Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಲಬುರಗಿಯಲ್ಲಿ ದಶಕದ ಬಳಿಕ ಸಚಿವ ಸಂಪುಟ ಸಭೆ- 11,770 ಕೋಟಿ ರೂ. ಅನುದಾನಕ್ಕೆ ಸಂಪುಟ ಅಸ್ತು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕಲಬುರಗಿಯಲ್ಲಿ ದಶಕದ ಬಳಿಕ ಸಚಿವ ಸಂಪುಟ ಸಭೆ- 11,770 ಕೋಟಿ ರೂ. ಅನುದಾನಕ್ಕೆ ಸಂಪುಟ ಅಸ್ತು

Districts

ಕಲಬುರಗಿಯಲ್ಲಿ ದಶಕದ ಬಳಿಕ ಸಚಿವ ಸಂಪುಟ ಸಭೆ- 11,770 ಕೋಟಿ ರೂ. ಅನುದಾನಕ್ಕೆ ಸಂಪುಟ ಅಸ್ತು

Public TV
Last updated: September 17, 2024 11:46 pm
Public TV
Share
3 Min Read
kalaburagi cabinate meeting
SHARE

ಕಲಬುರಗಿ: ಕಲ್ಯಾಣ ಕರ್ನಾಟಕದ (Kalyana Karnataka) ಉತ್ಸವದ ದಿನದಂದೇ ಆ ಭಾಗಕ್ಕೆ ಕಾಂಗ್ರೆಸ್ (Congress) ಸರ್ಕಾರ ಬಿಗ್ ಗಿಫ್ಟ್ ನೀಡಿದೆ. ಕಲಬುರಗಿಯಲ್ಲಿ (Kalaburagi) ದಶಕದ ಬಳಿಕ ಸಂಪುಟ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ (CM Siddaramaiah) ಹಲವು ಮಹತ್ವದ ನಿರ್ಣಯಗಳನ್ನು ಕೈಗೊಂಡಿದ್ದಾರೆ.

ಇಂದು ಚರ್ಚೆಯಾದ ಒಟ್ಟು 56 ವಿಷಯಗಳ ಪೈಕಿ 46 ಕಲ್ಯಾಣ ಕರ್ನಾಟಕಕ್ಕೆ ಸಂಬಂಧಪಟ್ಟಿವೆ. ಸುಮಾರು 12,692 ಕೋಟಿ ಪೈಕಿ ಈ ಭಾಗಕ್ಕೆ 11,770 ಕೋಟಿ ಅನುದಾನ ನೀಡಲಾಗಿದೆ. ಬೀದರ್ ಹಾಗು ರಾಯಚೂರು ಪಟ್ಟಣಗಳನ್ನ ಮಹಾನಗರ ಪಾಲಿಕೆಗಳನ್ನಾಗಿ ಮೇಲ್ದರ್ಜೆಗೆ ಏರಿಸಲಾಗಿದೆ. ಕಲ್ಯಾಣ ಕರ್ನಾಟಕದ ಪ್ರತ್ಯೇಕ ಸಚಿವಾಲಯಕ್ಕೆ ಅನುಮೋದನೆ ಕೊಡಲಾಗಿದೆ. ಇದನ್ನೂ ಓದಿ: ಲೆಬನಾನ್‌ನಲ್ಲಿ ಹಿಜ್ಬುಲ್ಲಾ ಸದಸ್ಯರ ಮೇಲೆ ದಾಳಿ, ಸಾವಿರಾರು ಪೇಜರ್‌ ಸ್ಫೋಟ – 8 ಸಾವು, 2 ಸಾವಿರಕ್ಕೂ ಹೆಚ್ಚು ಮಂದಿ ಗಂಭೀರ ಗಾಯ

ಬೀದರ್-ಕಲಬುರಗಿ ಜನವಸತಿ ಪ್ರದೇಶದ ಕುಡಿಯುವ ನೀರಿಗಾಗಿ 7200 ಕೋಟಿ ವೆಚ್ಚ ಮಾಡಲು ಸಂಪುಟ ಅನುಮತಿ ನೀಡಿದೆ. ಇದರಲ್ಲಿ ಕೇಂದ್ರ ಸರ್ಕಾರ ಅರ್ಧ ಪಾಲನ್ನು ಭರಿಸಲಿದೆ. ಅನುಭವ ಮಂಟಪದಿಂದ ಅಂಜನಾದ್ರಿ ಬೆಟ್ಟದವರೆಗೆ ಇರುವ ಪ್ರವಾಸೋದ್ಯಮ ಸ್ಮಾರಕ ಉಳಿಸಿ ಅಭಿವೃದ್ಧಿ ಮಾಡಲು ಸಂಪುಟ ಒಪ್ಪಿಗೆ ನೀಡಿದೆ. ತುಂಬಿದ ತುಂಗಭದ್ರಾ ಜಲಾಶಯಕ್ಕೆ ಸೆಪ್ಟೆಂಬರ್ 22ರಂದು ಸಿಎಂ ಬಾಗೀನ ಅರ್ಪಿಸಲಿದ್ದಾರೆ. ಅದೇ ದಿನ, ಡ್ಯಾಂ ನಲ್ಲಿ ನೀರುಳಿಯುವಂತೆ ಮಾಡಿದ ತಂತ್ರಜ್ಞರನ್ನು ಸಮ್ಮಾನಿಸಲಿದ್ದಾರೆ. ಇದನ್ನೂ ಓದಿ: ಮುತಾಲಿಕ್‌ನ ನಾನು ಕೇರ್ ಮಾಡಲ್ಲಾ, ಅವನಿಗೆ ಬೆಂಕಿ ಹಚ್ಚೋದು ಬಿಟ್ಟರೆ ಬೇರೇನು ಗೊತ್ತಿಲ್ಲ: ಪ್ರಸಾದ್ ಅಬ್ಬಯ್ಯ

ಈ ಬಗ್ಗೆ ಸಿಎಂ ಮಾತನಾಡಿ, ಕಲ್ಯಾಣ ಕರ್ನಾಟಕ ಭಾಗ ಅಭಿವೃದ್ಧಿಯಾಗದ ಹೊರತು ರಾಜ್ಯದ ಅಭಿವೃಧ್ಧಿ ಅಸಾಧ್ಯ. ಇಲ್ಲಿನ ಜನರ ತಲಾದಾಯ ವೃದ್ಧಿ ಜೊತೆಗೆ ಶಿಕ್ಷಣ, ಆರೋಗ್ಯ, ಮೂಲಸೌಕರ್ಯ ಸುಧಾರಣೆ ಸೇರಿದಂತೆ ಸರ್ವಾಂಗೀಣ ಅಭಿವೃದ್ಧಿ ನಮ್ಮ ಗುರಿಯಾಗಿದ್ದು, ದೇಶದ ಏಕತೆ ಮತ್ತು ಸಮಗ್ರತೆ ಕಾಪಾಡಲು ಬದ್ಧರಾಗಿ ದೃಢಸಂಕಲ್ಪ ಮಾಡುವುದರ ಮೂಲಕ ನವ ಭಾರತ ಮತ್ತು ನವ ಕರ್ನಾಟಕ ನಿರ್ಮಿಸೋಣ ಎಂದರು. ಇದನ್ನೂ ಓದಿ: ಮುತಾಲಿಕ್‌ನ ನಾನು ಕೇರ್ ಮಾಡಲ್ಲಾ, ಅವನಿಗೆ ಬೆಂಕಿ ಹಚ್ಚೋದು ಬಿಟ್ಟರೆ ಬೇರೇನು ಗೊತ್ತಿಲ್ಲ: ಪ್ರಸಾದ್ ಅಬ್ಬಯ್ಯ

ಮೆಗಾ ಟೆಕ್ಸ್ಟೈಲ್, ಸ್ಮಾರ್ಟ್ ಸಿಟಿ:
ರಾಜ್ಯ ಹಾಗೂ ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಲಬುರಗಿ ತಾಲೂಕಿನ ನದಿಸಿನ್ನೂರ-ಹೊನ್ನಕಿರಣಗಿ ಬಳಿ 1,000 ಎಕರೆ ಪ್ರದೇಶದಲ್ಲಿ ಪಿ.ಪಿ.ಪಿ. ಮಾದರಿಯಲ್ಲಿ ಮೆಗಾ ಟೆಕ್ಸಟೈಲ್ ಪಾರ್ಕ್ಗನ್ನು ಸ್ಥಾಪಿಸಲಾಗುತ್ತಿದೆ. ಈ ಯೋಜನೆಗೆ ಪೂರಕವಾದ ಮೂಲ ಸೌಕರ್ಯಕ್ಕಾಗಿ 50 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುತ್ತಿದ್ದು, ಇದರಿಂದ 1 ಲಕ್ಷ ಜನರಿಗೆ ನೇರ ಹಾಗೂ 2 ಲಕ್ಷ ಜನರಿಗೆ ಪರೋಕ್ಷ ಉದ್ಯೋಗ ಸೃಷ್ಟಿಯಾಗಲಿದೆ. ರಾಜ್ಯ ಸರ್ಕಾರದಿಂದಲೇ ಸುಮಾರು 1,685 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಕಲಬುರಗಿ ನಗರವನ್ನು ಸ್ಮಾರ್ಟ್ ಸಿಟಿಯನ್ನಾಗಿ ಅಭಿವೃದ್ಧಿಪಡಿಸಲು ಯೋಚಿಸಲಾಗುತ್ತಿದೆ ಎಂದು ಹೇಳಿದರು.

ಏಮ್ಸ್‌ಗೆ ಅಗತ್ಯ ನೆರವು:
ರಾಯಚೂರಿನಲ್ಲಿ ಏಮ್ಸ್ ಸಂಸ್ಥೆಯನ್ನು ಸ್ಥಾಪಿಸಲು ನಮ್ಮ ಸರ್ಕಾರವು ಅಗತ್ಯವಿರುವ ಎಲ್ಲ ನೆರವನ್ನು ಒದಗಿಸಲು ಸಿದ್ಧವಿದೆ. ಕೇಂದ್ರ ಸರ್ಕಾರವು ಕೂಡಲೆ ಏಮ್ಸ್ ಸಂಸ್ಥೆ ಪ್ರಾರಂಭಿಸಲು ಕ್ರಮ ವಹಿಸಬೇಕೆಂದು ಒತ್ತಾಯಿಸಿ, ರಾಜ್ಯದಲ್ಲಿ ಈಗಾಗಲೇ ನಾಲ್ಕು ಜಿಲ್ಲೆಗಳಲ್ಲಿ ಹ್ಯೂಮನ್ ಮಿಲ್ಕ್ ಬ್ಯಾಂಕ್ ಘಟಕಗಳನ್ನು ಸ್ಥಾಪಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ರಾಯಚೂರು ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಹೊಸ ಘಟಕಗಳನ್ನು ಸ್ಥಾಪಿಸಲಾಗುವುದು ಎಂದು ನುಡಿದರು. ಇದನ್ನೂ ಓದಿ: ಬ್ರಿಟಿಷರಂತೆ ಕಾಂಗ್ರೆಸ್‌ – ಸಿಜೆಐ ನಿವಾಸದಲ್ಲಿ ಗಣೇಶ ಪೂಜೆಗೆ ಹೋಗಿದ್ದನ್ನು ಟೀಕಿಸಿದವರಿಗೆ ಮೋದಿ ತಿರುಗೇಟು

ಕಲ್ಯಾಣ ಕರ್ನಾಟಕ ಭಾಗದ 7 ಜಿಲ್ಲೆಗಳ ವ್ಯಾಪ್ತಿಯ 18 ಹೊಸ ತಾಲೂಕುಗಳಲ್ಲಿ ಕಂದಾಯ ಇಲಾಖೆ ಮತ್ತು ಮಂಡಳಿಯ ಸಹಭಾಗಿತ್ವದಲ್ಲಿ ತಾಲ್ಲೂಕು ಆಡಳಿತ ಭವನಗಳನ್ನು (ಮಿನಿ ವಿಧಾನ ಸೌಧ) ನಿರ್ಮಾಣ ಮಾಡಲು ಮಂಡಳಿಯಿಂದ 130 ಕೋಟಿ ರೂ.ವೆಚ್ಚ ಮಾಡಲಾಗುತ್ತಿದೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಚಿಕ್ಕಲಪರ್ವಿ ಹತ್ತಿರ ತುಂಗಭದ್ರಾ ನದಿಗೆ ಅಡ್ಡಲಾಗಿ ಬ್ರಿಡ್ಜ್ ಕಂ ಬ್ಯಾರೇಜ್ 397 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲು ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಪಬ್ಲಿಕ್ ಟಿವಿ ಸಂಸ್ಥೆ ವಿರುದ್ಧ ಇಲ್ಲಸಲ್ಲದ ಆರೋಪಕ್ಕೆ ಕಾನೂನು ಕ್ರಮ

TAGGED:cabinet meetingcm siddaramaiahcongressKalaburagiKalyana Karnatakaಕಲಬುರಗಿಕಲ್ಯಾಣ ಕರ್ನಾಟಕಕಾಂಗ್ರೆಸ್ಸಚಿವ ಸಂಪುಟ ಸಭೆಸಿಎಂ ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

darshan wife vijayalakshmi dinakar tugudeepa
ಪರಪ್ಪನ ಅಗ್ರಹಾರ ಜೈಲಿಗೆ ದರ್ಶನ್ ಪತ್ನಿ ವಿಜಯಲಕ್ಷ್ಮಿ, ಸಹೋದರ ದಿನಕರ್ ಭೇಟಿ
Cinema Latest Sandalwood Top Stories
Kichcha Sudeep Mark
ತ್ರಿಶೂಲ ಹಿಡಿದು ಬಂದ ನಟ ಕಿಚ್ಚ ಸುದೀಪ್
Cinema Latest Sandalwood Top Stories
45 Movie
ಕರುನಾಡಲ್ಲಿ `45’ ಸಿನಿಮಾ ಅಬ್ಬರ: ಅಡ್ವಾನ್ಸ್‌ ಬುಕ್ಕಿಂಗ್ ಭರ್ಜರಿ ಜೋರು
Cinema Latest Sandalwood Top Stories
Vijay Deverakondas next titled Rowdy Janardhana
ವಿಜಯ್‌ ದೇವರಕೊಂಡ ನಟನೆಯ ರೌಡಿ ಜನಾರ್ದನ ಟೈಟಲ್ ಗ್ಲಿಂಪ್ಸ್ ರಿಲೀಸ್
Cinema Latest South cinema

You Might Also Like

Maulana Fazlur Rehman
Latest

ಪಾಕ್‌ ಗಡಿಯಾಚೆಗಿನ ತನ್ನ ದಾಳಿ ಸಮರ್ಥಿಸಿಕೊಂಡ್ರೆ, ಭಯೋತ್ಪಾದನೆ ವಿರುದ್ಧ ಭಾರತದ ಕ್ರಮ ತಪ್ಪಲ್ಲ: ಪಾಕ್‌ ಸಂಸದ

Public TV
By Public TV
8 minutes ago
Yulla Kanda Krishna Temple Himachal Pradesh
Latest

ವಿಶ್ವದ ಅತಿ ಎತ್ತರದ ಶ್ರೀಕೃಷ್ಣನ ದೇವಾಲಯ ಇದು – ಇಲ್ಲಿ ಟೋಪಿಯಲ್ಲಿ ನಿರ್ಧಾರವಾಗುತ್ತೆ ನಿಮ್ಮ ಭವಿಷ್ಯ

Public TV
By Public TV
12 minutes ago
DATA CENTER 6
Latest

ಬಾಹ್ಯಾಕಾಶದಲ್ಲಿ ಡೇಟಾ ಸೆಂಟರ್ – ಏನಿದು ಗೂಗಲ್‌ನ ಸನ್‌ಕ್ಯಾಚರ್‌ ಪ್ರಾಜೆಕ್ಟ್?

Public TV
By Public TV
13 minutes ago
daily horoscope dina bhavishya
Astrology

ದಿನ ಭವಿಷ್ಯ 24-12-2025

Public TV
By Public TV
19 minutes ago
kali tiger reserve dog squad
Latest

ಕಾಳಿ ಹುಲಿ ರಕ್ಷಿತಾರಣ್ಯಕ್ಕೆ ಶ್ವಾನ ದಳದ ಬಲ; ಅಪರಾಧ ಕೃತ್ಯ ಪತ್ತೆಗೆ ಅವನಿ, ತಾರ ಕಣ್ಗಾವಲು

Public TV
By Public TV
8 hours ago
BMTC KSRTC
Bengaluru City

ಸಾರಿಗೆ ನಿಗಮದ ಮಹಿಳಾ ನೌಕರರಿಗೆ ಋತುಚಕ್ರ ರಜೆ ಮಂಜೂರು

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?