ಕೊನೆಗೂ ಅಲ್ಪಸಂಖ್ಯಾತ ಅಭ್ಯರ್ಥಿಗೆ ಶಿಗ್ಗಾಂವಿ ಟಿಕೆಟ್‌ ನೀಡಿದ ಕಾಂಗ್ರೆಸ್‌

Public TV
1 Min Read
yasir ahmed khan pathan

ಹಾವೇರಿ: ಶಿಗ್ಗಾಂವಿ ಉಪಚುನಾವಣಾ (Shiggaon Bypoll) ಕಣ ರಂಗೇರಿದ್ದು, ಭಾರಿ ಪೈಪೋಟಿ ನಡುವೆ ಕೊನೆಗೆ ಕಾಂಗ್ರೆಸ್‌ ಟಿಕೆಟ್‌ ಅಲ್ಪಸಂಖ್ಯಾತರ ಪಾಲಾಗಿದೆ. ಯಾಸಿರ್‌ ಅಹಮದ್‌ ಖಾನ್‌ ಪಠಾಣ್‌ (Yasir Ahmed Khan Pathan) ಕಾಂಗ್ರೆಸ್‌ ಟಿಕೆಟ್‌ ಗಿಟ್ಟಿಸುವಲ್ಲಿ ಕೊನೆಗೂ ಯಶಸ್ವಿಯಾಗಿದ್ದಾರೆ.

ಕ್ಷೇತ್ರದಲ್ಲಿ ಕಳೆದ ನಾಲ್ಕು ಚುನಾವಣೆಗಳಲ್ಲೂ ಅಲ್ಪಸಂಖ್ಯಾತ ಅಭ್ಯರ್ಥಿಗೆ ಕಾಂಗ್ರೆಸ್‌ ಟಿಕೆಟ್‌ ನೀಡಿ ಸೋಲು ಕಂಡಿತ್ತು. ಈ ಬಾರಿ ಲಿಂಗಾಯತ ಸಮುದಾಯದ ಅಭ್ಯರ್ಥಿ ಟಿಕೆಟ್‌ ನೀಡಬೇಕೆಂಬ ಒತ್ತಾಯ ಕೇಳಿಬಂದಿತ್ತು. ಇತ್ತ, ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್‌ ನೀಡಬೇಕು ಎಂದು ಸಚಿವ ಜಮೀರ್‌ ಅಹ್ಮದ್‌ ಪಟ್ಟು ಹಿಡಿದಿದ್ದರು.

Bharath Bommai

ಕ್ಷೇತ್ರದಲ್ಲಿ ವಿಧಾನಸಭಾ ಮತ್ತು ಲೋಕಸಭಾ ಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಜನರು ಕಾಂಗ್ರೆಸ್‌ ಪರವಾಗಿ ನಿಂತಿದ್ದರು. ಹೀಗಾಗಿ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್‌ ಕೊಡಬೇಕು ಎಂಬುದು ಜಮೀರ್‌ ಅವರ ಆಗ್ರಹವಾಗಿತ್ತು. ಕೊನೆಗೂ ಟಿಕೆಟ್‌ ಗಿಟ್ಟಿಸುವಲ್ಲಿ ಜಮೀರ್‌ ಯಶಸ್ವಿಯಾಗಿದ್ದಾರೆ.

ಬಸವರಾಜ ಬೊಮ್ಮಾಯಿ ಅವರು ಲೋಕಸಭೆಯಲ್ಲಿ ಸ್ಪರ್ಧಿಸಿ ಗೆದ್ದ ಹಿನ್ನೆಲೆ ತೆರವಾಗಿದ್ದ ಶಿಗ್ಗಾಂವಿ ಎಂಎಲ್‌ಎ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಭರತ್‌ ಬೊಮ್ಮಾಯಿ ಅವರು ಕಣದಲ್ಲಿದ್ದಾರೆ. ಪುತ್ರನನ್ನು ಗೆಲ್ಲಿಸಿಕೊಳ್ಳಲು ಬಸವರಾಜ ಬೊಮ್ಮಾಯಿ ಅವರು ಕಸರತ್ತು ನಡೆಸಿದ್ದಾರೆ. ಈ ಹೊತ್ತಿನಲ್ಲೇ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಯಾಸಿರ್‌ ಸ್ಪರ್ಧೆಗಿಳಿದಿದ್ದಾರೆ.

Share This Article