ಹೆಚ್‌ಡಿಕೆ ಆರೋಪಕ್ಕೆ ಪತ್ರದ ಮೂಲಕ ಕೌಂಟರ್ ಕೊಟ್ಟ ಎಡಿಜಿಪಿ ಚಂದ್ರಶೇಖರ್

Public TV
2 Min Read
HD Kumaraswamy ADGP Chandrashekar

ಬೆಂಗಳೂರು: ಐಪಿಎಸ್ ಅಧಿಕಾರಿ ಚಂದ್ರಶೇಖರ್ (ADGP Chandrashekar) ಮೇಲೆ ಅಕ್ರಮ ಆಸ್ತಿ ಆರೋಪ ಮಾಡಿದ್ದ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿಗೆ (HD Kumaraswamy) ಪತ್ರದ ಮೂಲಕ ಸ್ಪಷ್ಟನೆ ಕೊಟ್ಟು ಎಡಿಜಿಪಿ ಚಂದ್ರಶೇಖರ್ ಕೌಂಟರ್ ಕೊಟ್ಟಿದ್ದಾರೆ.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಕುಮಾರಸ್ವಾಮಿ ನನ್ನ ಮೇಲೆ ಸಾಕಷ್ಟು ಆರೋಪ ಮಾಡಿದ್ದಾರೆ. ಪ್ರಕರಣ ಒಂದರ ಆರೋಪಿ ಎಂದು ಚಂದ್ರಶೇಖರ್ ಪತ್ರ ಆರಂಭಿಸಿದ್ದಾರೆ. ನನ್ನ ಮೇಲೆ ಹೆಚ್‌ಡಿಕೆ ಸುಳ್ಳು ಆರೋಪದ ಜೊತೆಗೆ ಬೆದರಿಕೆ ಹಾಕಿದ್ದಾರೆ. ಎಸ್‌ಐಟಿ (SIT) ಸಕ್ಷಮ ಪ್ರಾಧಿಕಾರದಿಂದ ಪ್ರಾಸಿಕ್ಯೂಷನ್ ಮಂಜೂರಾತಿ ಕೋರಿದೆ. ಆರೋಪಿ ಹೆಚ್.ಡಿ ಕುಮಾರಸ್ವಾಮಿ ಜಾಮೀನು ಪಡೆದಿದ್ದಾರೆ. ನಮ್ಮನ್ನ ಕುಗ್ಗಿಸುವ ಪ್ರಯತ್ನ ಮಾಡಿದ್ದಾರೆ. ನಮ್ಮಲ್ಲಿ ಭಯ ಹುಟ್ಟಿಸುವ ಉದ್ದೇಶ ಹೊಂದಿದ್ದಾರೆ. ಅವನು ಎಷ್ಟೇ ಉನ್ನತ ಸ್ಥಾನದಲ್ಲಿದಲ್ಲಿದ್ದರೂ ಆತನೊಬ್ಬ ಆರೋಪಿ. ಇಂತಹ ಆರೋಪ ಮತ್ತು ಬೆದರಿಕೆಗಳಿಂದ ನಾವು ನಿರಾಶೆಗೊಳ್ಳಬಾರದು. ಎಸ್‌ಐಟಿ ಮುಖ್ಯಸ್ಥನಾಗಿ ನಾನು ಭಯವಿಲ್ಲದೇ ಕೆಲಸ ಮಾಡುತ್ತೇನೆ. ಪ್ರಕರಣದ ಸತ್ಯಾಸತ್ಯತೆ ಹೊರಗೆ ತರುತ್ತೇನೆ. ಎಲ್ಲಾ ಬಾಹ್ಯ ಪ್ರಭಾವದಿಂದ ನಿಮ್ಮನ್ನ ರಕ್ಷಿಸುತ್ತೇನೆ ಎಂದು ಎಸ್‌ಐಟಿ ಅಧಿಕಾರಿ ಸಿಬ್ಬಂದಿಗಳಿಗೆ ಚಂದ್ರಶೇಖರ್ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ FIR ಪಾಲಿಟಿಕ್ಸ್ | ಚುನಾವಣಾ ಬಾಂಡ್‌ ಹೆಸ್ರಲ್ಲಿ ವಸೂಲಿ ಆರೋಪ – ಬಿಜೆಪಿಗೆ ಶಾಕ್!

ಪತ್ರದಲ್ಲಿ ಜಾರ್ಜ್ ಬರ್ನಾರ್ಡ್ ಷಾ ಅವರ ಪ್ರಸಿದ್ಧ ಇಂಗ್ಲಿಷ್ ವಾಕ್ಯವನ್ನು ಉಲ್ಲೇಖಿಸಲಾಗಿದೆ. ಹಂದಿಗಳೊಂದಿಗೆ ಎಂದಿಗೂ ಜಗಳಕ್ಕೆ ಇಳಿಯಬೇಡಿ. ಹಂದಿಗಳ ಜೊತೆಗೆ ಜಗಳಕ್ಕೆ ಇಳಿದರೆ ನಾವು ಕೊಳಕಾಗುತ್ತೀವಿ. ಯಾಕೆಂದರೆ ಹಂದಿಗಳು ಕೊಳಕನ್ನೇ ಇಷ್ಟಪಡುತ್ತದೆ. ಆದರೆ ನಮ್ಮ ಕರ್ತವ್ಯವನ್ನು ನಾವು ನಿರ್ವಹಿಸುತ್ತೇವೆ. ಅಪರಾಧಿಗಳು ಮತ್ತು ಆರೋಪಿಗಳನ್ನು ಎದುರಿಸುವುದನ್ನು ನಾವು ತಪ್ಪಿಸಲು ಸಾಧ್ಯವಿಲ್ಲ. ಕೆಲವೊಮ್ಮೆ ನಾವು ಎದುರಿಸುವ ಅಪರಾಧಿಗಳು ಮತ್ತು ಆರೋಪಿಗಳು ನಮ್ಮ ಮೇಲೆ ಕೊಳಕು ಎಸೆಯುತ್ತಾರೆ. ನಮ್ಮ ಕರ್ತವ್ಯವನ್ನು ನಿರ್ವಹಿಸುವುದರಿಂದ ನಮ್ಮನ್ನು ತಡೆಯಬಾರದು. ಭರವಸೆಯನ್ನು ಎಂದಿಗೂ ಕಳೆದುಕೊಳ್ಳಬೇಡಿ. ಏಕೆಂದರೆ ಸತ್ಯವು ಯಾವಾಗಲೂ ಜಯಗಳಿಸುತ್ತದೆ. ಸತ್ಯ, ದೇವರು ಮತ್ತು ನಮ್ಮ ಕಾನೂನಿನಲ್ಲಿ ನಂಬಿಕೆ ಇರಲಿ. ಸತ್ಯಮೇವ ಜಯತೆ ಎಂದು ಪತ್ರದ ಮೂಲಕ ಎಡಿಜಿಪಿ ಚಂದ್ರಶೇಖರ್ ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ರಾಮಮಂದಿರ ಪ್ರಾಣಪ್ರತಿಷ್ಠಾಪನೆ `ನಾಚ್ ಗಾನಾ’ ಕಾರ್ಯಕ್ರಮವಾಗಿತ್ತು – ರಾಗಾ ಹೇಳಿಕೆಗೆ ಬಿಜೆಪಿ ತೀವ್ರ ಆಕ್ಷೇಪ

Share This Article