ಇಂದು ಸೇರಿ ಇನ್ನೂ 4 ದಿನ ಬೆಂಗಳೂರಿನಲ್ಲಿ ಭಾರೀ ಮಳೆ

Public TV
1 Min Read
Weather 1

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಜನರು ಈಗಾಗಲೇ ಮಳೆಯಿಂದ ಕಂಗಾಲಾಗಿದ್ದಾರೆ. ಈ ಬೆನ್ನಲ್ಲೇ ಇಂದು (ಗುರುವಾರ) ಸೇರಿ ಇನ್ನೂ ನಾಲ್ಕು 4 ದಿನ ಬೆಂಗಳೂರಿನಲ್ಲಿ (Bengaluru) ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (IMD) ನೀಡಿದೆ.

ಇಂದು ಬೆಳಗ್ಗೆಯೇ ಸತತ 3 ಗಂಟೆಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ. ಇದನ್ನೂ ಓದಿ: 12 ಕೋಟಿ ರೂ. ಆಸ್ತಿ, ಎರಡು ಎಫ್‌ಐಆರ್‌ – ಪ್ರಿಯಾಂಕಾ ಗಾಂಧಿ ಬಳಿ ಚಿನ್ನ, ಭೂಮಿ ಎಷ್ಟಿದೆ?

ದಕ್ಷಿಣ ಒಳನಾಡಿನ ಹಾಸನ, ಕೊಡಗು, ಮೈಸೂರು, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ಚಿತ್ರದುರ್ಗ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ಕೊಟ್ಟಿದೆ. ಇದನ್ನೂ ಓದಿ: ಬಾಬುಸಾಬ್ ಪಾಳ್ಯ ಕಟ್ಟಡ ದುರಂತಕ್ಕೆ ಟ್ವಿಸ್ಟ್ – ಹಳೇ ಕಟ್ಟಡದಲ್ಲಿ ಹೊಸ ಬಿಲ್ಡಿಂಗ್ ನಿರ್ಮಾಣ

Share This Article