ದುರುಳರು ಯಾವುದೇ ಧರ್ಮದವರಾಗಿರಲಿ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಸಿಎಂ

Public TV
1 Min Read
Siddaramaiah Sri Chamundeshwari Development Authority Meeting 2

ಬೆಂಗಳೂರು: ದುರುಳರು ಯಾವುದೇ ಜಾತಿ, ಧರ್ಮದವರಾಗಿರಲಿ ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ ಅವರು ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ (Nagamanagla) ಗಣೇಶ ವಿಸರ್ಜನೆಯ (Ganesh Procession) ವೇಳೆ ನಡೆದಿರುವ ಕಲ್ಲುತೂರಾಟವು ಸಮಾಜದ ಶಾಂತಿ, ನೆಮ್ಮದಿಗೆ ಧಕ್ಕೆತರುವ ಕಿಡಿಗೇಡಿಗಳ ದುಷ್ಕೃತ್ಯ ಎನ್ನುವುದು ನಿಸ್ಸಂಶಯ. ಇದನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಸಂಬಂಧ ಈಗಾಗಲೇ 50ಕ್ಕೂ ಅಧಿಕ ಜನರನ್ನು ಬಂಧಿಸಲಾಗಿದ್ದು, ಸಮಾಜದ ಶಾಂತಿ, ಸುವ್ಯವಸ್ಥೆ ಕಾಪಾಡುವುದೇ ನಮ್ಮ ಮೊದಲ ಆದ್ಯತೆಯಾಗಿದೆ ಎಂದಿದ್ದಾರೆ.

ಕಳೆದ ಒಂದೂವರೆ ವರ್ಷಗಳಿಂದ ಯಾವುದೇ ಗಲಭೆ, ಗಲಾಟೆ, ಹಿಂಸಾಚಾರಗಳು ನಡೆಯದೆ ಸರ್ವಜನಾಂಗದ ಶಾಂತಿಯ ತೋಟದಂತಿದ್ದ ನಾಡನ್ನು, ಧಾರ್ಮಿಕ ನೆಲೆಗಟ್ಟಿನಲ್ಲಿ ವಿಭಜಿಸಲು ಯತ್ನಿಸುವ ದುರುಳರು ಯಾವುದೇ ಜಾತಿ, ಧರ್ಮದವರಾಗಿರಲಿ ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸಾರ್ವಜನಿಕರು ಪ್ರಚೋದನೆಗಳಿಗೆ ಒಳಗಾಗದೇ ಶಾಂತಿ, ಸಂಯಮ ಕಾಪಾಡಿಕೊಳ್ಳುವ ಮೂಲಕ ನಮ್ಮೊಂದಿಗೆ ಸಹಕರಿಸಬೇಕು ಎಂದು ಸಿಎಂ ಮನವಿ ಮಾಡಿದರು.

 

Share This Article