ಉಡುಪಿ| ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಕೊಲೆ ಮಾಡಿದ ಪತ್ನಿ

Public TV
1 Min Read
udupi murder case

– ತನ್ನ ಸಹೋದರನ ಜೊತೆ ನಡೆದಿದ್ದನ್ನೆಲ್ಲ ಹೇಳಿಕೊಂಡ ಮಹಿಳೆ

ಉಡುಪಿ: ಪ್ರಿಯಕರನ ಜೊತೆ ಸೇರಿಕೊಂಡು ಪತಿಯನ್ನು ಪತ್ನಿಯೇ ಹತ್ಯೆ ಮಾಡಿರುವ ಘಟನೆ ಉಡುಪಿ (Udupi) ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರಿನಲ್ಲಿ ನಡೆದಿದೆ.

udupi murder case 3

ಬಾಲಕೃಷ್ಣ ಪೂಜಾರಿ (44) ಕೊಲೆಯಾದ ವ್ಯಕ್ತಿ. ಆತನ ಪತ್ನಿ ಪ್ರತಿಮಾ ಹಾಗೂ ಆಕೆಯ ಪ್ರಿಯಕರ ದಿಲೀಪ್‌ ಹೆಗ್ಡೆಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಇದನ್ನೂ ಓದಿ: ಜಾತಿ ನಿಂದನೆ ಕೇಸ್‌ನಲ್ಲಿ 98 ಮಂದಿಗೆ ಜೀವಾವಧಿ – ತೀರ್ಪು ಪ್ರಕಟವಾಗುತ್ತಿದ್ದಂತೆ ಅಸ್ವಸ್ಥಗೊಂಡಿದ್ದ ದೋಷಿ ಸಾವು

udupi murder case 1

ನಡೆದಿದ್ದೇನು?
ಬಾಲಕೃಷ್ಣ ಪೂಜಾರಿ ಕಳೆದ 25 ದಿನಗಳಿಂದ ಜ್ವರ, ವಾಂತಿ ಆಗಿ ಅನಾರೋಗ್ಯದಿಂದ ಬಳಲುತ್ತಿದ್ದ. ಕಾಮಾಲೆ ರೋಗ ಎಂದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಕಾರ್ಕಳ ರೋಟರಿ, ಮಣಿಪಾಲ ಕೆಎಂಸಿ, ಮಂಗಳೂರಿನ ವೆನ್ಲಾಕ್, ಬೆಂಗಳೂರಿನ ನಿಮಾನ್ಸ್, ವಿಕ್ಟೋರಿಯಾ ಹಾಗೂ ಮಂಗಳೂರಿನ ಆಸ್ಪತ್ರೆಯಲ್ಲೂ ಚಿಕಿತ್ಸೆ ನೀಡಲಾಗಿತ್ತು. ಆದರೆ, ಅ.20 ರಂದು ಬಾಲಕೃಷ್ಣ ಮನೆಯಲ್ಲಿ ಸಾವನ್ನಪ್ಪಿದ್ದ.

udupi murder case 2

ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿ ಪ್ರತಿಮಾಳ ಸಹೋದರನೇ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಈ ಸಂಬಂಧ ಅಜೆಕಾರು ಠಾಣೆಯಲ್ಲಿ ಪ್ರಕರಣ ದಾಖಲಾಯಿತು. ತನಿಖೆ ವೇಳೆ ಪ್ರತಿಮಾ ಮತ್ತು ಆಕೆಯ ಪ್ರಿಯಕರನ ದಿಲೀಪ್‌ ಮೇಲೆ ಸಂಶಯ ವ್ಯಕ್ತವಾಗಿ ವಿಚಾರಣೆಗೆ ಒಳಪಡಿಸಲಾಯಿತು. ಇದನ್ನೂ ಓದಿ: ಅತ್ತೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಆರೋಪ – ಮಗ, ಸೊಸೆ ಅರೆಸ್ಟ್

ಊಟದಲ್ಲಿ ವಿಷ ಬೆರೆಸಿದ್ದ ಪತ್ನಿ ಪ್ರತಿಮಾ?
ಬಾಲಕೃಷ್ಣ ಸಾವಿನ ಬಳಿಕ ಪತ್ನಿ ಪ್ರತಿಮಾನ ಚಲನವಲನ ಬಗ್ಗೆ ಆಕೆಯ ಸಹೋದರನೇ ಅನುಮಾನಗೊಂಡಿದ್ದ. ಸಾವಿನ ಬಗ್ಗೆ ಆಕೆಯನ್ನು ಪ್ರಶ್ನಿಸಿದ್ದಾನೆ. ಪ್ರತಿಮಾ ತನ್ನ ಸಹೋದರನ ಬಳಿ ಎಲ್ಲವನ್ನೂ ಹೇಳಿಕೊಂಡಿದ್ದಾಳೆ. ಊಟದಲ್ಲಿ ವಿಷ ಬೆರೆಸಿ ಬಳಿಕ ಬೆಡ್‌ಶೀಟ್‌ನಿಂದ ಉಸಿರುಗಟ್ಟಿಸಿ ಕೊಲೆ ಮಾಡಿರುವುದಾಗಿ ಪ್ರತಿಮಾ ಒಪ್ಪಿಕೊಂಡಿದ್ದಾಳೆ ಎನ್ನಲಾಗಿದೆ. ಪ್ರಿಯಕರನ ಜೊತೆ ಸೇರಿಕೊಂಡು ಪತಿ ಕೊಲೆ ಮಾಡಿರುವುದಾಗಿ ಆಕೆ ಒಪ್ಪಿಕೊಂಡಿದ್ದಾಳೆಂದು ತಿಳಿದುಬಂದಿದೆ.

Share This Article