ಬಿಹಾರ: ನವಾಡದಲ್ಲಿ (Nawada) ಮನೆಗಳಿಗೆ ಬೆಂಕಿ ಹಚ್ಚಿದ ಘಟನೆಗೆ ಸಂಬಂಧಿಸಿದಂತೆ ಬಿಹಾರದ (Bihar) ಎನ್‌ಡಿಎ (NDA) ಸರ್ಕಾರವನ್ನು ಕಾಂಗ್ರೆಸ್ (Congress) ಗುರುವಾರ ತರಾಟೆಗೆ ತೆಗೆದುಕೊಂಡಿದ್ದು, ಇದು ರಾಜ್ಯದಲ್ಲಿ ‘ಜಂಗಲ್ ರಾಜ್’ ಅಸ್ತಿತ್ವದಲ್ಲಿರುವುದಕ್ಕೆ ಸಾಕ್ಷಿಯಾಗಿದೆ. ದಲಿತರು ಮತ್ತು ವಂಚಿತರ ಬಗ್ಗೆ ಆಡಳಿತ ಅಸಡ್ಡೆ ತೋರಿಸುತ್ತಿದೆ ಎಂದು ಟೀಕಿಸಿದೆ.
ನಾವಡದಲ್ಲಿ ದಲಿತರ ಬುಧವಾರ 80ಕ್ಕೂ ಹೆಚ್ಚು ಮನೆಗಳಿಗೆ ಬೆಂಕಿ ಹಚ್ಚಲಾಗಿದೆ. ನರೇಂದ್ರ ಮೋದಿ (Narendra Modi) ಮತ್ತು ನಿತೀಶ್ ಕುಮಾರ್ ಆಡಳಿತದಲ್ಲಿ ಬಿಹಾರದಾದ್ಯಂತ ಬೆಂಕಿ ಕಾಣಿಸಿಕೊಂಡಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್‌ಗೆ ತೊಂದರೆಯಾಗುವುದಿಲ್ಲ, ಬಡವರು ಸುಟ್ಟುಹೋಗಿದ್ದಾರೆ. ಸತ್ತರೂ ಅವರಿಗೆ ಕಾಳಜಿಯಿಲ್ಲ ಎಂದು ಆರ್‌ಜೆಡಿ ನಾಯಕ ತೇಜಸ್ವಿ ಪ್ರಸಾದ್ ಯಾದವ್ ಕಿಡಿಕಾರಿದ್ದಾರೆ. ಇದನ್ನೂ ಓದಿ: ನಕಲಿ ಮೇಲ್ ಬಳಸಿ 2.11 ಕೋಟಿ ರೂ. ವಂಚಿಸಿದ ಆರೋಪಿ ಬಂಧನ
ಭೂ ವಿವಾದದ ಸಂಬಂಧ ಬಿಹಾರದ ನಾವಡಾ ಜಿಲ್ಲೆಯಲ್ಲಿ ಸುಮಾರು 80 ಕ್ಕೂ ಅಧಿಕ ಮನೆಗಳಿಗೆ ಬೆಂಕಿ ಹಚ್ಚಿಲಾಗಿತ್ತು. ಘಟನೆ ನಡೆದ ಒಂದು ದಿನದ ನಂತರ ಪೊಲೀಸರು 15 ಜನ ಆರೋಪಿಗಳನ್ನು ಬಂಧಿಸಿದ್ದಾರೆ. ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದ್ದು, ಉಳಿದ ಶಂಕಿತರನ್ನು ಬಂಧಿಸಲು ಹುಡುಕಾಟ ನಡೆಯುತ್ತಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಅಶುತೋಷ್ ಕುಮಾರ್ ವರ್ಮಾ ಗುರುವಾರ ತಿಳಿಸಿದ್ದಾರೆ. ಇದನ್ನೂ ಓದಿ: ಹೆಚ್‌ಡಿಕೆ, ಬಿಎಸ್‌ವೈಯಿಂದ ಜಂಟಿ ಡಿನೋಟಿಫೈ – ಕಾಂಗ್ರೆಸ್ ಸಚಿವರಿಂದ ಗಂಭೀರ ಆರೋಪ
ಘಟನೆಯ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಧಿಕಾರಿಗಳು ಸ್ಥಳದಲ್ಲೇ ಇದ್ದು, ನಿರಾಶ್ರಿತರಿಗೆ ಆಹಾರ ಮತ್ತು ಕುಡಿಯುವ ನೀರುವ ಸೇರಿದಂತೆ ಇತರೆ ಸಾಮಗ್ರಿಗಳನ್ನು ಒದಗಿಸುತ್ತಿದ್ದೇವೆ ಹಾಗೂ ಸಂತ್ರಸ್ತರಿಗೆ ತಾತ್ಕಾಲಿಕ ಟೆಂಟ್‌ಗಳನ್ನು ಸ್ಥಾಪಿಸಲಾಗಿದೆ ಎಂದು ಹೇಳಿದರು. ಇದನ್ನೂ ಓದಿ:ಮುಡಾ ಹಣ ವರುಣ ಕ್ಷೇತ್ರಕ್ಕೆ – ಸಿಎಂ ವಿರುದ್ಧ ರಾಜ್ಯಪಾಲರಿಗೆ ದೂರು
ನಾವಡಾ ಎಸ್ಪಿ ಅಭಿನವ್ ಧಿಮಾನ್ ಮಾತನಾಡಿ, ಸಂಜೆ 7 ಗಂಟೆಯ ಸುಮಾರಿಗೆ ತೋಲಾದಲ್ಲಿ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ಕರೆ ಬಂದಿದ್ದು, ತಕ್ಷಣ ಪೊಲೀಸರು ಅಗ್ನಿಶಾಮಕ ವಾಹನಗಳೊಂದಿಗೆ ಸ್ಥಳಕ್ಕೆ ತೆರಳಿ ಬೆಂಕಿ ನಂದಿಸುವ ಕಾರ್ಯ ನಡೆದಿದೆ. ಪ್ರಾಥಮಿಕ ತನಿಖೆ ಪ್ರಕಾರ, ಈ ಘಟನೆಗೆ ಜಮೀನು ವಿವಾದ ಕಾರಣ ಎಂದು ತಿಳಿದು ಬಂದಿದೆ. ಇದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದರು. ಪರಿಸ್ಥಿತಿ ಈಗ ನಿಯಂತ್ರಣದಲ್ಲಿದೆ. ಇನ್ನು ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ತಡೆಯಲು ಸ್ಥಳದಲ್ಲಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಪೊಲೀಸರನ್ನು ಆಯೋಜಿಸಲಾಗಿದೆ ಎಂದರು. ಇದನ್ನೂ ಓದಿ: ದಾವಣಗೆರೆ ಗಣೇಶ ಮೆರವಣಿಗೆಯ ವೇಳೆ ಕಲ್ಲು ತೂರಾಟ – ಪೊಲೀಸರ ಮೇಲೂ ಬಿತ್ತು ಕಲ್ಲು