ಗ್ಯಾರಂಟಿ ಯೋಜನೆ ಕೊಡಲು ಆಗದ ಕಾಂಗ್ರೆಸ್ ಸರ್ಕಾರ ಯೂಟರ್ನ್ ಸರ್ಕಾರ: ಛಲವಾದಿ ನಾರಾಯಣಸ್ವಾಮಿ

Public TV
1 Min Read
Chalavadi Narayanaswamy

ಬೆಂಗಳೂರು: ಗ್ಯಾರಂಟಿ ಯೋಜನೆ (Guarantee Scheme) ಕೊಡಲು ಆಗದ ಕಾಂಗ್ರೆಸ್ (Congress) ಸರ್ಕಾರ ಯೂಟರ್ನ್ ಸರ್ಕಾರ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ವಾಗ್ದಾಳಿ ನಡೆಸಿದ್ದಾರೆ.

ಶಕ್ತಿ ಯೋಜನೆ (Shakti Scheme) ಪರಿಷ್ಕರಣೆ ಬಗ್ಗೆ ಡಿಸಿಎಂ ಡಿಕೆಶಿವಕುಮಾರ್ (DK Shivakumar) ಹೇಳಿಕೆಗೆ ಬಿಜೆಪಿ ಕಚೇರಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಗ್ಯಾರಂಟಿ ಯೋಜನೆಗಳನ್ನು ಈ ಸರ್ಕಾರಕ್ಕೆ ಉಳಿಸಿಕೊಳ್ಳಲು ಆಗುತ್ತಿಲ್ಲ. ಈ ಸರ್ಕಾರ ಯೂಟರ್ನ್ ಸರ್ಕಾರ. ನಮ್ಮನ್ನು ಹಿಟ್ ಆ್ಯಂಡ್ ರನ್ ಎನ್ನುತ್ತಾರೆ. ನೀವು ಯೂಟರ್ನ್ ಸರ್ಕಾರ. ಡಿಕೆಶಿ ಇದರ ಬಗ್ಗೆ ಶಕ್ತಿ ಯೋಜನೆ ಪರಿಷ್ಕರಣೆ ಮಾಡೋ ಬಗ್ಗೆ ಹೇಳುತ್ತಾರೆ. ರಾಮಲಿಂಗಾರೆಡ್ಡಿ ಇದರ ಬಗ್ಗೆ ಹೇಳಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಒಳಮೀಸಲಾತಿಗೆ ಆಯೋಗ ರಚನೆ, ವಿಳಂಬ ನೀತಿ ಅಲ್ಲ: ಸಿದ್ದರಾಮಯ್ಯ

ಜನ ಏನು ಹೇಳುತ್ತಾರೋ ನೋಡೋಣ ಎಂದು ಡಿಸಿಎಂ ಪರಿಷ್ಕರಣೆ ಬಗ್ಗೆ ಹೇಳಿದ್ದಾರೆ. ವಿರೋಧ ಬಂದ ಮೇಲೆ ಹಾಗೆಲ್ಲ ಇಲ್ಲ ಅಂತ ಸಿಎಂ ಹೇಳುತ್ತಾರೆ. ಸುಳ್ಳು, ವಂಚನೆ, ಲೂಟಿ ಮಾಡೋದು ಸರ್ಕಾರ ಎಂದು ಜನರಿಗೆ ಗೊತ್ತಿದೆ. ಹಾಗಾಗಿ ಈ ಸರ್ಕಾರ ಯೂಟರ್ನ್ ಸರ್ಕಾರ ಎಂದು ಹರಿಹಾಯ್ದರು. ಇದನ್ನೂ ಓದಿ: ಪಂಚ ಗ್ಯಾರಂಟಿಗಳಿಗೆ ಕರ್ನಾಟಕ ಸರ್ಕಾರವೇ ಮಾದರಿ: ಲಕ್ಷ್ಮಿ ಹೆಬ್ಬಾಳ್ಕರ್

Share This Article