Jharkhand Election | 70 ಕ್ಷೇತ್ರಗಳಲ್ಲಿ ಕಾಂಗ್ರೆಸ್‌, ಜೆಎಂಎಂ ಮೈತ್ರಿಕೂಟ ಸ್ಪರ್ಧೆ ಫಿಕ್ಸ್‌

Public TV
2 Min Read
Congress JMM

ರಾಂಚಿ: ಮುಂಬರುವ ಜಾರ್ಖಂಡ್‌ ವಿಧಾನಸಭಾ ಚುನಾವಣೆಗೆ (Jharkhand assembly polls) ಇಂಡಿಯಾ ಮೈತ್ರಿಕೂಟ ಒಟ್ಟಾಗಿ ಸ್ಪರ್ಧಿಸಲಿದೆ. ಕಾಂಗ್ರೆಸ್ ಮತ್ತು ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾ 81 ವಿಧಾನಸಭಾ ಕ್ಷೇತ್ರಗಳ ಪೈಕಿ 70 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ ಎಂದು ಮುಖ್ಯಮಂತ್ರಿ ಹೇಮಂತ್ ಸೊರೇನ್ ಘೋಷಣೆ (Hemant Soren) ಮಾಡಿದ್ದಾರೆ.

ಪಕ್ಷಗಳ ನಡುವೆ ಸೀಟು ಹಂಚಿಕೆ ಕುರಿತು ಮಾತನಾಡಿದ ಅವರು, ಸದ್ಯಕ್ಕೆ ನಾವು ಸೀಟು ಹಂಚಿಕೆಯ ಬಗ್ಗೆ ಎಲ್ಲರೊಂದಿಗೆ ಮಾತುಕತೆ ನಡೆಸಿಲ್ಲ. ಕಾಂಗ್ರೆಸ್‌ (Congress) ಮತ್ತು ಆಡಳಿತಾರೂಢ ಜೆಎಂಎಂ (JMM) 70 ಕ್ಷೇತ್ರಗಳಲ್ಲಿ ಸ್ಪರ್ಧಿಸುವುದು ಖಚಿತವಾಗಿದೆ. ಉಳಿದ 11 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಆರ್‌ಜೆಡಿ ಮತ್ತು ಎಡ ಪಕ್ಷಗಳೊಂದಿಗೆ ಮಾತುಕತೆ ನಡೆಯಲಿದೆ ಎಂದು ತಿಳಿಸಿದ್ದಾರೆ.

HEMANTH SOREN 2

ಜಾರ್ಖಂಡ್‌ ಚುನಾವಣೆಗೆ ಈಗಾಗಲೇ ಮುಹೂರ್ತ ಫಿಕ್ಸ್‌ ಆಗಿದ್ದು, ನ.13 ಮತ್ತು ನ.20 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್‌ 23ರಂದು ಮತ ಎಣಿಕೆ ನಡೆಯಲಿದೆ. ಇದನ್ನೂ ಓದಿ: ಭಾರತ ಎಲ್ಲರಿಗಿಂತ ಮೊದಲು 6G ಅಭಿವೃದ್ಧಿಪಡಿಸಿ ಬಿಡುಗಡೆ ಮಾಡಲಿದೆ: ಪಿಯೂಷ್ ಗೋಯಲ್

2019ರ ಚುನಾವಣೆಯಲ್ಲಿ ಜೆಎಂಎಂ 43 ಸ್ಥಾನಗಳಲ್ಲಿ‌, ಕಾಂಗ್ರೆಸ್‌ 31 ಸ್ಥಾನಗಳಲ್ಲಿ ಸ್ಪರ್ಧಿಸಿತ್ತು. ಈ ಪೈಕಿ ಜೆಎಂಎಂ 30, ಕಾಂಗ್ರೆಸ್ 16 ಮತ್ತು ಆರ್‌ಜೆಡಿ 1 ಸ್ಥಾನಗಳಲ್ಲಿ ಗೆಲುವು ಪಡೆದಿದ್ದವು. ಇದಕ್ಕೂ ಮುನ್ನ 2014 ರಲ್ಲಿ 37 ಸ್ಥಾನಗಳನ್ನು ಪಡೆದಿದ್ದ 2019ರಲ್ಲಿ 25 ಸ್ಥಾನಗಳಲ್ಲಿ ಗೆದ್ದಿತ್ತು. ಎಜೆಎಸ್‌ಯು ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಿ 2 ಸ್ಥಾನಗಳನ್ನು ಗೆದ್ದುಕೊಂಡಿತು. ಈ ಬಾರಿ ಪ್ರತ್ಯೇಕವಾಗಿ ಸ್ಪರ್ಧೆಗಿಳಿದರೆ, ಕೆಲವು ಕ್ಷೇತ್ರಗಳಲ್ಲಿ ಸೋಲು ಎದುರಾಗುವ ಸಾಧ್ಯತೆಯಿದೆ ಎಂದು ಆಂತರಿಕ ಸಮೀಕ್ಷೆಗಳು ಹೇಳಿವೆ. ಹಾಗಾಗಿ ಮೈತ್ರಿಯಾಗಿ ಕಣಕ್ಕಿಳಿಯಲು ನಿರ್ಧರಿಸಿವೆ ಎಂದು ವರದಿಗಳು ತಿಳಿಸಿವೆ.

HEMANTH SOREN 1
2

ಸ್ಥಳೀಯ ಮೂಲಗಳ ಪ್ರಕಾರ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (M-L) ಮತ್ತು ಮಾರ್ಕ್ಸ್‌ವಾದಿ ಸಮನ್ವಯ ಸಮಿತಿ (MMC) ಕೂಡ ಈ ಚುನಾವಣೆಯಲ್ಲಿ ಜೆಎಂಎಂ ಮತ್ತು ಕಾಂಗ್ರೆಸ್‌ ನೊಂದಿಗೆ ಸೇರಿ ಚುನಾವಣಾ ಅಖಾಡಕ್ಕಿಳಿಯಲು ಬಯಸಿವೆ. ಇನ್ನೂ ಕಳೆದ ಚುನಾವಣೆಯಲ್ಲಿ 7 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ರಾಷ್ಟ್ರೀಯ ಜನತಾ ದಳ ಈ ಬಾರಿ ಕಡಿಮೆ ಸ್ಥಾನಗಳಲ್ಲಿ ಸ್ಪರ್ಧಿಸುವ ನಿರೀಕ್ಷೆಯಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಮಾಧ್ಯಮಗಳ ಎದುರು ನಕಲಿ ಎನ್‌ಕೌಂಟರ್‌ ಆರೋಪ ಮಾಡಿದ ಬಿಷ್ಣೋಯ್ ಗ್ಯಾಂಗ್‌ನ ಶೂಟರ್‌!

Share This Article