ಚಿಕ್ಕಬಳ್ಳಾಪುರ: ಲಾರಿ ಚಾಲಕನ ಅವಾಂತರದಿಂದ ಹೆದ್ದಾರಿಯಲ್ಲಿ ಸರಣಿ ಅಪಘಾತವಾಗಿದೆ. ಇದರ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಕಾರು ಬೈಕ್ ನಜ್ಜುಗುಜ್ಜಾಗಿದೆ. ಈ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (Doddaballapura) ತಾಲೂಕಿನ ಅರಳುಮಲ್ಲಿಗೆ (Aralumallige) ಗ್ರಾಮದ ಬಳಿ ನಡೆದಿದೆ.
ಮೃತ ಬೈಕ್ ಸವಾರನನ್ನು ಲೊಕೇಶ್ ಎಂದು ಗುರುತಿಸಲಾಗಿದ್ದು, ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.ಇದನ್ನೂ ಓದಿ: ಜೈಲಿಂದ ಹೊರಬಂದು ಪತ್ನಿ, 3 ಮಕ್ಕಳನ್ನು ಗುಂಡಿಕ್ಕಿ ಕೊಂದು ಆತ್ಮಹತ್ಯೆಗೆ ಶರಣಾದ ಭೂಪ!
ನಾಗಾಲ್ಯಾಂಡ್ (Nagaland) ನೋಂದಣಿಯ ಗೂಡ್ಸ್ ಕಂಟೈನರ್ ಲಾರಿಯ ಚಾಲಕನೊಬ್ಬ ಯದ್ವಾತದ್ವಾ ತೂರಾಡುತ್ತಾ ಲಾರಿ ಚಾಲನೆ ಮಾಡಿದ್ದಾನೆ. ಈ ವೇಳೆ ಬೈಕ್‌ಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಇದರ ಪರಿವೇ ಇಲ್ಲದೇ ಹಾಗೆಯೇ ಹೆದ್ದಾರಿಯಲ್ಲಿ ಸಾಗಿದ್ದು, ಆವಲಹಳ್ಳಿ ಬಳಿ ಕಾರಿಗೆ ಡಿಕ್ಕಿ ಹೊಡೆದಿದ್ದು ಕಾರು ಜಖಂಗೊಂಡಿದೆ.
ಲಾರಿ ಚಾಲಕನನ್ನ ಸಾರ್ವಜನಿಕರು ನೆಲಮಂಗಲ ಪೊಲೀಸರಿಗೆ ಹಿಡಿದುಕೊಟ್ಟಿದ್ದಾರೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ಸಿಎನ್‌ಜಿ ಗ್ಯಾಸ್ ಸೋರಿಕೆ, ಲಾರಿ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿತು ಬಹುದೊಡ್ಡ ಅನಾಹುತ