ನಿಮ್ಮಿಂದ ನಮ್ಮ ಸಿದ್ದರಾಮಯ್ಯಗೆ ಈ ಸ್ಥಿತಿ ಬಂತು – ಮುಡಾ ಅಧ್ಯಕ್ಷರಿಗೆ ಕಾಂಗ್ರೆಸ್ ಕಾರ್ಯಕರ್ತರಿಂದ ಘೇರಾವ್

Public TV
1 Min Read
high drama at mysuru airport you are responsible for siddaramaiahs condition marigowda gherao by congress workers

– ಸಿಎಂ ಆಪ್ತನ ವಿರುದ್ಧ ಸಿಡಿದೆದ್ದ `ಕೈ’ ಕಾರ್ಯಕರ್ತರು

ಮೈಸೂರು: ವಿಮಾನ ನಿಲ್ದಾಣದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಅವರ ಸ್ವಾಗತಕ್ಕೆ ಬಂದಿದ್ದ ಮುಡಾ (MUDA) ಅಧ್ಯಕ್ಷ ಕೆ.ಮರಿಗೌಡಗೆ (Marigowda) ಕಾಂಗ್ರೆಸ್ ಕಾರ್ಯಕರ್ತರು ಘೇರಾವ್ ಹಾಕಿದ್ದಾರೆ.

ಈ ವೇಳೆ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ಆಪ್ತ ಮರಿಗೌಡ ಅವರ ವಿರುದ್ಧ ಘೋಷಣೆ ಕೂಗಿದ್ದಾರೆ. ನಿಮ್ಮಿಂದ ನಮ್ಮ ಸಿದ್ದರಾಮಯ್ಯ ಅವರಿಗೆ ಈ ಸ್ಥಿತಿ ಬಂದಿದೆ ಎಂದು ಕಾರು ಹತ್ತಿಸಿ ಅಲ್ಲಿಂದ ವಾಪಸ್ ಕಳುಹಿಸಿದ್ದಾರೆ.

ಈ ವೇಳೆ ಮರೀಗೌಡ ಅವರು ಸಮಜಾಯಿಸಿ ನೀಡಲು ಮುಂದಾಗಿದ್ದಾರೆ. ಆದರೆ ಕಾರ್ಯಕರ್ತರು ಕೇಳದೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅಲ್ಲದೇ ನಿನ್ನ ಭಾಷಣ ಬೇಡ ಹೊರಡು ಎಂದು ಬಲವಂತವಾಗಿ ಕಾರು ಹತ್ತಿಸಿ ಕಳಿಸಿದ್ದಾರೆ.

ಇಂದು ಸಿದ್ದರಾಮಯ್ಯ ಅವರು ವಿಶೇಷ ವಿಮಾನದಲ್ಲಿ ಬೆಂಗಳೂರಿನಿಂದ ಮೈಸೂರು ನಗರಕ್ಕೆ ತೆರಳಿದ್ದಾರೆ. ಬಳಿಕ ಮೈಸೂರಿನಲ್ಲಿ ನಡೆಯಲಿರುವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮ, ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ಇನ್ನೂ ಮುಂತಾದ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ನಾಳೆ ಕೂಡ ಸಿದ್ದರಾಮಯ್ಯ ಮೈಸೂರು ನಗರದಲ್ಲಿ ಖಾಸಗಿ ಆಸ್ಪತ್ರೆ ಉದ್ಘಾಟನೆ, ಸರ್ಕಾರದ ಗ್ಯಾರಂಟಿ ಯೋಜನೆಗಳ ಪುಸ್ತಕ ಬಿಡುಗಡೆ ಸಮಾರಂಭ, ಮೈಸೂರು ವೈದ್ಯಕೀಯ ಕಾಲೇಜು ಹಾಗೂ ಸಂಶೋಧನಾ ಸಂಸ್ಥೆಯ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅಲ್ಲೇ ವಾಸ್ತವ್ಯ ಹೂಡಲಿದ್ದಾರೆ.

ಭಾನುವಾರವೂ ಹಿಂದುಳಿದ ವರ್ಗಗಳ ವಸತಿ ನಿಲಯಗಳ ಹಳೆಯ ವಿದ್ಯಾರ್ಥಿಗಳ ಸಂಘದ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಶೋಕಪುರಂ ಸರ್ಕಾರಿ ಪ್ರೌಢಶಾಲೆಯಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಬಳಿಕ ಸಂಜೆ 6 ಗಂಟೆಗೆ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.

Share This Article