Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೆಂಗೇರಿ ಕೆರೆಯಲ್ಲಿ ಮುಳುಗಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ 5 ಲಕ್ಷ ಪರಿಹಾರ: ಡಿಕೆಶಿ ಘೋಷಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೆಂಗೇರಿ ಕೆರೆಯಲ್ಲಿ ಮುಳುಗಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ 5 ಲಕ್ಷ ಪರಿಹಾರ: ಡಿಕೆಶಿ ಘೋಷಣೆ

Bengaluru City

ಕೆಂಗೇರಿ ಕೆರೆಯಲ್ಲಿ ಮುಳುಗಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ 5 ಲಕ್ಷ ಪರಿಹಾರ: ಡಿಕೆಶಿ ಘೋಷಣೆ

Public TV
Last updated: October 23, 2024 7:54 pm
Public TV
Share
3 Min Read
children died in kengeri lake d.k.shivakumar
SHARE

– ರಾಜಕಾಲುವೆ ಒತ್ತುವರಿ ತೆರವಿಗೆ ನಿರ್ದಾಕ್ಷಿಣ್ಯ ಕ್ರಮಕ್ಕೆ ಡಿಸಿಎಂ ಆದೇಶ

ಬೆಂಗಳೂರು: ಕೆಂಗೇರಿ ಕೆರೆಯಲ್ಲಿ ಮುಳುಗಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ಬಿಬಿಎಂಪಿ ವತಿಯಿಂದ 5 ಲಕ್ಷ ಪರಿಹಾರ, ಮನೆಗೆ ನೀರು ನುಗ್ಗಿ ತೊಂದರೆ ಉಂಟಾಗಿರುವವರಿಗೆ ತಲಾ 10 ಸಾವಿರ ಪರಿಹಾರ, ವಸತಿ ಇಲ್ಲದವರಿಗೆ ವಾಸಿಸಲು ತಾತ್ಕಾಲಿಕ ವಸತಿ ಹಾಗೂ ಊಟದ ವ್ಯವಸ್ಥೆ ಮಾಡಿಕೊಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K.Shivakumar) ತಿಳಿಸಿದರು.

ಇದರ ಜತೆಗೆ ನಗರದಾದ್ಯಂತ ಮುಲಾಜಿಲ್ಲದೆ ರಾಜಕಾಲುವೆ ಒತ್ತುವರಿ ತೆರವಿಗೆ ಸೂಚನೆ ನೀಡಲಾಗಿದ್ದು, ಮಳೆ ನೀರುಗಾಲುವೆಗಳನ್ನು ಸ್ವಚ್ಛಗೊಳಿಸಿ ಸರಾಗವಾಗಿ ನೀರು ಹರಿಯುವಂತೆ ಮಾಡಲು ವಿಶ್ವಬ್ಯಾಂಕಿನಿಂದ 1 ಸಾವಿರ ಕೋಟಿ ಸಾಲ ಪಡೆದು ಈಗಾಗಲೇ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು.

d.k.shivakumar bengaluru rains

ಮಳೆಯಿಂದ ಸಮಸ್ಯೆಗೆ ಒಳಗಾಗಿರುವ ಯಲಹಂಕದ ಕೇಂದ್ರೀಯ ವಿಹಾರ ವಸತಿ ಸಮುಚ್ಚಯ, ಬ್ಯಾಟರಾಯನಪುರದ ಮರಿಯಣ್ಣಪಾಳ್ಯ, ಕೆ.ಆರ್. ಪುರಂನ ಹೊರಮಾವಿನ ಶ್ರೀ ಸಾಯಿ ಬಡಾವಣೆಗೆ ಶಿವಕುಮಾರ್ ಅವರು ಪಾಲಿಕೆ ಅಧಿಕಾರಿಗಳ ತಂಡದೊಂದಿಗೆ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಪರಿಹಾರ ಕಾರ್ಯ ವೀಕ್ಷಣೆ ಜೊತೆಗೆ ಅಪಾರ್ಟ್‌ಮೆಂಟ್ ನಿವಾಸಿಗಳ ಸಂಘದ ಸದಸ್ಯರ ಜೊತೆ ಪರಿಸ್ಥಿತಿ ಬಗ್ಗೆ ಚರ್ಚೆ ಮಾಡಿದರು. ಎಸ್‌ಡಿಆರ್‌ಎಫ್ ಮತ್ತು ಎನ್‌ಡಿಆರ್‌ಎಫ್ ಸಿಬ್ಬಂದಿ ಜೊತೆ ರಕ್ಷಣಾ ಕಾರ್ಯದ ಬಗ್ಗೆ ಮಾಹಿತಿ ಪಡೆದರು. ಇದೇ ವೇಳೆ ಸ್ಥಳಾಂತರಗೊಂಡ ನಿವಾಸಿಗಳಿಗೆ ಸೂಕ್ತ ಮೂಲಸೌಕರ್ಯಗಳನ್ನು ಒದಗಿಸಿಕೊಡಬೇಕು ಎಂದು ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಭೇಟಿ ವೇಳೆ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಡಿಸಿಎಂ, ನೀರುಗಾಲುವೆ ಸ್ವಚ್ಛತಾ ಕೆಲಸದ ವಿಚಾರವಾಗಿ ಕಂದಾಯ ಸಚಿವರಾದ ಕೃಷ್ಣಬೈರೇಗೌಡರು ಕೆಲಸ ಮಾಡುತ್ತಿದ್ದಾರೆ. ಎನ್‌ಡಿಆರ್‌ಎಫ್ ಅನುದಾನ ಸೇರಿದಂತೆ ವಿವಿಧ ಯೋಜನೆಗಳ ಅಡಿ ಕೆರೆಗಳ ಸ್ವಚ್ಛತೆ, ಹೂಳು ತೆಗೆಯುವ ಕೆಲಸ ಮಾಡಲಾಗುವುದು. ಶೀಘ್ರದಲ್ಲೇ ಕೆರೆ ನಿರ್ವಹಣಾ ಸಮಿತಿಯ ಸಭೆ ಕರೆಯಲಾಗುವುದು ಎಂದು ಹೇಳಿದರು.

ಮುಲಾಜಿಲ್ಲದೇ ರಾಜಕಾಲುವೆ ಒತ್ತುವರಿ ತೆರವುಗೊಳಿಸಿ
ಅನೇಕ ಕಡೆ ಖಾಸಗಿಯವರು ರಾಜಕಾಲುವೆ ಒತ್ತುವರಿ ತೆರವುಗೊಳಿಸದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ. ಇವರು ಕೆಲಸ ಮಾಡಲು ಬಿಡುತ್ತಿಲ್ಲ. ತುರ್ತು ಸಂದರ್ಭದಲ್ಲಿ ಇವುಗಳಿಗೆ ಅವಕಾಶವಿಲ್ಲ. ತೆರವುಗೊಳಿಸಲು ಕಾನೂನಿನಲ್ಲಿ ಅವಕಾಶವಿದೆ. ಯಾವುದನ್ನೂ ಪರಿಗಣಿಸದೆ ಕೂಡಲೇ ಎಲ್ಲಾ ಒತ್ತುವರಿಗಳನ್ನು ತೆರವುಗೊಳಿಸಿ ಹಾಗೂ ಪ್ರವಾಹ ಪರಿಸ್ಥಿತಿ ನಿರ್ವಹಣೆ ಅಡಿಯಲ್ಲಿ ಕೂಡಲೇ ಆದೇಶ ಹೊರಡಿಸಿ ಎಂದು ಜಿಲ್ಲಾಧಿಕಾರಿಗಳಿಗೆ ತಿಳಿಸಿದ್ದೇನೆ. ಜೊತೆಗೆ ಬಿಡಿಎ ಮತ್ತು ಬಿಬಿಎಂಪಿಗೂ ಸೂಚನೆ ನೀಡಿದ್ದೇನೆ. ಯಾರೇ ಖಾಸಗಿಯವರು ಅಡ್ಡಿಪಡಿಸಿದರೂ ನಾವು ನಮ್ಮ ಕೆಲಸ ಮಾಡುತ್ತೇವೆ. ಇಂತಹ ಸಂದರ್ಭದಲ್ಲಿ ನ್ಯಾಯಲಯದ ಪ್ರಕರಣ ಮುಖ್ಯವಲ್ಲ, ನಮಗೆ ಸಾರ್ವಜನಿಕರ ಹಿತ ಮುಖ್ಯ. ನೀರು ಸರಾಗವಾಗಿ ಹರಿಯುವ ಕಡೆ ಒತ್ತುವರಿ ತೆರವುಗೊಳಿಸಲು ಕೂಡಲೇ ಕೆಲಸ ಮಾಡಬೇಕು ಎಂದು ಆದೇಶ ನೀಡಿದ್ದೇನೆ ಎಂದರು.

d.k.shivakumar bengaluru rains 1

ಯಲಹಂಕದ ಕೇಂದ್ರೀಯ ವಿಹಾರದಲ್ಲಿ 8 ಬ್ಲಾಕ್‌ಗಳಿದ್ದು ಸುಮಾರು 600 ಕ್ಕೂ ಹೆಚ್ಚು ಫ್ಲಾಟ್‌ಗಳಿವೆ. ಇವುಗಳನ್ನು ಸದ್ಯದ ಮಟ್ಟಿಗೆ ಬಿಬಿಎಂಪಿ ರಕ್ಷಣಾ ಕಾರ್ಯಕ್ಕಾಗಿ ಸುಪರ್ದಿಗೆ ತೆಗೆದುಕೊಂಡಿದೆ. 95% ರಷ್ಟು ನಿವಾಸಿಗಳ ಸ್ಥಳಾಂತರಕ್ಕೆ ಸಹಕಾರ ನೀಡಿದ್ದಾರೆ. 20 ಕುಟುಂಬಗಳು ವಿದ್ಯುತ್ ಸಂಪರ್ಕವಿಲ್ಲದಿದ್ದರೂ ನಾವು ಇರುತ್ತೇವೆ ಎಂದು ಹೇಳಿದ್ದಾರೆ. ಅವರನ್ನು ಇಲ್ಲಿಯೇ ಬಿಡಲು ಆಗುವುದಿಲ್ಲ. ಏಕೆಂದರೆ ಕುಡಿಯಲು ನೀರಿಲ್ಲ, ತಿನ್ನಲು ಆಹಾರವಿಲ್ಲ. ಹೀಗಿದ್ದಾಗ ಏನಾದರೂ ತೊಂದರೆ ಆದರೆ ನಾವು ಜವಾಬ್ದಾರರಾಗುತ್ತೇವೆ. ಈ ಕಾರಣಕ್ಕೆ ಅವರ ಮನವೊಲಿಸಿ ಹತ್ತಿರದಲ್ಲಿಯೇ ವಸತಿಗೃಹಗಳಲ್ಲಿ ವ್ಯವಸ್ಥೆ ಮಾಡಿಕೊಡಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.

ಅನೇಕ ವಯಸ್ಸಾದವರು ಮನೆ ಬಿಟ್ಟು ಹೊರಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಮನೆಯ ಬಗ್ಗೆ ಭಾವನಾತ್ಮಕವಾಗಿ ಯೋಚನೆ ಮಾಡುತ್ತಿದ್ದಾರೆ. ಅಂತಹವರಿಗೆ ಒಂದು ವಾರದ ಮಟ್ಟಿಗೆ ಹತ್ತಿರದಲ್ಲಿಯೇ ವಸತಿಗೃಹಗಳಲ್ಲಿ ವ್ಯವಸ್ಥೆ ಮಾಡಿಕೊಡಲಾಗುವುದು. ಇದು ನಮ್ಮ ಜವಾಬ್ದಾರಿ. ಇಲ್ಲಿನ ನಿವಾಸಿಗಳ ಸಂಘದವರೂ ಸಹಕಾರ ನೀಡುತ್ತಿದ್ದಾರೆ. ತೊಂದರೆಗೆ ಒಳಗಾದವರಿಗೆ ಅವರ ಮನೆಯಂತೆಯೇ ಸೌಲಭ್ಯ ಕಲ್ಪಿಸಿಕೊಡಲಾಗುವುದು. ನಿವಾಸಿಗಳು ಮುಜುಗರಕ್ಕೆ ಒಳಗಾಗದೆ ಅಧಿಕಾರಿಗಳ ಬಳಿ ಕೇಳಿ ಸೌಲಭ್ಯ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

d.k.shivakumar bengaluru rains 2

ಮಳೆ ನೀರು ತುಂಬಿಕೊಂಡಿರುವುದಕ್ಕೆ ಭವಿಷ್ಯದಲ್ಲಿ ಪರಿಹಾರವೇನು ಎಂದು ಕೇಳಿದಾಗ, ಬೆಂಗಳೂರಿನ ಹಾಗೂ ಯಲಹಂಕ ಇತಿಹಾಸದಲ್ಲಿಯೇ 115-120 ವರ್ಷಗಳ ನಂತರ ವಾಡಿಕೆಗಿಂತ ಹೆಚ್ಚು ಮಳೆ ಸುರಿದಿದೆ. ನಮಗೆ ಇಷ್ಟು ಜಾಸ್ತಿ ಮಳೆ ಬರುತ್ತದೆ ಎನ್ನುವ ಕಲ್ಪನೆಯೂ ಇರಲಿಲ್ಲ. ಎಲ್ಲೆಲ್ಲಿ ನೀರು ನುಗ್ಗುತ್ತಿದೆ ಹಾಗೂ ನೀರು ಸರಾಗವಾಗಿ ಹರಿಯುವ ವ್ಯವಸ್ಥೆ ಮಾಡುವುದಕ್ಕೆ ಜಾಗಗಳನ್ನು ಗುರುತಿಸಲಾಗುತ್ತಿದೆ ಎಂದು ಹೇಳಿದರು.

ಅಕ್ಕಪಕ್ಕದಲ್ಲಿ ಕೆರೆಗಳ ಪಕ್ಕ ನೀರು ಹರಿಯಲು ಮತ್ತು ನಿಂತುಕೊಳ್ಳಲು ಜಾಗವಿತ್ತು, ಈಗ ಜಾಗ ಕಡಿಮೆಯಾಗಿದೆ. ಅದಕ್ಕಾಗಿ ಶಾಶ್ವತ ಪರಿಹಾರವನ್ನು ಕಲ್ಪಿಸಲಾಗುವುದು. ಈ ರೀತಿಯ ಅವಘಡ ನಮ್ಮಲ್ಲಿ ಮಾತ್ರವಲ್ಲ, ಮುಂಬೈ ಸೇರಿದಂತೆ ಅನೇಕ ನಗರಗಳಲ್ಲಿ ಆಗಿದೆ. ಇತ್ತೀಚೆಗೆ ಫ್ರಾನ್ಸ್‌ನಲ್ಲಿಯೂ ತೊಂದರೆ ಆಗಿದೆ. ನಾವು ಶೀಘ್ರ ಸಮಸ್ಯೆ ಬಗೆಹರಿಸುತ್ತೇವೆ ಎಂದು ಭರವಸೆ ಮಾತುಗಳನ್ನಾಡಿದರು.

TAGGED:bengaluruBengaluru Rainskengeriಕೆಂಗೇರಿಬೆಂಗಳೂರುಬೆಂಗಳೂರು ಮಳೆ
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

Assam Election Fear of Operation Kamala Congress MLAs shift to Bidadi Wonderla Resort Bengaluru 1
Bengaluru City

ಕ್ರಾಸ್‌ ವೋಟ್‌ ಭೀತಿ – ಒಡಿಶಾ ಕೈ ಶಾಸಕರು ಬಿಡದಿ ರೆಸಾರ್ಟ್‌ಗೆ ಶಿಫ್ಟ್‌

Public TV
By Public TV
37 minutes ago
Donald Trump 2
Latest

ತೈಲ ಬೆಲೆ ಏರಿಕೆಯಾದರೆ ಅಮೆರಿಕ ಭಾರೀ ಹಣ ಗಳಿಸಲಿದೆ: ಡೊನಾಲ್ಡ್‌ ಟ್ರಂಪ್‌

Public TV
By Public TV
1 hour ago
Tourism War Effect
Bengaluru City

14 ದಿನಗಳಾದ್ರೂ ಕೊನೆಗಾಣದ ಮಧ್ಯಪ್ರಾಚ್ಯ ಯುದ್ಧ – ಪ್ರವಾಸೋದ್ಯಮಕ್ಕೂ ತಟ್ಟಿದ ವಾರ್ ಎಫೆಕ್ಟ್

Public TV
By Public TV
2 hours ago
Pakistan Strikes Afghanistan fuel storage facility Kabul Kandahar
Latest

ಅಫ್ಘಾನಿಸ್ತಾನದ ಮೇಲೆ ಪಾಕ್‌ ಮತ್ತೆ ಏರ್‌ಸ್ಟ್ರೈಕ್‌ – ರಂಜಾನ್ ತಿಂಗಳಿನಲ್ಲೇ ದಾಳಿ ನಡೆಸಿದ್ದಕ್ಕೆ ತಾಲಿಬಾನ್‌ ಕಿಡಿ

Public TV
By Public TV
2 hours ago
Cyber Crime
Bengaluru City

ಡಿಜಿಟಲ್ ಅರೆಸ್ಟ್ ಸುಳಿಯಲ್ಲಿ ಕರ್ನಾಟಕ – 3 ವರ್ಷಕ್ಕೆ ಬರೋಬ್ಬರಿ 468 ಕೋಟಿ ರೂ. ಕಳೆದುಕೊಂಡ ಜನ

Public TV
By Public TV
3 hours ago
Bonded Labour Udupi
Latest

ಉಡುಪಿ| ವ್ಯಕ್ತಿಯನ್ನು 30 ವರ್ಷದಿಂದ ಜೀತಕ್ಕೆ ಇರಿಸಿಕೊಂಡಿದ್ದ ಮಹಿಳೆಯ ಬಂಧನ

Public TV
By Public TV
11 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?