ಚಂಡೀಗಢ: ವಾಟ್ಸಪ್ ಗ್ರೂಪ್‌ನಲ್ಲಿ ಹರಿಯಾಣ (Haryana) ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ (Nayab Singh Saini) ಅವರಿಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಪೊಲೀಸರು (Police) ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಜಿಂದ್ ಜಿಲ್ಲೆಯ ದೇವೆರಾರ್ ಗ್ರಾಮದ ಅಜ್ಮೀರ್ ಎಂದು ಗುರುತಿಸಲಾಗಿದೆ. ಅಕ್ಟೋಬರ್ 8 ರಂದು ಹರಿಯಾಣ ವಿಧಾನಸಭಾ ಚುನಾವಣೆಯ ಫಲಿತಾಂಶದ ದಿನ ಆರೋಪಿ, ಸಿಎಂ ನಯಾಬ್ ಸಿಂಗ್ ಸೈನಿ (Nayab Singh Saini) ಅವರಿಗೆ ವಾಟ್ಸಾಪ್ ಗ್ರೂಪ್‌ನಲ್ಲಿ ಕೊಲೆ ಬೆದರಿಕೆ ಹಾಕಿದ್ದ ಎಂದು ಜಿಂದ್ ಪೊಲೀಸ್ ವರಿಷ್ಠಾಧಿಕಾರಿ ಸುಮಿತ್ ಕುಮಾರ್ ಹೇಳಿದ್ದಾರೆ.
- Advertisement -
- Advertisement -
ಈ ವಿಚಾರ ಪೊಲೀಸರ ಗಮನಕ್ಕೆ ಬಂದ ತಕ್ಷಣ ಎಫ್‌ಐಆರ್ ದಾಖಲಿಸಿ ಅಜ್ಮೀರ್‌ನನ್ನು ಬಂಧಿಸಲಾಗಿದೆ. ಈ ಸಂಬಂಧ ತನಿಖೆ ನಡೆಯುತ್ತಿದೆ. ಆರೋಪಿ ಈ ಹಿಂದೆ ಯಾವುದಾದರೂ ಅಪರಾಧ ಕೃತ್ಯದಲ್ಲಿ ಭಾಗಿಯಾಗಿದ್ದಾನಾ ಎಂಬುದರ ಬಗ್ಗೆಯೂ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
- Advertisement -
- Advertisement -
ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ (Congress) ಅಭ್ಯರ್ಥಿ ಮತ್ತು ಕುಸ್ತಿಪಟು ವಿನೇಶ್ ಫೋಗಟ್ ಜೂಲಾನಾ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯೋಗೇಶ್ ಕುಮಾರ್ ಅವರನ್ನು 6,015 ಮತಗಳ ಅಂತರದಿಂದ ಸೋಲಿಸಿದ್ದರು. ರಾಜ್ಯದಲ್ಲಿ ಬಿಜೆಪಿ (BJP) 48 ಸ್ಥಾನಗಳನ್ನು ಗೆದ್ದಿದೆ.