ಚಂಡೀಗಢ: ಪಂಜಾಬ್‌ನಲ್ಲಿ (Punjab) ಆಮ್ ಆದ್ಮಿ ಪಕ್ಷದ (AAP) ಮುಖಂಡರೊಬ್ಬರ ಮೇಲೆ ಗುಂಡು ಹಾರಿಸಲಾಗಿದೆ. ಗಂಭೀರ ಗಾಯಗೊಂಡಿರುವ ಮುಖಂಡನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಫಾಜಿಲ್ಕಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಎಎಪಿ ಮುಖಂಡನೊಂದಿಗೆ ವಾಗ್ವಾದದ ಸಂದರ್ಭದಲ್ಲಿ ಶಿರೋಮಣಿ ಅಕಾಲಿದಳದ ನಾಯಕ ಗುಂಡು ಹಾರಿಸಿದ್ದಾರೆಂದು ಹೇಳಲಾಗಿದೆ. ಇದನ್ನೂ ಓದಿ: ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿ 3 ಮಕ್ಕಳು ಸೇರಿ 7 ಜನ ಸಜೀವ ದಹನ
ಬುಲೆಟ್‌ನಿಂದ ಗಾಯಗೊಂಡ ಸ್ಥಳೀಯ ಎಎಪಿ ನಾಯಕ ಮನದೀಪ್ ಸಿಂಗ್ ಬ್ರಾರ್ ಅವರನ್ನು ಪಂಜಾಬ್‌ನ ಜಲಾಲಾಬಾದ್ ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಅವರ ಗಂಭೀರ ಸ್ಥಿತಿಯನ್ನು ನೋಡಿ ಹೆಚ್ಚಿನ ಚಿಕಿತ್ಸೆಗಾಗಿ ಲುಧಿಯಾನದ ಜಿಲ್ಲಾ ವೈದ್ಯಕೀಯ ಕೇಂದ್ರಕ್ಕೆ ದಾಖಲಿಸಲಾಗಿದೆ.
ಬುಲೆಟ್ ಅನ್ನು ಅಕಾಲಿ ನಾಯಕ ವರದೇವ್ ಸಿಂಗ್ ಮಾನ್ ಹಾರಿಸಿದ್ದಾರೆ ಎಂದು ಜಲಾಲಾಬಾದ್ ಎಎಪಿ ಶಾಸಕ ಜಗದೀಪ್ ಕಾಂಬೋಜ್ ಗೋಲ್ಡಿ ಆರೋಪಿಸಿದ್ದಾರೆ. ಬ್ಲಾಕ್ ಅಭಿವೃದ್ಧಿ ಮತ್ತು ಪಂಚಾಯತ್ ಅಧಿಕಾರಿ (ಬಿಡಿಪಿಒ) ಕಚೇರಿಯ ಹೊರಗೆ ಘಟನೆ ನಡೆದಿದೆ. ಇದನ್ನೂ ಓದಿ: ಶಬರಿಮಲೆ ಯಾತ್ರೆಗೆ ಆನ್‌ಲೈನ್ ಬುಕ್ಕಿಂಗ್ ಕಡ್ಡಾಯ – ದಿನಕ್ಕೆ 80,000 ಭಕ್ತರಿಗೆ ದರ್ಶನಕ್ಕೆ ಅವಕಾಶ
ಮಾಜಿ ಸಂಸದ ಜೋರಾ ಸಿಂಗ್ ಮಾನ್ ಅವರ ಪುತ್ರ ವರದೇವ್ ಸಿಂಗ್ ನೋನಿ ಮಾನ್ ಅವರು ಶಾಲೆಗೆ ಸಂಬಂಧಿಸಿದ ಫೈಲ್ ಅನ್ನು ತೆರವುಗೊಳಿಸುವ ಬಗ್ಗೆ ಕೇಳಲು ಬಿಡಿಪಿಒ ಕಚೇರಿಗೆ ಮನದೀಪ್ ಬಂದಿದ್ದರು.