ವಿದ್ಯುತ್ ಶಾಕ್ ತಗುಲಿ ಮಗನ ದಾರುಣ ಸಾವು – ತಾಯಿಯ ಆಕ್ರಂದನ

Public TV
1 Min Read
Chikkaballapua 01

ಚಿಕ್ಕಬಳ್ಳಾಪುರ: ವಿದ್ಯುತ್ ಶಾಕ್ (Electric shock) ತಗುಲಿ ಯುವಕನೊರ್ವ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ (Chikkaballapur) ತಾಲೂಕಿನ ಕುರ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ನರಸಿಂಹಪ್ಪ ಹಾಗೂ ನಾಗಮಣಿ ದಂಪತಿಗಳ ಪುತ್ರ 17 ವರ್ಷದ ಯಶವಂತ್ ಮೃತ ದುರ್ದೈವಿ. ಅಂದಹಾಗೆ ತಂದೆ ತಾಯಿ ಕೂಲಿ ಕೆಲಸ ಮಾಡುವವರಾಗಿದ್ದು, ಹಳೆಯ ಮನೆ ಬಾಡಿಗೆಗೆ ಪಡೆದು ಅಲ್ಲಿಯೇ ಜೀವನ ನಡೆಸುತ್ತಿದ್ದರು. ಇದನ್ನೂ ಓದಿ: ತಲಕಾವೇರಿಯಲ್ಲಿ ತೀಥೋದ್ಭವ ಬಳಿಕ ಹಾರಂಗಿ ಜಲಾಶಯಕ್ಕೆ ಎ ಮಂಜು, ಮಂಥರ್ ಗೌಡ ಬಾಗಿನ ಅರ್ಪಣೆ

Chikkaballapua 02

ಮೃತ ಯಶ್ವಂತ್ ಚಿಕ್ಕಬಳ್ಳಾಪುರ ನಗರದ ಜೂನಿಯರ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡ್ತಿದ್ದ. ಇತ್ತೀಚೆಗೆ ಸುರಿದ ಮಳೆಗೆ ಮನೆಯ ಕಲ್ಲು ಚಪ್ಪಡಿಗಳ ಮೇಲ್ಛಾವಣಿಯಿಂದ ನೀರು ಸೋರಿಕೆಯಾಗಿ ಬಲ್ಬ್‌ಗೆ ಉರಿಯುತ್ತಿರಲಿಲ್ಲವಂತೆ. ಇದರಿಂದ ವಿದ್ಯುತ್‌ ಸಂಪರ್ಕ ಸರಿಮಾಡಲು ಯಶವಂತ್ ಕತ್ತರಿಯಿಂದ ವೈರ್ ಕಟ್ ಮಾಡುವಾಗ ಕೆರೆಂಟ್ ಶಾಕ್ ಹೊಡೆದು ಕೆಳಗೆ ಬಿದ್ದಿದ್ದಾನೆ.

ಈ ವೇಳೆ ಮನೆಯ ಹೊರಗಡೆ ಬಟ್ಟೆ ಒಗೆಯುತ್ತಿದ್ದ ತಾಯಿ ಓಟಿ ಹೋಗಿ ನೋಡುವಷ್ಟರಲ್ಲಿ ಮಗ ಪ್ರಜ್ಞಾಹೀನನಾಗಿ ಬಿದ್ದಿದ್ದ. ಕೂಡಲೇ ಆಟೋ ಮೂಲಕ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಬರಲಾಯಿತು. ಅಷ್ಟರಲ್ಲಾಗಲೇ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಮಗನನ್ನ ಕಳೆದುಕೊಂಡ ತಾಯಿಯ ಆಕ್ರಂದನ ಮುಗಿಲುಮುಟ್ಟಿದೆ. ಇದನ್ನೂ ಓದಿ: ಚುನಾವಣೆ ನೀತಿ ಸಂಹಿತೆ ಕಾರಣದಿಂದ ಪಂಚಮಸಾಲಿ ಮೀಸಲಾತಿ ನಿರ್ಧಾರ ಸಾಧ್ಯವಿಲ್ಲ: ಸಿದ್ದರಾಮಯ್ಯ

Share This Article