ರವೀಂದ್ರ ಸಂಗೀತದ ಬದಲಿಗೆ ಬಂಗಾಳದಲ್ಲಿ ಬಾಂಬ್ ಸದ್ದು ಕೇಳುತ್ತಿದೆ: ದೀದಿ ವಿರುದ್ಧ ಅಮಿತ್ ಶಾ ಕಿಡಿ

Public TV
1 Min Read
Amit Shah Kolkata

– ಒಳನುಸುಳುವಿಕೆ ತಡೆಯಿಂದ ಮಾತ್ರ ಬಂಗಾಳದಲ್ಲಿ ಶಾಂತಿ ನೆಲೆಸಲು ಸಾಧ್ಯ

ಕೋಲ್ಕತ್ತಾ: ರವೀಂದ್ರ ಸಂಗೀತ ಕೇಳುವ ಬದಲಿಗೆ ಬಂಗಾಳದಲ್ಲಿಂದು (West Bengal) ಬಾಂಬ್‌ಗಳ ಸದ್ದು ಕೇಳುತ್ತಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ (Amit Shah) ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ (Mamata Banerjee) ವಿರುದ್ಧ ಕಿಡಿಕಾರಿದ್ದಾರೆ.

ಪಶ್ಚಿಮ ಬಂಗಾಳದ ಗಡಿಯಲ್ಲಿ ನಿರ್ಮಿಸಿರುವ ಪ್ರಯಾಣಿಕರ ನೂತನ ಟರ್ಮಿನಲ್ ಅನ್ನು ಉದ್ಘಾಟಿಸಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಸ್ಥಾನ ಗೆದ್ದ ಬಳಿಕ ಮಮತಾ ದೀದಿ ಸಂತೋಷ ಪಡುತ್ತಿದ್ದರು. ಆದರೆ ನಾವು ಎರಡು ಸ್ಥಾನ ಪಡೆದಿದ್ದರೂ 370ನೇ ವಿಧಿಯನ್ನು ತೆಗೆದುಹಾಕುವ ಗುರಿ ಹೊಂದಿದ್ದೆವು ಎಂಬುದನ್ನು ಮರೆಯಬೇಡಿ. 2026ರಲ್ಲಿ ಬಂಗಾಳದಲ್ಲಿ ಬಿಜೆಪಿ (BJP) ಮೂರನೇ ಎರಡರಷ್ಟು ಬಹುಮತದೊಂದಿಗೆ ಸರ್ಕಾರ ರಚಿಸಲಿದೆ ಎಂದು ಹರಿಹಾಯ್ದರು. ಇದನ್ನೂ ಓದಿ: ತಾಕತ್ತಿದ್ರೆ ನನ್ನ ಅಕ್ರಮದ ದಾಖಲೆ ಬಿಡುಗಡೆಗೊಳಿಸಿ – ಬೈರತಿ ಸುರೇಶ್‌ಗೆ ಶೋಭಾ ಕರಂದ್ಲಾಜೆ ಸವಾಲ್

MAMATA BANERJEE 2

ಅಕ್ರಮ ವಲಸೆ ಮಿತಿ ಮೀರಿದೆ:
ಪಶ್ಚಿಮ ಬಂಗಾಳದಲ್ಲಿ ಶಾಂತಿ ನೆಲಸಲು ಗಡಿಗಳಲ್ಲಿ ಒಳನುಸುಳುವಿಕೆ ಮೇಲೆ ನಿಯಂತ್ರಣ ಸಾಧಿಸುವುದು ಅತ್ಯಗತ್ಯವಾಗಿದೆ. 2026ರಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಅಕ್ರಮ ವಲಸೆಯನ್ನು ತಡೆಯಲಾಗುವುದು. ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ. ದೇಶದಲ್ಲಿ ಶಾಂತಿ ನೆಲೆಸಲು ಭೂಬಂದರುಗಳು ಪ್ರಮುಖ ಪಾತ್ರವಹಿಸುತ್ತದೆ. ಬಾಂಗ್ಲಾದೇಶ ಮತ್ತು ಭಾರತದ ಸಂಬಂಧ ಉತ್ತಮವಾಗಿರಲು ಗಡಿಗಳಲ್ಲಿ ನುಸುಳುವಿಕೆಯ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ದೀಪಾವಳಿ ಹಬ್ಬಕ್ಕೆಂದು ಊರಿಗೆ ತೆರಳುವಾಗ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತ – 10 ಮಂದಿಗೆ ಗಾಯ

ಆರ್.ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ನಡೆದ ಅತ್ಯಾಚಾರ ಪ್ರಕರಣದ ಕುರಿತು ಮಾತನಾಡಿ, ಸಂದೇಶ್‌ಖಲಿ ಮತ್ತು ಆರ್‌ಜಿ.ಕರ್ ಅತ್ಯಾಚಾರ ಪ್ರಕರಣಗಳನ್ನು ನೋಡಿದ ಮೇಲೆ ಬಂಗಾಳದಲ್ಲಿ ನಮ್ಮ ತಾಯಂದಿರು ಮತ್ತು ಸಹೋದರಿಯರು ಸುರಕ್ಷಿತವಾಗಿರಲು ಸಾಧ್ಯವಿಲ್ಲ ಎಂಬುದು ಸ್ಪಷ್ಟವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಶ್ರೀ ಶ್ರೀ ರವಿಶಂಕರ್ ಗುರೂಜಿಗೆ ಫಿಜಿ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ

Share This Article