ನಟ ಸಲ್ಮಾನ್ ಖಾನ್‌ಗೆ ಜೀವ ಬೆದರಿಕೆ – 2 ಕೋಟಿಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಮುಂಬೈನಲ್ಲಿ ಅರೆಸ್ಟ್‌

Public TV
2 Min Read
salman

ಮುಂಬೈ: ಒಂದು ದಿನದ ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ (Salman Khan) ಕೊಲ್ಲುವುದಾಗಿ ಜೀವ ಬೆದರಿಕೆ ಹಾಕಿದ್ದ ಅಪರಿಚಿತ ವ್ಯಕ್ತಿಯನ್ನು ಮುಂಬೈ ಪೊಲೀಸರು (Mumbai Police) ಬಂಧಿಸಿದ್ದಾರೆ. ಬಂಧಿನನ್ನು ಬಾಂದ್ರಾ ಪೂರ್ವದ ನಿವಾಸಿ ಅಜಂ ಮೊಹಮ್ಮದ್ ಮುಸ್ತಫಾ ಎಂದು ಗುರುತಿಸಲಾಗಿದೆ.

ಏನಿದು ಕೇಸ್‌?
2 ಕೋಟಿ ರೂ. ಕೊಡದಿದ್ದರೇ ನಟ ಸಲ್ಮಾನ್‌ ಖಾನ್‌ ಅವರನ್ನ ಕೊಲ್ಲುವುದಾಗಿ ಅಪರಿಚಿತ ವ್ಯಕ್ತಿಯಿಂದ ಬುಧವಾರ (ಅ.30) ಮುಂಬೈ ಟ್ರಾಫಿಕ್ ಪೊಲೀಸರಿಗೆ ಬೆದರಿಕೆ ಸಂದೇಶವೊಂದು ಬಂದಿತ್ತು. ಬೆದರಿಕೆ ಸಂದೇಶ ಬಂದ ಬೆನ್ನಲ್ಲೇ ಮುಂಬೈನ ವರ್ಲಿ ಜಿಲ್ಲೆಯ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. ಇದನ್ನೂ ಓದಿ: IPL Retention | ಇಂದು ಐಪಿಎಲ್‌ ರೀಟೆನ್ಶನ್‌ ಪಟ್ಟಿ ರಿಲೀಸ್‌ – ಕ್ಯಾಪ್ಟನ್‌ಗಳನ್ನೇ ಹೊರದಬ್ಬುವ ಸಾಧ್ಯತೆ!

Salman Khan 2

ಎನ್‌ಸಿಪಿ ಶಾಸಕ ದಿವಂಗತ ಬಾಬಾ ಸಿದ್ದಿಕಿ ಅವರ ಪುತ್ರ ಜೀಶನ್ ಸಿದ್ದಿಕಿ ಹಾಗೂ ನಟ ಸಲ್ಮಾನ್ ಖಾನ್ ಇಬ್ಬರಿಗೂ ಜೀವ ಬೆದರಿಕೆ ಬಂದಿತ್ತು. ಇದರ ಬೆನ್ನಲ್ಲೇ ಮುಂಬೈ ಪೊಲೀಸರು ಮಂಗಳವಾರ ನೋಯ್ಡಾದಲ್ಲಿ 20 ವರ್ಷದ ಗುರ್ಫಾನ್ ಖಾನ್ ಎಂಬುವರನ್ನು ಬಂಧಿಸಿದ್ದಾರೆ. ಮೊಹಮ್ಮದ್ ತಯ್ಯಬ್ ಎಂದು ಗುರುತಿಸಲಾದ ಆರೋಪಿಯನ್ನು ನೋಯ್ಡಾದ ಸೆಕ್ಟರ್ 39ರಲ್ಲಿ ಬಂಧಿಸಲಾಗಿದೆ. ಇದನ್ನೂ ಓದಿ: ಮಾಜಿ ಸಚಿವೆ, ಸಂಸದರ ಜಮೀನಿನ ಮೇಲೂ ವಕ್ಫ್ ಕರಿನೆರಳು!

salman khan 2

ಅ.12 ರಂದು, ಬಾಬಾ ಸಿದ್ದಿಕಿ ಅವರು ದಸರಾ ಸಂದರ್ಭದಲ್ಲಿ ಪಟಾಕಿ ಸಿಡಿಸುವಾಗ ಪುತ್ರ ಜೀಶನ್ ಸಿದ್ದಿಕಿ ಅವರ ಕಚೇರಿಯ ಹೊರಗೆ ಗುಂಡಿನ ದಾಳಿಯಿಂದಾಗಿ ಕೊಲ್ಲಲ್ಪಟ್ಟರು. ಘಟನೆಯ ಒಂದು ದಿನದ ನಂತರ, ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹತ್ಯೆಯ ಹೊಣೆಯನ್ನು ಹೊತ್ತುಕೊಂಡಿತ್ತು. ಸಲ್ಮಾನ್ ಖಾನ್ ಅವರೊಂದಿಗಿನ ನಿಕಟ ಸಂಬಂಧದಿಂದಾಗಿ ಅವರ ಮೇಲೆ ದಾಳಿ ಮಾಡಲಾಗಿದೆ ಎಂದು ಹೇಳಿದ್ದಾರೆ. ಇದುವರೆಗೆ ಬಾಬಾ ಸಿದ್ದಿಕಿ ಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು 15 ಮಂದಿಯನ್ನು ಬಂಧಿಸಿದ್ದಾರೆ.

ಸಲ್ಮಾನ್ ಖಾನ್‌ಗೆ ಜೀವ ಬೆದರಿಕೆ ಬಂದಿರುವುದು ಇದೇ ಮೊದಲಲ್ಲ. ಈ ಹಿಂದೆ 2022 ರಲ್ಲಿ ಸಲ್ಮಾನ್ ಖಾನ್‌ಗೆ ಜೀವ ಬೆದರಿಕೆಯ ಪತ್ರವು ಅವರ ನಿವಾಸದ ಬಳಿಯ ಬೆಂಚ್‌ನಲ್ಲಿ ಕಂಡುಬಂದಿತ್ತು. ಮಾರ್ಚ್ 2023ರಲ್ಲಿ ಗೋಲ್ಡಿ ಬ್ರಾರ್ ಅವರು ಕಳುಹಿಸಿದ್ದಾರೆಂದು ಆರೋಪಿಸಲಾದ ಇಮೇಲ್ ಕೂಡ ಖಾನ್‌ಗೆ ಸಿಕ್ಕಿತ್ತು. 2024 ರಲ್ಲಿ, ಇಬ್ಬರು ಅಪರಿಚಿತ ವ್ಯಕ್ತಿಗಳು ನಕಲಿ ಗುರುತುಗಳನ್ನು ಬಳಸಿಕೊಂಡು ಪನ್ವೆಲ್‌ನಲ್ಲಿರುವ ಖಾನ್ ಅವರ ಫಾರ್ಮ್ಹೌಸ್‌ಗೆ ಅತಿಕ್ರಮಣ ಮಾಡಲು ಪ್ರಯತ್ನಿಸಿದ್ದರು. ಇದನ್ನೂ ಓದಿ: ಮಂತ್ರಾಲಯ ರಾಯರ ಮಠದಲ್ಲಿ ನರಕಚತುರ್ದಶಿ ಸಂಭ್ರಮ: ಶ್ರೀಗಳಿಂದ ವಿಶೇಷ ಪೂಜೆ

Share This Article