ಜಾಮೀನು ಅರ್ಜಿಯನ್ನು ಹಿಂದಕ್ಕೆ ಪಡೆದ ಪವಿತ್ರಾ ಗೌಡ

Public TV
1 Min Read
PAVITHRA GOWDA RENUKASWAMY

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ (Renukaswamy Murder Case) ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಪವಿತ್ರಾ ಗೌಡ (Pavithra Gowda) ತಮ್ಮ ಜಾಮೀನು ಅರ್ಜಿಯನ್ನು ಹಿಂದಕ್ಕೆ ಪಡೆದಿದ್ದಾರೆ.

ಇಂದು ಹೈಕೋರ್ಟ್‌ ನ್ಯಾ. ಎಸ್ ವಿಶ್ವಜಿತ್ ಶೆಟ್ಟಿ ಅವರ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಿತು. ಈ ವೇಳೆ ನ್ಯಾಯಮೂರ್ತಿಗಳು ಈಗಾಗಲೇ ಪ್ರಕರಣದ ಬಗ್ಗೆ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಲಾಗಿದೆ. ಚಾರ್ಜ್‌ಶೀಟ್‌ ಸಲ್ಲಿಕೆ ಮಾಡುವ ಮೊದಲು ನೀವು ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದೀರಿ. ಹೀಗಾಗಿ ನೀವು ವಾಪಸ್‌ ಸೆಷನ್ಸ್‌ ಕೋರ್ಟ್‌ನಲ್ಲಿ ಜಾಮೀನು ಅರ್ಜಿ (Bail Plea) ಸಲ್ಲಿಕೆ ಮಾಡಬಹುದು ಎಂದು ಸೂಚಿಸಿದರು.

ನ್ಯಾಯಾಧೀಶರಿಂದ ಸೂಚನೆ ಬಂದ ಹಿನ್ನಲೆಯಲ್ಲಿ ಪವಿತ್ರಾ ಗೌಡ ಪರ ವಕೀಲ ಟಾಮಿ ಸೆಬಾಸ್ಟಿಯನ್ ಜಾಮೀನು ಅರ್ಜಿಯನ್ನು ಹಿಂದಕ್ಕೆ ಪಡೆದಿದ್ದಾರೆ.

Share This Article