀಕರಿಸುತ್ತೇನೆ: ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪ್ರೀತಿಯಿಂದ ಸುಧಾಕರ್ ಸವಾಲನ್ನು ಸ್ವೀಕರಿಸುತ್ತೇನೆ: ಡಿಕೆಶಿ

Bengaluru City

ಪ್ರೀತಿಯಿಂದ ಸುಧಾಕರ್ ಸವಾಲನ್ನು ಸ್ವೀಕರಿಸುತ್ತೇನೆ: ಡಿಕೆಶಿ

Public TV
Last updated: September 7, 2024 7:55 pm
Public TV
Share
3 Min Read
dk shivakumar 1 1
SHARE

ಬೆಂಗಳೂರು: ಎತ್ತಿನಹೊಳೆ ನೀರನ್ನು ಚಿಕ್ಕಬಳ್ಳಾಪುರ ಹಾಗೂ ಕೋಲಾರ ಭಾಗಕ್ಕೆ ಎರಡು ವರ್ಷಗಳಲ್ಲಿ ಹರಿಸಿದರೆ ಡಿಕೆ ಶಿವಕುಮಾರ್ (D K Shivakumar) ಅವರನ್ನು ಭಗೀರಥ ಎಂದು ಕರೆಯುತ್ತೇನೆ ಎನ್ನುವ ಸಂಸದ ಸುಧಾಕರ್ (Dr K Sudhakar) ಅವರ ಹೇಳಿಕೆಯ ಬಗ್ಗೆ ಕೇಳಿದಾಗ, ಕೆ.ಸುಧಾಕರ್ ಅವರು ಸವಾಲು ಹಾಕಿದ್ದಾರೆ. ಈ ಸವಾಲನ್ನು ನಾನು ಪ್ರೀತಿ, ಗೌರವಗಳಿಂದ ಸ್ವೀಕರಿಸುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ (Bengaluru) ಮಾಧ್ಯಮಗಳ ಮುಂದೆ ಮಾತನಾಡಿದ ಅವರು, ಇದು ನನ್ನ ಜವಾಬ್ದಾರಿ ಹಾಗೂ ಸಲಹೆ ಎಂದು ಭಾವಿಸುತ್ತೇನೆ. ಎತ್ತಿನಹೊಳೆ ಭೂಮಿ ಪೂಜೆಯಲ್ಲಿ ಅವರೂ ಇದ್ದರು. ಚಿಕ್ಕಬಳ್ಳಾಪುರ ಮತ್ತು ಕೋಲಾರ ಭಾಗಕ್ಕೆ ನೀರು ದೊರೆಯಲಿ ಎಂಬುದು ಅವರ ಆಸೆ. ಅವರ ಆಸೆ ಈಡೇರಿಸುವ ಕೆಲಸ ಮಾಡೋಣ ಎಂದರು. ಇದನ್ನೂ ಓದಿ: ರಸ್ತೆ ದಾಟುತ್ತಿದ್ದ ವ್ಯಕ್ತಿ ಮೇಲೆ ಹರಿದ ಕಾರು – 10 ಮೀಟರ್ ಎಳೆದೊಯ್ದು ಚಾಲಕ ಎಸ್ಕೇಪ್!

DK Shivakumar Ettinahole Project 3

ಕೋಲಾರ ಭಾಗಕ್ಕೆ ಎತ್ತಿನಹೊಳೆ ನೀರು ತರಬೇಕು ಎಂದು ವೀರಪ್ಪ ಮೊಯಿಲಿ, ಕೆ.ಎಚ್.ಮುನಿಯಪ್ಪ, ಸುಬ್ಬಾರೆಡ್ಡಿ, ಶಿವಶಂಕರ್ ರೆಡ್ಡಿ, ರಮೇಶ್ ಕುಮಾರ್, ಕೃಷ್ಣಭೈರೇಗೌಡ ಹಾಗೂ ಸುಧಾಕರ್ ಸೇರಿದಂತೆ ಅನೇಕರು ಕುಡಿಯುವ ನೀರು ಹಾಗೂ ಶಾಶ್ವತ ನೀರಾವರಿಗಾಗಿ ಹೋರಾಟ ಮಾಡಿದ್ದಾರೆ. ಕೋಲಾರ ಭಾಗದ ಜನರ ನೀರಿನ ಸಂಕಷ್ಟ ನನಗೆ ಅರಿವಿದೆ ಎಂದರು. ಇದನ್ನೂ ಓದಿ: ಕಾಂಗ್ರೆಸ್‌ನಲ್ಲಿ ನಾನು ಸಿಎಂ‌ ಆಗ್ತೀನಿ, ಸೀನಿಯಾರಿಟಿ ಬೇಕಿಲ್ಲ: ಎಂ.ಬಿ ಪಾಟೀಲ್‌

ಖಾಸಗಿ ಕಾರ್ಯಕ್ರಮದ ನಿಮಿತ್ತ ನಾನು ಊರಿನಲ್ಲಿ ಇರುವುದಿಲ್ಲ. ಅನಂತರ ಎತ್ತಿನಹೊಳೆ ಯೋಜನೆಯಲ್ಲಿ ತುಮಕೂರು, ದೊಡ್ಡಬಳ್ಳಾಪುರ ಭಾಗದ ಸಮಸ್ಯೆಗಳ ವಿವರಣೆ ಹಾಗೂ ಅರಣ್ಯ ಭೂಮಿ ಸ್ವಾಧೀನ ತೊಂದರೆಗಳನ್ನು ಮುಖ್ಯಮಂತ್ರಿಗಳ ಬಳಿ ಒಂದು ವಾರಗಳ ನಂತರ ಮಾತನಾಡಿ ಬಗೆಹರಿಸಲಾಗುವುದು ಎಂದು ಹೇಳಿದರು. ಇದನ್ನೂ ಓದಿ: ಮಡಿಕೇರಿಯಲ್ಲಿ ಶ್ರೀಮಂತ ಗಣಪ ಮತ್ತಷ್ಟು ಸಿರಿವಂತ!

ಇನ್ನು ಒಂದು ತಿಂಗಳಲ್ಲಿ ಕೋವಿಡ್ ವರದಿಯನ್ನು ನೀಡುವಂತೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನವಾಗಿರುವ ಕಾರಣಕ್ಕೆ ಸುಧಾಕರ್ ಅವರು ನಿಮ್ಮನ್ನು ಪದೇಪದೇ ಹೊಗಳುತ್ತಿದ್ದಾರೆಯೇ ಎಂದು ಕೇಳಿದಾಗ, ನನಗೆ ಕೋವಿಡ್ ವರದಿಯ ಬಗ್ಗೆ ಏನು ಗೊತ್ತಿಲ್ಲ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಾನು ಭಾಗವಹಿಸಿರಲಿಲ್ಲ. ಸಕಲೇಶಪುರದ ಎತ್ತಿನಹೊಳೆಯಲ್ಲಿದ್ದೆ ಎಂದರು. ಇದನ್ನೂ ಓದಿ: 500 ಮೀಟರ್ ಓಡಿ ರೈಲ್ವೆ ದುರಂತ ತಪ್ಪಿಸಿದ ನಿರ್ವಾಹಕ

ಸುಧಾಕರ್ ಈಗ ಎಂಪಿ ಅಲ್ಲವೇ?
ಮಾತಿನ ಮಧ್ಯೆ ಡಿಸಿಎಂ ಅವರು, ಸುಧಾಕರ್ ಈಗ ಎಂಪಿ ಅಲ್ಲವೇ? ಎಂದು ಮಾಧ್ಯಮದವರ ಬಳಿ ಪ್ರಶ್ನಿಸಿದರು. ನಮ್ಮಲ್ಲಿ ಇಬ್ಬರು ಸುಧಾಕರ್ ಇದ್ದಾರೆ. ಇವರೂ ಸೇರಿ ಮೂರು ಜನ ಆಗುತ್ತಾರೆ. ನಮ್ಮವರು ಇಬ್ಬರೂ ಮಂತ್ರಿಗಳು. ಇವರು ಸಂಸದರು ಎಂದಾಗ, ಮಾಧ್ಯಮದವರು ‘ಮಾಜಿ ಸಚಿವರು ಆಗಿದ್ದರು’ ಎಂದು ಹೇಳಿದಾಗ ಮಾಜಿ ಸಚಿವ ಸುಧಾಕರ್ ಎಂದರು. ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಹಳಿ ತಪ್ಪಿದ ರೈಲು – ತಪ್ಪಿದ ಭಾರೀ ಅನಾಹುತ

ಗೌರಿ ಹಬ್ಬದ ದಿನ ಗಂಗೆಯನ್ನು ಪೂಜೆ ಮಾಡಿ ಸಂಭ್ರಮ ಪಟ್ಟಿದ್ದೇವೆ. ಇದನ್ನು ಒಂದು ಒಂದಷ್ಟು ಜನ ನೋಡಿ ಸಂಭ್ರಮಪಟ್ಟಿದ್ದಾರೆ ಟೀಕೆ ಮಾಡಿದ್ದಾರೆ. ನಮ್ಮ ಕೆಲಸವನ್ನು ನಾವು ಮಾಡಿದ್ದೇವೆ. ಬರಗಾಲದ ಛಾಯೆ ದೂರವಾಗಿ, ಉತ್ತಮ ಮಳೆಬಿದ್ದು ಜಲಾಶಯಗಳು ತುಂಬಿವೆ. ಬಯಲು ಸೀಮೆಯಲ್ಲಿ ಒಂದಿಷ್ಟು ಕಡೆ ಮಳೆ ಕಡಿಮೆಯಾಗಿದೆ. ಮಂಡ್ಯ ಬೆಂಗಳೂರು ಗ್ರಾಮಾಂತರ ತುಮಕೂರು ಈ ಭಾಗದಲ್ಲಿ ಇನ್ನೂ ಕೆರೆಗಳು ತುಂಬಿಲ್ಲ. ಬಿಜೆಪಿ ಆಡಳಿತಾವಧಿಯಲ್ಲಿ ಎತ್ತಿನಹೊಳೆ ಯೋಜನೆ ಪ್ರಗತಿ ಕಂಡಿರಲಿಲ್ಲ. ಇದಕ್ಕೆ ನಾನಾ ಕಾರಣಗಳು ಇರಬಹುದು ಎಂದು ಹೇಳಿದರು. ಇದನ್ನೂ ಓದಿ: ರಷ್ಯಾ ವಿರುದ್ಧ ಉಕ್ರೇನ್‌ ಪ್ರತೀಕಾರದ ದಾಳಿ – ಬೆಂಕಿ ಉಂಡೆ ಉಗುಳುವ ʻಡ್ರ್ಯಾಗನ್‌ ಡ್ರೋನ್‌ʼ ಅಸ್ತ್ರ ಪ್ರಯೋಗ

TAGGED:bengaluruDK Shivakumardr. k sudhakarಕೆ.ಸುಧಾಕರ್ಡಿಕೆ ಶಿವಕುಮಾರ್ಬೆಂಗಳೂರು
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

ಸಾಂದರ್ಭಿಕ ಚಿತ್ರ
Bagalkot

ಇನ್ಮುಂದೆ ಬುಕ್‌ ಮಾಡಿದ ದಿನವೇ ಗೃಹ ಬಳಕೆ ಸಿಲಿಂಡರ್ ವಿತರಣೆ – ಗ್ಯಾಸ್ ಏಜೆನ್ಸಿಗಳಿಗೆ ಸೂಚನೆ

Public TV
By Public TV
12 minutes ago
MQ 4C Triton
Latest

ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ 1,859 ಕೋಟಿ ಮೌಲ್ಯದ MQ-4C ಟ್ರೈಟಾನ್ ಡ್ರೋನ್ ನಾಪತ್ತೆ

Public TV
By Public TV
33 minutes ago
kalaburagi train
Kalaburagi

ಪಂಢರಪುರ-ತಿರುಪತಿ, ಬೆಂಗಳೂರು ಕಂಟೋನ್ಮೆಂಟ್-ಕಲಬುರಗಿ, SMVT ಬೆಂಗಳೂರು-ಬೀದರ್ ವಿಶೇಷ ರೈಲುಗಳ ಸೇವೆ ಮುಂದುವರಿಕೆ

Public TV
By Public TV
56 minutes ago
Match Rain RR vs RCB
Cricket

IPL 2026 | RR Vs RCB ಪಂದ್ಯಕ್ಕೆ ಮಳೆ ಅಡ್ಡಿ, ಟಾಸ್‌ ವಿಳಂಬ

Public TV
By Public TV
1 hour ago
Bengaluru Rain 2
Bengaluru City

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಆರಂಭ – ಬೆಂಗಳೂರಲ್ಲಿ ಬಿರುಗಾಳಿ ಸಹಿತ ಮಳೆ

Public TV
By Public TV
2 hours ago
pune murder
Crime

ಅಕ್ರಮ ಸಂಬಂಧಕ್ಕೆ ಅಡ್ಡಿ ಅಂತ 6 ವರ್ಷದ ಹೆತ್ತ ಮಗನನ್ನೇ ಕೊಂದ ಪಾಪಿ ತಾಯಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?