Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಹುಲ್‌ ಗಾಂಧಿ ಭಾರತದ ನಂ.1 ಭಯೋತ್ಪಾದಕ: ಕೇಂದ್ರ ಸಚಿವ ವಿವಾದಾತ್ಮಕ ಹೇಳಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ರಾಹುಲ್‌ ಗಾಂಧಿ ಭಾರತದ ನಂ.1 ಭಯೋತ್ಪಾದಕ: ಕೇಂದ್ರ ಸಚಿವ ವಿವಾದಾತ್ಮಕ ಹೇಳಿಕೆ

Latest

ರಾಹುಲ್‌ ಗಾಂಧಿ ಭಾರತದ ನಂ.1 ಭಯೋತ್ಪಾದಕ: ಕೇಂದ್ರ ಸಚಿವ ವಿವಾದಾತ್ಮಕ ಹೇಳಿಕೆ

Public TV
Last updated: September 15, 2024 7:59 pm
Public TV
Share
2 Min Read
rahul gandhi Ravneet Singh Bittu
SHARE

– ಲೋಕಸಭೆ ವಿಪಕ್ಷ ನಾಯಕನನ್ನು ಹಿಡಿದುಕೊಟ್ಟವರಿಗೆ ಸೂಕ್ತ ಬಹುಮಾನ ಘೋಷಿಸಿದ ರವನೀತ್‌

ನವದೆಹಲಿ: ರಾಹುಲ್‌ ಗಾಂಧಿ ಭಾರತದ ನಂಬರ್‌ 1 ಭಯೋತ್ಪಾದಕ. ಆತ ಭಾರತೀಯನಲ್ಲ ಎಂದು ಕೇಂದ್ರ ಸಚಿವ ರವನೀತ್‌ ಸಿಂಗ್‌ ಬಿಟ್ಟು (Ravneet Singh Bittu) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರು ಇತ್ತೀಚೆಗೆ ಅಮೆರಿಕಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸಿಖ್ಖರ ಕುರಿತು ನೀಡಿದ್ದ ಹೇಳಿಕೆ ಟೀಕಿಸುವ ಭರದಲ್ಲಿ ಕೇಂದ್ರ ಸಚಿವ ರವನೀತ್‌ ನಾಲಿಗೆ ಹರಿಬಿಟ್ಟಿದ್ದಾರೆ. ರಾಹುಲ್‌ ಗಾಂಧಿ ದೇಶದ ಬಹುದೊಡ್ಡ ಶತ್ರು. ಅವರನ್ನು ಹಿಡಿದುಕೊಟ್ಟವರಿಗೆ ತಕ್ಕ ಬಹುಮಾನ ನೀಡಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ವಿರಾಟ್‌ ಕೊಹ್ಲಿ ನನ್ನ ನಾಯಕತ್ವದಡಿಯಲ್ಲಿ ಆಡಿದ್ದಾರೆ: ತೇಜಸ್ವಿ ಯಾದವ್‌

rahul gandhi america sam pitroda

ಮೊದಲು ಅವರು ಮುಸ್ಲಿಮರನ್ನು ಬಳಸಿಕೊಳ್ಳಲು ಪ್ರಯತ್ನಿಸಿದರು. ಆದರೆ ಅದು ಆಗಲಿಲ್ಲ. ಈಗ ಅವರು ಸಿಖ್ಖರನ್ನು ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ. ರಾಹುಲ್ ಗಾಂಧಿಗೂ ಮೊದಲು ದೇಶದ ಮೋಸ್ಟ್ ವಾಂಟೆಡ್ ವ್ಯಕ್ತಿಗಳು ಈ ಹಿಂದೆ ಇಂತಹ ಹೇಳಿಕೆಗಳನ್ನು ನೀಡಿದ್ದರು. ಭಯೋತ್ಪಾದಕರು ಕೂಡ ರಾಹುಲ್ ಗಾಂಧಿಯವರ ಹೇಳಿಕೆಯನ್ನು ಶ್ಲಾಘಿಸಿದ್ದಾರೆ. ಅಂತಹ ಜನರು ರಾಹುಲ್ ಗಾಂಧಿಯನ್ನು ಬೆಂಬಲಿಸುವುದಾದರೆ, ಇವರು ಕೂಡ ದೇಶದ ನಂ.1 ಭಯೋತ್ಪಾದಕರಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಯುಎಸ್‌ನ ವರ್ಜೀನಿಯಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಿಖ್ಖರ ಉದಾಹರಣೆಯನ್ನು ಉಲ್ಲೇಖಿಸಿ ರಾಹುಲ್ ಗಾಂಧಿ, ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಸ್ಥಿತಿಯ ಕುರಿತು ಹೇಳಿಕೆ ನೀಡಿದ್ದರು. ಇದು ರಾಜಕೀಯ ವಲಯದಲ್ಲಿ ಬಿರುಗಾಳಿ ಎಬ್ಬಿಸಿತ್ತು. ಇದನ್ನೂ ಓದಿ: ನ್ಯಾಯ ಸಿಕ್ಕರೆ ಚಹಾ ಸ್ವೀಕಾರ: ಟ್ರೈನಿ ವೈದ್ಯೆ ಸಾವಿಗೆ ನ್ಯಾಯಕ್ಕಾಗಿ ಒತ್ತಾಯ

ರಾಹುಲ್ ಗಾಂಧಿ ಅವರು ಭಾರತದ ಹೊರಗೆ ಹೆಚ್ಚಿನ ಸಮಯ ಕಳೆದಿದ್ದರಿಂದ ಅವರು ಭಾರತೀಯನಲ್ಲ. ನನ್ನ ಅಭಿಪ್ರಾಯದಲ್ಲಿ ರಾಹುಲ್‌ ಗಾಂಧಿ ಭಾರತೀಯನಲ್ಲ. ಅವರು ತಮ್ಮ ಹೆಚ್ಚಿನ ಸಮಯವನ್ನು ದೇಶದ ಹೊರಗೆ ಕಳೆದಿದ್ದಾರೆ. ಅವರ ಸ್ನೇಹಿತರು ಮತ್ತು ಕುಟುಂಬದವರು ಅಲ್ಲಿಯೇ ಇದ್ದಾರೆ. ಅದಕ್ಕಾಗಿಯೇ ಅವರು ಎಲ್ಲೋ ಹೋಗುವುದರಿಂದ ತಮ್ಮ ದೇಶವನ್ನು ಹೆಚ್ಚು ಪ್ರೀತಿಸುವುದಿಲ್ಲ. ವಿದೇಶದಲ್ಲಿ ಭಾರತದ ಬಗ್ಗೆ ನಕಾರಾತ್ಮಕವಾಗಿ ಮಾತನಾಡುತ್ತಾರೆ ಎಂದು ಕೇಂದ್ರ ಸಚಿವ ಚಾಟಿ ಬೀಸಿದ್ದಾರೆ.

ಭಾರತದಲ್ಲಿ ಹೋರಾಟ ಎಂಬುದು ಕೇವಲ ರಾಜಕೀಯಕ್ಕೆ ಸಂಬಂಧಿಸಿಲ್ಲ. ಒಬ್ಬ ಸಿಖ್‌ ಪೇಟ ಧರಿಸಲು ಅನುಮತಿ ನೀಡುವುದೇ ಅಥವಾ ಗುರುದ್ವಾರಕ್ಕೆ ಹೋಗಲು ಅನುಮತಿ ಇದೆಯೇ ಎಂಬುದಾಗಿದೆ. ಕೇವಲ ಸಿಖ್ಖರು ಮಾತ್ರವಲ್ಲ, ಎಲ್ಲಾ ಧರ್ಮೀಯರು ಮೂಲಭೂತ ಹಕ್ಕಾದ ಧಾರ್ಮಿಕ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ರಾಹುಲ್‌ ಗಾಂಧಿ ಹೇಳಿಕೆ ನೀಡಿದ್ದರು.

TAGGED:Rahul GandhiRavneet Singh Bittuterroristsರವನೀತ್‌ ಸಿಂಗ್‌ ಬಿಟ್ಟುರಾಹುಲ್ ಗಾಂಧಿ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Cabinet Meet
Bengaluru City

ಬಿಡದಿ ಟೌನ್‌ಶಿಪ್‌ಗೆ 18,000 ಕೋಟಿ; ಬೆಂಗಳೂರು-ಬೀದರ್ ಮಧ್ಯೆ ಮತ್ತೆ ವಿಮಾನ ಯಾನಕ್ಕೆ ಸಂಪುಟ ಒಪ್ಪಿಗೆ

Public TV
By Public TV
22 minutes ago
India GDP
Latest

ಮಧ್ಯಪ್ರಾಚ್ಯ ಯುದ್ಧದಿಂದಾಗಿ ದೇಶದ ಜಿಡಿಪಿ ಬೆಳವಣಿಗೆ ಅಪಾಯದಲ್ಲಿದೆ – ಕೇಂದ್ರ ಕಳವಳ

Public TV
By Public TV
1 hour ago
Nepal Airlines
Latest

ಜಮ್ಮು-ಕಾಶ್ಮೀರ, ಲಡಾಖ್‌ ಪಾಕ್‌ನ ಭಾಗ ಅಂತ ತೋರಿಸಿ ಯಡವಟ್ಟು – ನೇಪಾಳದ ಏರ್‌ಲೈನ್ಸ್‌ ಕ್ಷಮೆಯಾಚನೆ

Public TV
By Public TV
2 hours ago
Rajat Patidar Catch
Cricket

Catch Controversy | ಜೇಸನ್‌ ಹೋಲ್ಡರ್‌ ಕ್ಯಾಚ್‌ ವಿವಾದ – ಅಂಪೈರ್‌ ತೀರ್ಪಿನ ವಿರುದ್ಧ ಆಕ್ರೋಶ

Public TV
By Public TV
2 hours ago
Mamata Banerjee 4
Latest

226 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಖಚಿತ – ಟುಡೇಸ್‌ ಚಾಣಕ್ಯ ಸಮೀಕ್ಷೆ ತಳ್ಳಿಹಾಕಿದ ದೀದಿ

Public TV
By Public TV
3 hours ago
Assam CM Himanta Biswa Sarma
Latest

Today’s Chanakya Exit Polls | ಅಸ್ಸಾಂನಲ್ಲಿ ಬಿಜೆಪಿಗೆ ಹ್ಯಾಟ್ರಿಕ್‌ ಗೆಲುವು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?