ಕೊಪ್ಪಳ: ಕಾರು ನಾಲ್ಕು ಪಲ್ಟಿ ಹೊಡೆದರೂ ಚಾಲಕ ಪ್ರಾಣಾಪಾಯದಿಂದ ಪಾರಾದ ಘಟನೆ ಕೊಪ್ಪಳ ಹೊರವಲಯದ ದದೇಗಲ್ ಬಳಿಯ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ನಡೆದಿದೆ.
ಎಲ್.ಜಿ. ರಾಜೇಶ ಪ್ರಾಣಾಪಾಯದಿಂದ ಪಾರಾದ ಚಾಲಕ. ಬಳ್ಳಾರಿಯಿಂದ ಹುಬ್ಬಳ್ಳಿ ಕಡೆ ಹೊರಟಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಘಟನೆಯಿಂದ ಚಾಲಕನಿಗೆ ಸಣ್ಣ-ಪುಟ್ಟ ಗಾಯವೂ ಆಗದೇ ಪವಾಡಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅಪಘಾತಕ್ಕೆ ಒಳಗಾದ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕೂಡಲೇ ಸಾರ್ವಜನಿಕರು ಸ್ಥಳಕ್ಕೆ ಆಗಮಿಸಿ ಚಾಲಕನಿಗೆ ನೀರು ಕೊಟ್ಟು ಧೈರ್ಯ ಹೇಳಿದ್ದಾರೆ. ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಆದ್ರೆ ಅಪಘಾತಕ್ಕೆ ನಿಖರ ಕಾರಣ ಏನು ಎಂಬುದು ತನಿಖೆಯಿಂದ ತಿಳಿಯಬೇಕಿದೆ.