ಅಮೃತ್ ಯೋಜನೆ ಉಲ್ಲೇಖಿಸಿ ರಾಜಮನೆತನಕ್ಕೆ ಟಾಂಗ್‌ ನೀಡಿ ಚಾಮುಂಡಿ ಬೆಟ್ಟ ಪ್ರಾಧಿಕಾರ ಪರ ಪ್ರತಾಪ್ ಸಿಂಹ ಬ್ಯಾಟಿಂಗ್‌

Public TV
2 Min Read
mysuru pratap simha

ಮೈಸೂರು: ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ  ಪ್ರಾಧಿಕಾರ (Chamundeshwari Development Authority) ಸ್ಥಾಪನೆಗೆ ಮೈಸೂರಿನ ರಾಜಮನೆತನ ವಿರೋಧ ವ್ಯಕ್ತಪಡಿಸಿರುವುದಕ್ಕೆ ಮಾಜಿ ಸಂಸದ ಪ್ರತಾಪ್ ಸಿಂಹ (Pratap Simha) ಟಾಂಗ್ ನೀಡಿ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.

ಸಿಎಂ ಸಿದ್ದರಾಮಯ್ಯರನ್ನು (CM Siddaramaiah) ಕೆಲವು ಸೈದ್ಧಾಂತಿಕ ವಿಚಾರದಲ್ಲಿ ಮಾತ್ರ ವಿರೋಧಿಸುತ್ತೇನೆ. ಬೆಟ್ಟದ ಯದ್ವಾತದ್ವಾ ಬೆಳವಣಿಗೆ ನಿಯಂತ್ರಿಸಲು ನ್ಯೂನತೆಗಳನ್ನು ಸರಿದೂಗಿಸಲು ಪ್ರಾಧಿಕರ ಅವಶ್ಯಕತೆ ಇದೆ ಎಂದು ಹೇಳಿದ್ದಾರೆ.

ಬೆಟ್ಟಕ್ಕೆ ಪೋಲಿಸ್ ಠಾಣೆ ಹಾಗೂ ಆಸ್ಪತ್ರೆ ಬೇಕು. ಇದೆಲ್ಲ ಆಗಬೇಕಾದರೆ ಒಂದು ಪ್ರಾಧಿಕಾರ ಬೇಕೇ ಬೇಕು. ಈ ಹಿಂದೆ ಬಿಜೆಪಿ ಸರ್ಕಾರದಲ್ಲೂ ಪ್ರಾಧಿಕಾರ ಬೇಕೆಂದು ಧ್ವನಿ ಎತ್ತಿದ್ದೆವು. ಸಿದ್ದರಾಮಯ್ಯ ಅವರು ಪ್ರಾಧಿಕಾರ ರಚನೆ ಮಾಡಿದ್ದಾರೆ. ಖಂಡಿತ ಇದು ಒಳ್ಳೆಯ ಕೆಲಸ ಎಂದು ಹೇಳಿದರು.

Siddaramaiah Sri Chamundeshwari Development Authority Meeting 3

ಆಸ್ತಿ ಗಲಾಟೆಯ ಬಗ್ಗೆ ನಾನು ಮಾತನಾಡುವುದಿಲ್ಲ. ಆದರೆ ದೇವರು ಭಕ್ತರಿಗೆ ಸೇರಬೇಕು. ಭಕ್ತರಿಗೆ ಸೌಲಭ್ಯ ಕಲ್ಪಿಸಬೇಕಾಗಿದ್ದು ಸರ್ಕಾರದ ಕರ್ತವ್ಯ ಎಂದು ಹೇಳುವ ಮೂಲಕ ಚಾಮುಂಡಿ ಬೆಟ್ಟದ ಪ್ರಾಧಿಕಾರ ಪರ ಬ್ಯಾಟಿಂಗ್‌ ಮಾಡಿದರು.

ಅಮೃತ್ ಯೋಜನೆ ಕುಡಿಯುವ ನೀರು ಬೆಟ್ಟಕ್ಕೆ ತಲುಪದೇ ಇರಲು ಕಾರಣ ಯಾರು? ನಾನು ಹೇಳಿದರೆ ವಿವಾದ ಆಗುತ್ತದೆ. ಪೈಪ್‌ಲೈನ್ ಎಲ್ಲಿ ತಡೆದು ನಿಂತಿದೆ? ನೀವೇ ಹೋಗಿ ಹುಡುಕಿ ಎಂದು ಹೇಳುವ ಮೂಲಕ ಪರೋಕ್ಷವಾಗಿ ಸಂಸದ ಯದುವೀರ್ ಒಡೆಯರ್‌ಗೆ ಪ್ರತಾಪ್ ಸಿಂಹ ಟಾಂಗ್ ನೀಡಿದರು. ಇದನ್ನೂ ಓದಿ: ಬಾಲಿವುಡ್‌ ನಟಿ ಮಲೈಕಾ ಅರೋರಾ ತಂದೆ ಆತ್ಯಹತ್ಯೆ

Yaduveer Wadiyar 1 1

ಯುದವೀರ್‌ ಹೇಳಿದ್ದೇನು?
ಚಾಮುಂಡಿ ಬೆಟ್ಟ ನಮ್ಮ ಸಂಸ್ಥಾನಕ್ಕೆ ಸೇರಿದ್ದು. ಚಾಮುಂಡಿ ಬೆಟ್ಟ ಈಗ ಹೇಗಿದೆಯೋ ಮುಂದೆಯೂ ಹಾಗೆಯೇ ಇರಲಿ. ಚಾಮುಂಡಿ ಬೆಟ್ಟ ಪ್ರಾಧಿಕಾರ ರಚನೆಗೆ ಕೋರ್ಟ್ ತಡೆಯಾಜ್ಞೆ ನೀಡಿದೆ. ಪ್ರಾಧಿಕಾರದ ರಚನೆ ಅಗತ್ಯವಿಲ್ಲ. ದೇವಸ್ಥಾನದ (Temple) ಜೊತೆ ಯಾವ ಸಂಸ್ಥಾನದ ಸಂಬಂಧ ಇದೆಯೋ ಆ ಸಂಸ್ಥಾನಕ್ಕೆ ದೇವಸ್ಥಾನ ಸೇರಬೇಕು ಎಂದು ಪರೋಕ್ಷವಾಗಿ ಯದುವೀರ್‌ ಒಡೆಯರ್‌ (Yaduveer Wadiyar) ಚಾಮುಂಡಿ ಬೆಟ್ಟ ತಮ್ಮ ಆಸ್ತಿ ಎಂದು ಹಿಂದೆ ಹೇಳಿದ್ದರು. ಇದನ್ನೂ ಓದಿ: ನನಗೆ ಈ ಟಿವಿ ಬೇಡ, ತೆಗೆದುಕೊಂಡು ಹೋಗಿ: ದರ್ಶನ್‌

ಸುದ್ದಿಯ ಹಿನ್ನೆಲೆ ಏನು?
ಚಾಮುಂಡಿ ಬೆಟ್ಟವನ್ನು ಸಮಗ್ರ ಅಭಿವೃದ್ಧಿ ಮಾಡುವ ಉದ್ದೇಶದಿಂದ ಸರ್ಕಾರ ಚಾಮುಂಡೇಶ್ವರಿ ಕ್ಷೇತ್ರದ ಅಭಿವೃದ್ಧಿ ಪ್ರಾಧಿಕಾರ ರಚಿಸಿದೆ. ಈ ಪ್ರಾಧಿಕಾರ ರಚನೆಗೆ ರಾಜಮನೆತನ ವಿರೋಧ ವ್ಯಕ್ತಪಡಿಸಿದೆ. ರಾಜಮನೆತನದ ವಿರೋಧದ ನಡೆವೆಯೂ ಸೆ.3 ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಪ್ರಧಿಕಾರದ ಮೊದಲ ಸಭೆ ನಡೆದಿತ್ತು. ಈ ಸಭೆ ಕಾನೂನು ಬಾಹಿರ. ಕೋರ್ಟ್ ತಡೆಯಾಜ್ಞೆ ನಡುವೆಯೂ ಸರ್ಕಾರ ಪ್ರಾಧಿಕಾರದ ಸಭೆ ನಡೆಸಿರುವುದುದು ಸರಿಯಲ್ಲ ಎಂದು ಪ್ರಮೋದಾದೇವಿ, ಯದುವೀರ್ ಆಕ್ಷೇಪ ವ್ಯಕ್ತಪಡಿಸಿದ್ದರು.

mys pramoda devi

ಕೋರ್ಟ್‌ನಲ್ಲಿದೆ ಪ್ರಕರಣ
ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚನೆ ಸಿಂಧುತ್ವ ಪ್ರಶ್ನಿಸಿ ಮೈಸೂರು ಮಹಾರಾಜ ಮನೆತನದ ರಾಣಿ ಪ್ರಮೋದಾದೇವಿ ಒಡೆಯರ್‌ ಹೈಕೋರ್ಟ್‌ನಲ್ಲಿ ತಕರಾರು ಅರ್ಜಿ ಸಲ್ಲಿಸಿದ್ದಾರೆ.

ವಿಚಾರಣೆಯ ವೇಳೆ ರಾಜವಂಶ ಪರ ವಕೀಲರು, ಚಾಮುಂಡೇಶ್ವರಿ ಕ್ಷೇತ್ರದ ಮಾಲೀಕತ್ವದ ಬಗ್ಗೆ ಕಳೆದ 20 ವರ್ಷಗಳಿಗೂ ಹಿಂದಿನಿಂದ ನ್ಯಾಯಾಲಯದಲ್ಲಿ ಕಾನೂನು ಹೋರಾಟ ನಡೆದಿದೆ. ರಾಜಮನೆತನ ಸಲ್ಲಿಸಿದ್ದ ಅರ್ಜಿಯನ್ನು 2004ರಲ್ಲಿ ಹೈಕೋರ್ಟ್‌ ವಜಾಗೊಳಿಸಿದೆ. ಈ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದು ವಿಚಾರಣೆ ಹಂತದಲ್ಲಿದೆ ಎಂದು ಗಮನಕ್ಕೆ ತಂದಿದ್ದರು.

ಈ ವಾದವನ್ನು ಅಲಿಸಿದ ಬಳಿಕ ಹೈಕೋರ್ಟ್‌ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಸಂಬಂಧಿಸಿದ ಸ್ಥಿರ ಮತ್ತು ಚರ ಆಸ್ತಿಗಳನ್ನು ಸದ್ಯ ಯಾವುದೇ ರೀತಿಯಲ್ಲಿ ಬದಲಾವಣೆ ಮಾಡಬಾರದು ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿ ಸೆ.25ಕ್ಕೆ ಅರ್ಜಿಯನ್ನು ಮುಂದೂಡಿತ್ತು.

 

Share This Article