ಬೆಂಗಳೂರು: 69ನೇ ಕನ್ನಡ ರಾಜ್ಯೋತ್ಸವದ (Kannada Rajyotsava) ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿದರು.
ಶುಕ್ರವಾರ ಇಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಅವರು ತಾಯಿ ಭುವನೇಶ್ವರಿಗೆ ಪುಷ್ಪ ನಮನ ಸಲ್ಲಿಸಿದರು. ರಾಷ್ಟ್ರ ಧ್ವಜ ಹಾಗೂ ಕನ್ನಡ ಧ್ವಜಾರೋಹಣ ನೆರವೇರಿಸಿದರು. ಬಳಿಕ ವಿವಿಧ ಕನ್ನಡ ನಾಡಿನ ಸಂಸ್ಕೃತಿ ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು. ಇದನ್ನೂ ಓದಿ: ಕರ್ನಾಟಕ ಏಕೀಕರಣದ ಏಕೈಕ ಹುತಾತ್ಮ ಯಾರೆಂದು ಗೊತ್ತೆ?
ಕಾರ್ಯಕ್ರಮದಲ್ಲಿ ರಾಜ್ಯದ್ಯಂತ ಹಲವು ಶಾಲೆಗಳ ಶಾಲಾ ಮಕ್ಕಳು ಪಾಲ್ಗೊಂಡು ಕಾರ್ಯಕ್ರಮಕ್ಕೆ ಮೆರುಗು ನೀಡಿದರು. ಇದೇ ವೇಳೆ ಕನ್ನಡ ಗೀತೆಗಳಿಗೆ ನೃತ್ಯ ಮಾಡುವ ಮೂಲಕ ಪ್ರೇಕ್ಷಕರ ಗಮನ ಸೆಳೆದರು.
ಸಮಾರಂಭದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಶಿಕ್ಷಣ ಸಚಿವ ಮಧು ಬಂಗಾರಪ್ಪ ಉಪಸ್ಥಿತರಿದ್ದರು. ಇದನ್ನೂ ಓದಿ: ಮೈಸೂರು ರಾಜ್ಯ ʻಕರ್ನಾಟಕʼವಾಗಿದ್ದು ಹೇಗೆ? – ನಾಮಕರಣದ ಕಥೆ ನಿಮಗೆ ಗೊತ್ತೇ?