ಶಿವಮೊಗ್ಗ: ವಿದ್ಯಾರ್ಥಿಗಳಿಗೆ ವಾಲಿಬಾಲ್ ತರಬೇತಿ ನೀಡುತ್ತಿದ್ದಾಗ ಶಾಲೆ ಆವರಣದಲ್ಲಿಯೇ ಕುಸಿದು ಬಿದ್ದು ಶಿಕ್ಷಕರೊಬ್ಬರು ಮೃತಪಟ್ಟಿರುವ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಸಾಗರದಲ್ಲಿ ನಡೆದಿದೆ.
ಗಜಾನನ ಹಿರೇಮಠ್ (46)ಮೃತ ಶಿಕ್ಷಕ. ಇವರು ಸಾಗರ ಪಟ್ಟಣದ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ಇಂದು (ಬುಧವಾರ) ಮಧ್ಯಾಹ್ನ ಶಾಲಾ ಆವರಣದಲ್ಲಿ ವಿದ್ಯಾರ್ಥಿಗಳಿಗೆ ವಾಲಿಬಾಲ್ ತರಬೇತಿ ನೀಡುತ್ತಿದ್ದರು. ಈ ವೇಳೆ ಶಿಕ್ಷಕ ಕುಸಿದು ಬಿದ್ದಿದ್ದಾರೆ. ತಕ್ಷಣ ಸ್ಥಳದಲ್ಲಿದ್ದವರು ಸಾಗರ (Sagara) ಉಪ ವಿಭಾಗೀಯ ಆಸ್ಪತ್ರೆಗೆ ಅವರನ್ನು ಕರೆದೊಯ್ಯುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ಜಾಮೀನು ಅರ್ಜಿಯನ್ನು ತುರ್ತು ವಿಚಾರಣೆ ಮಾಡಿ – ಹೈಕೋರ್ಟ್‌ಗೆ ದರ್ಶನ್ ಮನವಿ
ಆಸ್ಪತ್ರೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಪರಶುರಾಮಪ್ಪ, ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಪದಾಧಿಕಾರಿಗಳು, ಶಿಕ್ಷಕರು ಸೇರಿದಂತೆ ಹಲವರು ಭೇಟಿ ನೀಡಿದ್ದರು. ಇದನ್ನೂ ಓದಿ: BMW i7 ಇವಿ ಕಾರಿಗೆ ನಿಂಬೆಹಣ್ಣು, ಮೆಣಸಿನಕಾಯಿ ಕಟ್ಟಿ ಪೂಜೆ ಸಲ್ಲಿಸಿದ ಜರ್ಮನ್ ರಾಯಭಾರಿ