Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಸಿಎಂ ಸಿದ್ದರಾಮಯ್ಯ ಆದಿಚುಂಚನಗಿರಿ ಶ್ರೀಗಳನ್ನು ಭೇಟಿ ಮಾಡಿದ್ದು ಯಾಕೆ: ಇನ್‍ಸೈಡ್ ಸ್ಟೋರಿ

Public TV
Last updated: March 24, 2017 2:13 pm
Public TV
Share
2 Min Read
CM SIDDARAMIAH AND ADICHUNCHANAGIRI SHREE
SHARE

ಬೆಂಗಳೂರು: ಕಾಂಗ್ರೆಸ್‍ಗೆ ಗುಡ್‍ಬೈ ಹೇಳಿ ಬಿಜೆಪಿಗೆ ಸೇರ್ಪಡೆಯಾದ ಮಾಜಿ ಮುಖ್ಯಮಂತ್ರಿ ಎಸ್‍ಎಂ ಕೃಷ್ಣಗೆ ಟಾಂಗ್ ನೀಡಲು ಸಿಎಂ ಸಿದ್ದರಾಮಯ್ಯ ಮುಂದಾಗಿದ್ದು, ಈ ಕಾರಣಕ್ಕಾಗಿಯೇ ಗುರುವಾರ ರಾತ್ರಿ ವಿಜಯನಗರದಲ್ಲಿರುವ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಶ್ರೀಗಳ ಜೊತೆ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

ಎಸ್‍ಎಂಕೆ ಒಕ್ಕಲಿಗರ ಪ್ರಭಾವಿ ನಾಯಕರಾಗಿರುವ ಹಿನ್ನೆಲೆಯಲ್ಲಿ ಆ ಸಮುದಾಯ ಮತಗಳು ಬಿಜೆಪಿಗೆ ಹೋಗದಿರಲು ಕಾಂಗ್ರೆಸ್ ನಾಯಕರು ಆ ಮತಗಳ ಮೇಲೆ ಕಣ್ಣಿಟ್ಟಿದ್ದಾರೆ. ಈ ಕಾರಣಕ್ಕಾಗಿ ರಾತ್ರಿ ಒಂದೂವರೆ ಗಂಟೆಗಳ ಪ್ರಸಕ್ತ ಒಕ್ಕಲಿಗ ಸಮುದಾಯ ಬೆಳವಣಿಗೆಯ ಬಗ್ಗೆ ಸಿಎಂ ಶ್ರೀಗಳ ಜೊತೆ ಮಾತನಾಡಿ, ಸಮುದಾಯ ಅಭಿವೃದ್ಧಿಗೆ ಸಂಬಂಧಿಸಿದ ವಿಚಾರಗಳನ್ನು ಚರ್ಚೆ ನಡೆಸಿದ್ದಾರೆ.

ಅಷ್ಟೇ ಅಲ್ಲದೇ ಉಪಚುನಾವಣೆಗಳ ಮತ್ತು ಕೆಂಪೇಗೌಡ ಪ್ರಾಧಿಕಾರದ ಬಗ್ಗೆಯೂ ಮಾತುಕತೆಯನ್ನು ಸಿಎಂ ನಡೆಸಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿವೆ. ನಂಜನಗೂಡು ಕ್ಷೇತ್ರದಲ್ಲಿ 8 ಸಾವಿರ ಒಕ್ಕಲಿಗ ಸಮುದಾಯದ ಮತಗಳು ನಿರ್ಣಾಯಕವಾಗಿರುವ ಹಿನ್ನೆಲೆಯಲ್ಲಿ ಸಮುದಾಯಕ್ಕೆ ಸಂದೇಶ ತಿಳಿಸಲು ಸಿಎಂ ಸಿದ್ದರಾಮಯ್ಯನವರು ಭೇಟಿ ಮಾಡಿದ್ದಾರೆ ಎಂದು ಹೇಳಲಾಗುತ್ತದೆ.

ನಂಜನಗೂಡು ಉಪಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧಿಸಿಲ್ಲ. ಹೀಗಾಗಿ ಅಲ್ಲಿ ಒಕ್ಕಲಿಗ ಮತಗಳೇ ನಿರ್ಣಾಯವಾಗಿರುವುದರಿಂದ ಆ ಸಮುದಾಯದ ಮತಗಳನ್ನು ಸೆಳೆಯಲು ಸಿಎಂ ಗುರುವಾರ ರಾತ್ರಿ ಭೇಟಿ ಮಾಡಿದ್ದಾರೆ ಎನ್ನಲಾಗಿದೆ.

ಆದಿಚುಂಚನಗಿರಿ ಮಠಾಧೀಶರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಕ್ಷಣ. pic.twitter.com/IIajtVZd0r

— CM of Karnataka (@CMofKarnataka) March 23, 2017

ರಾತ್ರಿ 9.30ಕ್ಕೆ ಮಠದ ಒಳಹೋದ ಸಿಎಂ 11 ಗಂಟೆಯವರೆಗೂ ಮಠದಲ್ಲಿದ್ದು ಮಾತುಕತೆ ನಡೆಸಿದ್ದು ವಿಶೇಷವಾಗಿತ್ತು. ಭೇಟಿ ಬಳಿಕ ಪ್ರತಿಕ್ರಿಯಿಸಿದ ಸಿಎಂ, ಸ್ವಾಮೀಜಿಗಳನ್ನು ಭೇಟಿ ಮಾಡಿ ಬಹಳ ದಿನವಾಗಿತ್ತು. ಈ ಕಾರಣಕ್ಕೆ ನಾನು ಬಂದಿದ್ದೆ ಎಂದು ತಿಳಿಸಿದ್ದರು. ಎಸ್‍ಎಂಕೆ ಬಿಜೆಪಿ ಸೇರ್ಪಡೆಯಾದ ಹಿನ್ನೆಲೆಯಲ್ಲಿ ಭೇಟಿ ಮಾಡಿದ್ದೀರಾ ಎನ್ನುವ ಪ್ರಶ್ನೆಗೆ ‘ನೋ ಕಾಮೆಂಟ್ಸ್’ ಎಂದು ಪ್ರತಿಕ್ರಿಯಿಸಿದ್ದರು.

ಇಂದು ಬೆಂಗಳೂರಿಗೆ: ಬಿಜೆಪಿ ಸೇರ್ಪಡೆಯಾದ ನಂತರ ಮಾಜಿ ಸಿಎಂ ಎಸ್‍ಎಂ ಕೃಷ್ಣ ಮೊದಲ ಬಾರಿಗೆ ಇಂದು ಬೆಂಗಳೂರಿಗೆ ಬರಲಿದ್ದಾರೆ. ಸಂಜೆ ನಾಲ್ಕು ಗಂಟೆಗೆ ವಿಶೇಷ ವಿಮಾನದ ಮೂಲಕ ದೆಹಲಿಯಿಂದ ಹೊರಡುವ ಎಸ್‍ಎಂ ಕೃಷ್ಣ ಏಳು ಗಂಟೆಗೆ ಬೆಂಗಳೂರು ತಲುಪಲಿದ್ದಾರೆ.

ಬೆಂಗಳೂರಿನಲ್ಲಿ ಎಸ್‍ಎಂಕೆ ಅವರನ್ನು ಅದ್ದೂರಿಯಾಗಿ ಸ್ವಾಗತ ಕೋರಲು ಈಗಾಗಲೇ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಯೋಚಿಸಿದ್ದು ವಿಮಾನ ನಿಲ್ದಾಣದಿಂದ ಬೈಕ್ ಮೆರವಣಿಗೆ ಮೂಲಕ ಅಭೂತಪೂರ್ವ ಸ್ವಾಗತ ಕೋರಲು ಸಿದ್ದರಾಗಿದ್ದರು. ಆದರೆ ರಾಜ್ಯದಲ್ಲಿ ಬರ ಪರಿಸ್ಥಿತಿ ಮತ್ತು ಟ್ರಾಫಿಕ್ ಸಮಸ್ಯೆಯಿಂದಾಗಿ ನಗರದ ಜನರಿಗೆ ತೊಂದರೆ ನೀಡುವುದು ಬೇಡ ಎಂದು ನಯವಾಗಿ ತಿರಸ್ಕರಿಸಿದ್ದಾರೆ.

ಈ ಹಿಂದೆ ಕೂಡಾ ಮಹಾರಾಷ್ಟ್ರ ರಾಜ್ಯಪಾಲರಾದಾಗ ಕೃಷ್ಣ ಅವರ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ಅಂದು ಕಾರ್ಯಕರ್ತರು ಸಿದ್ದರಾಗಿದ್ದಾಗ ಬರದ ಹೆಸರನ್ನು ಹೇಳಿ ಸರಳವಾಗಿ ಆಚರಿಸಿಕೊಂಡಿದ್ದರು. ಕೃಷ್ಣಾ ಸೂಚನೆ ಹಿನ್ನಲೆಯಲ್ಲಿ ಸಂಜೆ ಏಳಕ್ಕೆ ಅವರನ್ನು ವಿಮಾನ ನಿಲ್ದಾಣದಿಂದ ಸರಳವಾಗಿ ಬರಮಾಡಿಕೊಂಡು ಬಿಜೆಪಿ ಕಾರ್ಯಕರ್ತರ ಉತ್ಸಾಹಕ್ಕೆ ಬೇಸರ ವ್ಯಕ್ತಪಡಿಸಬಾರದು ಎಂಬ ಉದ್ದೇಶದಿಂದ ಮಲ್ಲೇಶ್ವರಂ ಬಿಜೆಪಿ ಕಚೇರಿ ಬಳಿ ರಾತ್ರಿ ಎಂಟು ಗಂಟೆಗೆ ರಾಜ್ಯಾಧ್ಯಕ್ಷ ಯಡಿಯೂರಪ್ಪ ನೇತೃತ್ವದಲ್ಲಿ ಅದ್ದೂರಿ ಸ್ವಾಗತ ನೀಡಲು ಬಿಜೆಪಿ ಸಿದ್ಧತೆ ನಡೆಸಿದೆ.

vlcsnap 2017 03 24 13h59m58s736

smk bjp

TAGGED:bengalurubjpcongresskarnatakasiddaramaiahSM Krishnaಆದಿಚುಂಚನಗಿರಿಒಕ್ಕಲಿಗಕರ್ನಾಟಕಬಿಜೆಪಿಬೆಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

bigg boss kannada 12
ಬಿಗ್‌ ಬಾಸ್‌ ಅರಮನೆಯಲ್ಲಿ ಸ್ಪೆಷಲ್‌ ಗೆಸ್ಟ್‌ಗಳ ದರ್ಬಾರ್‌; ಪಾರ್ಟಿ ಮಾಡೋಕೆ ಬಂದಿದ್ದಾರೆ ಮಾಜಿ ಸ್ಪರ್ಧಿಗಳು
Cinema Latest Top Stories TV Shows
Sherlyn Chopra
ಸೌಂದರ್ಯವೇ ʻಎದೆʼಗೆ ಭಾರವಾದಾಗ…. ಸ್ತನ ಕಸಿ ತೆಗೆಸಿದ್ದೇಕೆ ಶೆರ್ಲಿನ್‌ ಚೋಪ್ರಾ? ಸ್ತನ ಕಸಿಯಿಂದೇನಾಗುತ್ತದೆ?
Bollywood Cinema Health Latest National Top Stories
Vijay Sethupathi and Puri Jagannadh
ವಿಜಯ್ ಸೇತುಪತಿ ಹೊಸ ಸಿನಿಮಾದ ಶೂಟಿಂಗ್ ಮುಕ್ತಾಯ: ಪುರಿ ನಿರ್ದೇಶನದ ಸಿನಿಮಾ
Cinema Latest South cinema
Risha Gowda
ಗಿಲ್ಲಿನೇ ಬಿಗ್‌ ಬಾಸ್‌ ಗೆಲ್ಲಬೇಕು – ರಿಷಾ ಗೌಡ
Cinema Karnataka Latest Top Stories TV Shows

You Might Also Like

Basavaraj rayreddy Siddaramaiah
Koppal

ನೀವ್ ನೀವೆ ಅಗ್ರಿಮೆಂಟ್ ಮಾಡಿಕೊಂಡರೆ ಇದೇನು ಕಾಂಟ್ರಾಕ್ಟಾ?- ಕುರ್ಚಿ ಕದನದಲ್ಲಿ ಸಿಎಂ ಪರ ರಾಯರೆಡ್ಡಿ ಬ್ಯಾಟಿಂಗ್

Public TV
By Public TV
10 minutes ago
Narendra Modi Ayodhya Ram Mandir
Latest

2047ರಲ್ಲಿ ವಿಕಸಿತ ಭಾರತ ನಿರ್ಮಾಣಕ್ಕೆ ರಾಮನ ಗುಣ ಮೈಗೂಡಿಸಿಕೊಳ್ಳಬೇಕು: ಮೋದಿ

Public TV
By Public TV
15 minutes ago
Datta Peetha 1
Chikkamagaluru

ದತ್ತಪೀಠ ಹಿಂದೂಗಳದ್ದು, ಮೈಸೂರು ಅರಸರು ಸಾವಿರಾರು ಎಕರೆ ದಾನ ನೀಡಿದ ದಾಖಲೆಗಳಿವೆ: ವಿಹೆಚ್‌ಪಿ

Public TV
By Public TV
33 minutes ago
Davanagere Death
Crime

ದಾವಣಗೆರೆ | ನಾಪತ್ತೆಯಾಗಿದ್ದ ಯುವಕರ ಶವ ಕೆರೆಯಲ್ಲಿ ಅನುಮಾನಾಸ್ಪದವಾಗಿ ಪತ್ತೆ

Public TV
By Public TV
54 minutes ago
Anekal Lorry Fell Into Lake
Bengaluru Rural

Anekal | ರಸ್ತೆ ಗುಂಡಿ ತಪ್ಪಿಸಲು ಹೋಗಿ ಚಾಲಕನ ಸಮೇತ ಕೆರೆಗೆ ಬಿದ್ದ ಲಾರಿ

Public TV
By Public TV
1 hour ago
PM Modi Sacred Flag Ram Temple
Latest

ಅಯೋಧ್ಯೆ ರಾಮಮಂದಿರದಲ್ಲಿ ಧರ್ಮ ಧ್ವಜಾರೋಹಣ ನೆರವೇರಿಸಿದ ಮೋದಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?