Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನೆಲದವರೆಗೂ ಬಗ್ಗಿದ್ದೇನೆ, ಇನ್ನೂ ಬಗ್ಗಲು ನನ್ನಿಂದ ಸಾಧ್ಯವಿಲ್ಲ: ಕುಮಾರಸ್ವಾಮಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನೆಲದವರೆಗೂ ಬಗ್ಗಿದ್ದೇನೆ, ಇನ್ನೂ ಬಗ್ಗಲು ನನ್ನಿಂದ ಸಾಧ್ಯವಿಲ್ಲ: ಕುಮಾರಸ್ವಾಮಿ

Bengaluru City

ನೆಲದವರೆಗೂ ಬಗ್ಗಿದ್ದೇನೆ, ಇನ್ನೂ ಬಗ್ಗಲು ನನ್ನಿಂದ ಸಾಧ್ಯವಿಲ್ಲ: ಕುಮಾರಸ್ವಾಮಿ

Public TV
Last updated: October 22, 2024 9:54 pm
Public TV
Share
3 Min Read
HD Kumaraswamy 1
SHARE

ಬೆಂಗಳೂರು: ಚನ್ನಪಟ್ಟಣ ಟಿಕೆಟ್ ವಿಷಯಕ್ಕೆ ನೆಲದವರೆಗೂ ಬಗ್ಗಿದ್ದೇನೆ. ಇನ್ನೂ ಬಗ್ಗಿ ಎಂದರೆ ಎಲ್ಲಿಗೆ ಬಗ್ಗಲಿ. ನನ್ನ ತಾಳ್ಮೆ, ಸಹನೆಗೂ ಮಿತಿ ಇದೆ. ಅಭ್ಯರ್ಥಿ ವಿಷಯದಲ್ಲಿ ಕಾರ್ಯಕರ್ತರ ಭಾವನೆಗಳಿಗೆ ವಿರುದ್ಧವಾಗಿ ನಿರ್ಧಾರ ಕೈಗೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಸಚಿವರು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಮಾತುಗಳಲ್ಲಿ ಹೇಳಿದರು.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಕಾರ್ಯಕರ್ತರು ಮುಖಂಡರ ಸಭೆಯಲ್ಲಿ ಮಾತನಾಡಿದರು. ಈ ರಾಜ್ಯದಲ್ಲಿ ನನ್ನಷ್ಟು ಉಪ ಚುನಾವಣೆಗಳನ್ನು ಎದುರಿಸಿದ, ಯಶಸ್ವಿಯಾಗಿ ನಿಭಾಯಿಸಿದ ವ್ಯಕ್ತಿ ಇನ್ನೊಬ್ಬರಿಲ್ಲ. ಎಂತೆಂತಹ ಚುನಾವಣೆಗಳನ್ನು, ಅಗ್ನಿಪರೀಕ್ಷೆಗಳನ್ನು ಎದುರಿಸಿದ್ದೇನೆ. ಚನ್ನಪಟ್ಟಣ ಚುನಾವಣೆ ಎದುರಿಸುವುದಕ್ಕೆ ನನಗೆ ಭಯವೇ? ಸಾಧ್ಯವೇ ಇಲ್ಲ ಎಂದು ಕೇಂದ್ರ ಸಚಿವರು ಗುಡುಗಿದರು.

ನಿಮ್ಮಂಥ ಕಾರ್ಯಕರ್ತರು ಜೊತೆಯಲ್ಲಿ ಇರಬೇಕಾದರೆ ನಾವು ಹೆದುರುತ್ತೇವೆಯೇ? ನೆಲದವರಿಗೆ ಬಗ್ಗಿದ್ದೇನೆ, ಜೆಡಿಎಸ್ ಮುಗಿಸಲು ಅನೇಕರು ನಮ್ಮಿಂದಲೇ ಬೆಳೆದವರು ಎಂತೆಂಥ ಮಾತಾಡಿದ್ದಾರೆ. ನಾನು ಬಗ್ಗಿರುವುದು ಅಧಿಕಾರಕ್ಕಾಗಿ ಅಲ್ಲಾ. ವೈಯಕ್ತಿಕವಾಗಿ ನಾನು ಮಾಡದಿರುವ ತಪ್ಪಿಗೆ ತಲೆಕೊಟ್ಟಿದ್ದೇನೆ. ಈ ದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಮೂಲೋತ್ಪಾಟನೆ ಮಾಡಬೇಕು ಎನ್ನುವ ಪ್ರಧಾನಿ ಮೋದಿ ಸಂಕಲ್ಪಕ್ಕೆ ಹೆಗಲಾಗಿ ನಿಂತಿದ್ದೇನೆ ಎಂದು ಅವರು ಹೇಳಿದರು.

ನಾಲ್ಕು ತಿಂಗಳಾಯಿತು ನಾನು ಮಂತ್ರಿಯಾಗಿ. ಆರೋಗ್ಯ ಹಾಳು ಮಾಡಿಕೊಂಡು ಏತಕ್ಕಾಗಿ ಇಷ್ಟೆಲ್ಲಾ ಮಾಡಬೇಕು. ನನ್ನಿಂದ ಜನರಿಗೆ ಅಲ್ಪ ಸ್ವಲ್ಪವಾದರೂ ಸಹಾಯ ಆಗುತ್ತದೆಯೇ ಎಂದು ಒದ್ದಾಡುತ್ತಿದ್ದೇನೆ. ಎನ್‌ಡಿಎ ಮೈತ್ರಿ ಭದ್ರವಾಗಿದೆ. ಪ್ರಧಾನಿ ಮೋದಿ ಅವರು ದೇವೇಗೌಡರಿಗೆ ಕೊಡುವ ಗೌರವವನ್ನು ಯಾರಿಗೂ ಕೊಡಲ್ಲ. ಅವರಿಬ್ಬರ ನಡುವಿನ ಗೌರವಭಾವ ಎಂತದ್ದು ಎನ್ನುವುದನ್ನು ನಾನು ನೋಡಿದ್ದೇನೆ. ಆ ಸಂಬಂಧಕ್ಕೆ ಚ್ಯುತಿ ಬರಬಾರದು. ಅದಕ್ಕಾಗಿ ಬಗ್ಗಿದ್ದೇನೆ, ಇನ್ನೂ ಬಗ್ಗಿ ಎಂದರೆ ನನ್ನಿಂದ ಸಾಧ್ಯವಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ನವದೆಹಲಿಯಲ್ಲಿ ಭೇಟಿಯಾಗಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಅವರಿಗೆ (ಯೋಗೇಶ್ವರ್) ರಾಜೀನಾಮೆ ಕೊಟ್ಟು ಜೆಡಿಎಸ್‌ನಿಂದ ಚುನಾವಣೆಗೆ ನಿಲ್ಲುವುದಕ್ಕೆ ಹೇಳುತ್ತೇವೆ ಎಂದು ಹೇಳಿದ್ದರು. ನಾನು ಈ ಸಂಬಂಧ ಉಳಿಯಬೇಕು, ಒಂದು ಸ್ಥಾನ ಮುಖ್ಯವಲ್ಲ, ಎನ್‌ಡಿಎ ಮೈತ್ರಿ ಗೆಲ್ಲಬೇಕು ಎಂದು ಹೇಳುತ್ತಲೇ ಇದ್ದೇನೆ. ಮೋದಿ, ಅಮಿತ್ ಶಾ, ನಡ್ಡಾ ಅವರಂತಹ ನಾಯಕರ ಜತೆ ಸಂಬಂಧ ಕಡಿದುಕೊಳ್ಳಬೇಕಾ? ಎಂದು ಅವರು ಕಿಡಿಕಾರಿದರು.

ದೆಹಲಿಯ ಬಿಜೆಪಿ ನಾಯಕರು ಜೆಡಿಎಸ್ ಪಕ್ಷಕ್ಕೆ ಬಹಳ ಗೌರವ ಕೊಟ್ಟಿದ್ದಾರೆ. ನನಗೆ ಕೆಲಸ ಮಾಡಲು ಮುಕ್ತ ಅವಕಾಶ ನೀಡಿದ್ದಾರೆ. ಏನೇ ಮನವಿ ಮಾಡಿದರೂ ತಕ್ಷಣ ಸ್ಪಂದಿಸುತ್ತಿದ್ದಾರೆ. ನಿಮ್ಮ ಭಾವನೆಗಳಿಗೆ ಧಕ್ಕೆ ಆಗದಂತೆ ನಿರ್ಧಾರ ಮಾಡುತ್ತೇನೆ. ನಿಮ್ಮ ಮಾತಿಗೆ ಗೌರವ ನೀಡುತ್ತೇನೆ. ಕಾರ್ಯಕರ್ತರು ಒಟ್ಟಾಗಿರಿ, ಯಾರಿಗೂ ತಲೆಬಾಗಬೇಕಿಲ್ಲ. ಗೌರವಕ್ಕೆ ತಲೆಬಾಗೋಣ.‌ ಇನ್ನು ಮೂರು ದಿನ‌ ಸಮಯ ಇದೆ. ನನ್ನ ಕಾರ್ಯಕರ್ತರ ಭಾವನೆಯೇ ಅಂತಿಮ. ಸಮಯ ಕೊಡಿ ಎಂದು ಕುಮಾರಸ್ವಾಮಿ ಅವರು ಕಾರ್ಯಕರ್ತರನ್ನು ಮನವಿ ಮಾಡಿಕೊಂಡರು.

ಕಾಂಗ್ರೆಸ್ ಪಕ್ಷದವರು ಕುತಂತ್ರ ಮಾಡಿ ನಮ್ಮ ಪಕ್ಷವನ್ನು ಪಾತಾಳಕ್ಕೆ ತುಳಿದಿದ್ದಾರೆ. ಅವರು ತುಳಿದಷ್ಟೂ ನಾವು ಪ್ರಬಲವಾಗಿ ಎದ್ದು ಬಂದಿದ್ದೇವೆ. ಲೋಕಸಭೆ ಚುನಾವಣೆಗೆ ಮೊದಲು ಜೆಡಿಎಸ್ ಮುಗಿದೇ ಹೋಯಿತು ಎಂದು ಜಾಗಟೆ ಹೊಡೆಯುತ್ತಿದ್ದರು. ಈಗ ಇದೇ ಕುಮಾರಸ್ವಾಮಿ ಏನು ಎನ್ನುವುದು ಅವರಿಗೆ ಅರ್ಥವಾಗಿದೆ. ಇಂಥ ಕಾಂಗ್ರೆಸ್ ನವರಿಗೆ ನಾನು ಹೆದರಲ್ಲ. ಚಿನ್ನದಂತಹ ಕಾರ್ಯಕರ್ತರು ಇದ್ದೀರಿ. ಧೈರ್ಯವಾಗಿ ಚುನಾವಣೆ ಎದುರಿಸೋಣ. ಇದೊಂದು ಅಗ್ನಿಪರೀಕ್ಷೆ ನಿಜ. ಹಾಗಂತ ಎದೆಗುಂದಬೇಕಿಲ್ಲ ಎಂದು ಕಾರ್ಯಕರ್ತರಿಗೆ ಮನವಿ ಮಾಡಿದರು ಕೇಂದ್ರ ಸಚಿವರು.

ಕಾರ್ಯಕರ್ತರ ಆಗ್ರಹಕ್ಕೆ ಮಣಿದು ಭಾಷಣ ಮೊಟಕುಗೊಳಿಸಿದ HDK
ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರಿಗೆ ಟಿಕೆಟ್ ಕೊಡಬೇಕು. ಯಾವುದೇ ಕಾರಣಕ್ಕೂ ಯೋಗೇಶ್ವರ್ ಅವರಿಗೆ ಕೊಡಬಾರದು ಎಂದು ಚನ್ನಪಟ್ಟಣ ಕಾರ್ಯಕರ್ತರು ಗದ್ದಲ ಎಬ್ಬಿಸಿದರು. ನಿಖಿಲ್ ಕುಮಾರಸ್ವಾಮಿ ಅವರು ಭಾಷಣ ಮಾಡುವಾಗಲೂ ಪದೇಪದೆ ಅಡ್ಡಿಪಡಿಸಿ, ನಿಖಿಲ್ ಅವರ ಹೆಸರನ್ನು ಘೋಷಣೆ ಮಾಡುವಂತೆ ಒತ್ತಾಯಿಸಿದರು.

ನಮ್ಮನ್ನು ಯೋಗೇಶ್ವರ್ ಹಿಂಸಿಸಿದ್ದಾರೆ. ನೀವು ಶಾಸಕರಾಗಿದ್ದಾಗಲೇ ನಮಗೆ ಕೊಡಬಾರದ ಕಾಟ ಕೊಟ್ಟರು. ಆ ವ್ಯಕ್ತಿಯೇ ಶಾಸಕರಾಗಿದ್ದಾಗ ಜೆಡಿಎಸ್ ಕಾರ್ಯಕರ್ತರು ಪ್ರತಿದಿನವೂ ಪೊಲೀಸ್ ಠಾಣೆಗೆ ಅಲೆಯಬೇಕಾಗಿತ್ತು. ಒಂದು ವೇಳೆ ನೀವು ನಿಖಿಲ್ ಅವರನ್ನು ಬಿಟ್ಟು ಯೋಗೇಶ್ವರ್‌ಗೆ ಮಣೆ ಹಾಕಿದರೆ ನಮ್ಮ ಆಕ್ರೋಶವನ್ನು ಎದುರಿಸಬೇಕಾಗುತ್ತದೆ ಎಂದು ಹಠ ಹಿಡಿದರು ಕಾರ್ಯಕರ್ತರು.

ಕಾರ್ಯಕರ್ತರ ಕೂಗಾಟ, ಆಕ್ರೋಶದ ಕಾರಣದಿಂದ ಕುಮಾರಸ್ವಾಮಿ ಅವರು ಭಾಷಣ ಮುಂದುವರಿಸಲು ಆಗಲಿಲ್ಲ. ಮೊದಲು ನಿಖಿಲ್ ಅವರ ಹೆಸರು ಘೋಷಣೆ ಮಾಡಿ, ಆಮೇಲೆ ಬೇಕಾದರೆ ನಿಮ್ಮ ಭಾಷಣ ಕೇಳುತ್ತೇವೆ ಎಂದರು. ಕೊನೆಗೆ, ನನ್ನ ಆರೋಗ್ಯ ಸರಿ ಇಲ್ಲ. ಮಾತನಾಡಲು ಅವಕಾಶ ಕೊಡಿ ಎಂದರೂ ಕಾರ್ಯಕರ್ತರು ಕೇಳಲಿಲ್ಲ. ಕೊನೆಗೂ ಗದ್ದಲದಲ್ಲಿಯೇ ಕೇಂದ್ರ ಸಚಿವರು ಭಾಷಣ ಮೊಟಕು ಮಾಡಿದರು.

TAGGED:bengaluruChannapatnah d kumaraswamyಚನ್ನಪಟ್ಟಣ ಉಪಚುನಾವಣೆಬೆಂಗಳೂರುಹೆಚ್‌.ಡಿ.ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Vijay trisha
ಡಿವೋರ್ಸ್ ಕೇಸ್ ಮಧ್ಯೆ ಒಂದೇ ಬಣ್ಣದ ಉಡುಗೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ವಿಜಯ್-ತ್ರಿಶಾ
Cinema Latest National Top Stories
Samantha Ruth Prabhu
ಶಿವಮೊಗ್ಗ | ಹೊಸನಗರದಲ್ಲಿ ಹೋಳಿಯಾಡಿದ ಸಮಂತಾ
Cinema Latest Shivamogga South cinema Top Stories
Rashmika Vijay 4
ರಶ್ಮಿಕಾ ಮಂದಣ್ಣ – ವಿಜಯ್ ದೇವರಕೊಂಡ ಆರತಕ್ಷತೆಗೆ ʻತುಳಸಿʼ ಮ್ಯಾಜಿಕ್‌
Cinema Latest Main Post
Love Mocktail
Toxic ಪೋಸ್ಟ್‌ಪೋನ್‌ ಬಳಿಕ ಲವ್ ಮಾಕ್ಟೇಲ್-3 ರಿಲೀಸ್ ಡೇಟ್ ಬದಲು
Cinema Latest Sandalwood Top Stories

You Might Also Like

Axar Patel
Cricket

ಸಂಜು ಬ್ಯಾಟಿಂಗ್‌, ಬುಮ್ರಾ ಬೌಲಿಂಗ್‌, ಅಕ್ಷರ್‌ ಸ್ಟನ್ನಿಂಗ್‌ ಕ್ಯಾಚ್‌ – 7 ರನ್‌ಗಳ ರೋಚಕ ಜಯ, 4ನೇ ಬಾರಿ ಟೀಂ ಇಂಡಿಯಾ ಫೈನಲಿಗೆ

Public TV
By Public TV
41 minutes ago
West Bengal Governor CV Ananda Bose Resigns
Latest

ಪಶ್ಚಿಮ ಬಂಗಾಳ ರಾಜ್ಯಪಾಲ ಆನಂದ ಬೋಸ್ ರಾಜೀನಾಮೆ

Public TV
By Public TV
2 hours ago
Sanju Samson 1
Cricket

ಸ್ಫೋಟಕ ಅರ್ಧಶತಕ ಸಿಡಿಸಿ ಕೊಹ್ಲಿ ದಾಖಲೆಯನ್ನು ಸರಿಗಟ್ಟಿದ ಸಂಜು ಸ್ಯಾಮ್ಸನ್‌

Public TV
By Public TV
3 hours ago
mangaluru Aadhar Card
Dakshina Kannada

ನೇತ್ರಾವತಿ ನದಿ ತಟದಲ್ಲಿ ರಾಶಿ ರಾಶಿ ಆಧಾರ್‌ಕಾರ್ಡ್ ಪತ್ತೆ

Public TV
By Public TV
3 hours ago
internal conflict in davanagere bjp
Davanagere

ದಾವಣಗೆರೆ ಬಿಜೆಪಿಯಲ್ಲಿ ನಿಲ್ಲದ ಬಣ ಬಡಿದಾಟ – ಸಂಧಾನ ಸಭೆ ವಿಫಲ

Public TV
By Public TV
3 hours ago
ಬೆಂಗಳೂರು ವಿಮಾನ ನಿಲ್ದಾಣ
Bengaluru City

ಮತ್ತೆ ಬೆಂಗಳೂರು ಏರ್‌ಪೋರ್ಟ್‌ಗೆ ಜಾಗತಿಕ ಗೌರವ – ಸತತ 4ನೇ ಬಾರಿ ಪ್ರಶಸ್ತಿ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?