ಭೋಪಾಲ್: ಹುಲಿಸಂರಕ್ಷಿತ ಪ್ರದೇಶದಲ್ಲಿ 7 ಆನೆಗಳು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದಲ್ಲಿ (Madhya Pradesh) ನಡೆದಿದೆ.
ಮಧ್ಯಪ್ರದೇಶದ ಬಾಂಧವಗಢ ಹುಲಿ ಸಂರಕ್ಷಿತ ಪ್ರದೇಶದಲ್ಲಿ (Bandhavgarh Tiger Reserve) ಏಳು ಆನೆಗಳು ಸಾವನ್ನಪ್ಪಿದ್ದು, ಮೂರು ಆನೆಗಳು ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿವೆ ಎಂದು ವನ್ಯಜೀವಿ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಒಳಮೀಸಲಾತಿ ಜಾರಿಗೆ ನಾವು ವಿರುದ್ಧವಾಗಿಲ್ಲ, ಸೋಷಿಯಲ್ ಮೀಡಿಯಾದಲ್ಲಿ ಕಿಡಿಗೇಡಿಗಳ ಮಾತು ಸತ್ಯಕ್ಕೆ ದೂರ: ಪರಮೇಶ್ವರ್
ಏಳು ಆನೆಗಳ ದಿಢೀರ್ ಸಾವಿಗೆ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ಜಬಲ್‌ಪುರದ (Jabalpur) ವನ್ಯಜೀವಿ ವಿಧಿವಿಜ್ಞಾನ ಪ್ರಯೋಗಾಲಯ ಮತ್ತು ಆರೋಗ್ಯ ಕೇಂದ್ರದಲ್ಲಿ ಏಳು ಆನೆಗಳ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ ಎಂದು ವರದಿ ವಿವರಿಸಿದೆ. ಇದನ್ನೂ ಓದಿ: ಜಯನಗರ ಕ್ಷೇತ್ರಕ್ಕೆ ಅನುದಾನ ನೀಡದ್ದನ್ನ ಮತ್ತೆ ಸಮರ್ಥಿಸಿಕೊಂಡ ಡಿಸಿಎಂ
- Advertisement
- Advertisement
ರೈತರು ತಮ್ಮ ಬೆಳೆಗಳಿಗೆ ಕೀಟನಾಶಕ ಸಿಂಪಡಿಸಿದ್ದು, ಅದನ್ನು ತಿಂದ ಪರಿಣಾಮ ಆನೆಗಳು ಸಾವನ್ನಪ್ಪಿರುವ ಸಾಧ್ಯತೆ ಇರಬಹುದು ಎಂದು ಅರಣ್ಯಾಧಿಕಾರಿಗಳು ಶಂಕಿಸಿದ್ದಾರೆ. ಇದನ್ನೂ ಓದಿ: ಉಪಚುನಾವಣೆಗೆ ಸಮಸ್ಯೆ ಮಾಡೋಕೆ ಬಿಜೆಪಿಯಿಂದ ಪ್ರತಿಭಟನೆ: ಸಿಎಂ
ಆನೆಗಳ ಸಾವಿಗೆ ಸಂಬಂಧಪಟ್ಟಂತೆ ದೆಹಲಿ ಮೂಲದ ವನ್ಯಜೀವಿ ಅಪರಾಧ ನಿಯಂತ್ರಣ ದಳ ತನಿಖೆ ನಡೆಸಲು ಸಮಿತಿಯನ್ನು ರಚಿಸಿದ್ದು, ಅದರ ಜೊತೆಗೆ ರಾಜ್ಯ ಸರ್ಕಾರ ಕೂಡಾ ತನಿಖೆಗೆ ಆದೇಶ ನೀಡಿದೆ. ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್ ಜೈಲಿನಿಂದ ರಿಲೀಸ್
ಘಟನಾ ಸ್ಥಳಕ್ಕೆ ನ್ಯಾಶನಲ್ ಟೈಗರ್ ಕನ್ಸರ್‌ವೇಷನ್ ಅಥಾರಿಟಿಯ ಸೆಂಟ್ರಲ್ ವಲಯದ ಅಸಿಸ್ಟೆಂಟ್ ಇನ್ಸ್ಪೆಕ್ಟರ್ ಜನರಲ್ ನಂದಕಿಶೋರ್ ಕಾಳೆ ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಶಿಗ್ಗಾಂವಿಯ ಕಾಂಗ್ರೆಸ್ ಬಂಡಾಯ ಶಮನ- ಕೊನೆಗೂ ನಾಮಪತ್ರ ವಾಪಸ್ ಪಡೆದ ಅಜ್ಜಂಪೀರ್ ಖಾದ್ರಿ