ಅ.7ಕ್ಕೆ ಭೈರತಿ ರಣಗಲ್ ಚಿತ್ರದ ‘ಕಾವಲಿಗ’ ಲಿರಿಕಲ್ ಸಾಂಗ್

Public TV
1 Min Read
Bhairati Rangal

ಶಿವರಾಜ್ ಕುಮಾರ್ (Shivaraj Kumar) ನಟನೆಯ ಭೈರತಿ ರಣಗಲ್ ಸಿನಿಮಾದ ಕಾವಲಿಗ ಲಿರಿಕಲ್ ಸಾಂಗ್ ಇದೇ ಅಕ್ಟೋಬರ್ 7ರಂದು ಸಂಜೆ 6.03ಕ್ಕೆ ಬಿಡುಗಡೆ ಆಗಲಿದೆ. ‘ಮಾಯದಿರೋ ಮನದ ಗಾಯಕೆ, ಮಮತೆ ಮದ್ದು ಹಚ್ಚೊ ಸೇವಕ’ ಸಾಹಿತ್ಯದಲ್ಲಿ ಈ ಹಾಡು ಮೂಡಿ ಬಂದಿದೆ. ಇತ್ತೀಚೆಗಷ್ಟೇ  (Bhairati Rangal) ಚಿತ್ರದ ಶೀರ್ಷಿಕೆ ಗೀತೆ (Title Song) ಬಿಡುಗಡೆಯಾಗಿತ್ತು.

Bhairati Rangal 3

ಕಿನ್ನಾಳ್ ರಾಜ್ ಅವರು ಬರೆದಿರುವ “ಇತಿಹಾಸವೇ ನಿಬ್ಬೆರಿಗಿಸುವ ಎತ್ತಿ ಹಿಡಿಯುವ ಮೈಲಿಗಲ್ಲು” ಎಂಬ  ಭೈರತಿ ರಣಗಲ್ ಸಿನಿಮಾದ ಶೀರ್ಷಿಕೆ ಗೀತೆಗೆ ಅಭಿಮಾನಿಗಳು ಫಿದಾ ಆಗಿದ್ದರು. ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರು ಸಂಗೀತ ನೀಡಿದ್ದಾರೆ. ಸಂತೋಷ್ ವೆಂಕಿ ಹಾಡಿದ್ದಾರೆ. ಅಧಿಕ ಸಂಖ್ಯೆಯಲ್ಲಿ ವೀಕ್ಷಿಣೆಯಾಗುತ್ತಿರುವ ಈ ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬಂದಿತ್ತು.

Bhairati Rangal 1

ನರ್ತನ್ ಹಾಗೂ ಶಿವಣ್ಣ ಅವರ ಕಾಂಬಿನೇಶನ್ ನಲ್ಲಿ ಬಂದಿದ್ದ “ಮಫ್ತಿ” ಚಿತ್ರದ ಪ್ರೀಕ್ವೆಲ್ ಆಗಿರುವ “ಭೈರತಿ ರಣಗಲ್” ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ಟೀಸರ್ ಹಾಗೂ ಹಾಡಿನ ಮೂಲಕ ಜನಪ್ರಿಯವಾಗಿರುವ ಈ ಚಿತ್ರದ ಬಿಡುಗಡೆಗೆ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಶಿವರಾಜಕುಮಾರ್ ಅವರಿಗೆ ನಾಯಕಿಯಾಗಿ ರುಕ್ಮಿಣಿ ವಸಂತ್ ಅಭಿನಯಿಸಿದ್ದಾರೆ. ನವೀನ್ ಕುಮಾರ್ ಛಾಯಾಗ್ರಹಣ, ಆಕಾಶ್ ಹಿರೇಮಠ ಸಂಕಲನ, ‌ಗುಣ ಕಲಾ ನಿರ್ದೇಶನ ಹಾಗೂ ದಿಲೀಪ್ ಸುಬ್ರಹ್ಮಣ್ಯ, ಚೇತನ್ ಡಿಸೋಜ ಸಾಹಸ ನಿರ್ದೇಶನ “ಭೈರತಿ ರಣಗಲ್” ಚಿತ್ರಕ್ಕಿದೆ.

Share This Article