ಬೆಂಗಳೂರಲ್ಲಿ ಮೈದಾನದ ಗೇಟ್ ಬಿದ್ದು ಬಾಲಕ ದುರ್ಮರಣ

Public TV
1 Min Read
malleshwaram ground child death

ಬೆಂಗಳೂರು: ಮೈದಾನದ ಗೇಟ್ ಮುರಿದು ತಲೆಗೆ ಬಿದ್ದು ಬಾಲಕ ಸಾವಿಗೀಡಾಗಿರುವ ಘಟನೆ ಮಲ್ಲೇಶ್ವರಂ (Malleshwaram) ಬಿಬಿಎಂಪಿ (BBMP) ಗ್ರೌಂಡ್‌ನಲ್ಲಿ ನಡೆದಿದೆ.

ನಿರಂಜನ್ (10) ಮೃತ ಬಾಲಕ. ಸಂಜೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಆಟ ಆಡಲು ಬಾಲಕ ಮೈದಾನಕ್ಕೆ ಬಂದಿದ್ದ. ಈ ವೇಳೆ ಬಾಲಕ ಗೇಟ್ ಬಳಿಯೇ ನಿಂತಿದ್ದು, ಗೇಟ್ ತೆರೆಯುತ್ತಿದ್ದಂತೆ ಆತನ ತಲೆ ಮೇಲೆ ಮುರಿದು ಬಿದ್ದಿದೆ. ಪರಿಣಾಮವಾಗಿ ತಲೆಗೆ ತೀವ್ರ ಗಾಯವಾಗಿ ಬಾಲಕ ಮೃತಪಟ್ಟಿದ್ದಾನೆ. ಘಟನೆ ನಡೆದ ಸ್ಥಳಕ್ಕೆ ಮಲ್ಲೇಶ್ವರಂ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಹಣಕಾಸು ವಿಚಾರಕ್ಕೆ ವ್ಯಕ್ತಿಗೆ ಜೀವ ಬೆದರಿಕೆ – ಯುಪಿ ಸಂಸದನ ಪುತ್ರನ ವಿರುದ್ಧ ಎಫ್‍ಐಆರ್

malleshwaram ground child death 1

ಮಲ್ಲೇಶ್ವರಂ ಫೈಪ್‌ಲೈನ್‌ನಲ್ಲಿ ವಾಸವಾಗಿದ್ದ ಆಟೋ ಚಾಲಕ ವಿಜಯಕುಮಾರ್ ಮತ್ತು ಪ್ರಿಯಾ ದಂಪತಿಯ ಮೊದಲನೇ ಪುತ್ರ ನಿರಂಜನ್. ಮಲ್ಲೇಶ್ವರಂನ ಬಿಬಿಎಂಪಿ ಶಾಲೆಯಲ್ಲಿ ಬಾಲಕ 5ನೇ ತರಗತಿಯಲ್ಲಿ ಓದುತ್ತಿದ್ದ. ಇದನ್ನೂ ಓದಿ: ತುಂಗಭದ್ರಾ ಜಲಾಶಯಕ್ಕೆ ಸಿಎಂ, ಡಿಸಿಎಂ ಬಾಗಿನ ಅರ್ಪಣೆ

Share This Article