ತುಮಕೂರು: ರಾಜ್ಯದಲ್ಲಿ ನಡೆಯುತ್ತಿರುವ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ (By Election) ಎನ್‌ಡಿಎ (NDA) ಮೈತ್ರಿಕೂಟದ ಅಭ್ಯರ್ಥಿಗಳು ಜಯಗಳಿಸುವುದು ನಿಶ್ಚಿತ ಎಂದು ವಿಧಾನಪರಿಷತ್ ಮಾಜಿ ಸದಸ್ಯ, ನೇಕಾರ ಅಭಿವೃದ್ದಿ ನಿಗಮದ ಮಾಜಿ ಅಧ್ಯಕ್ಷ ಎಂಡಿ ಲಕ್ಷ್ಮೀನಾರಾಯಣ (MD Lakshminarayana) ತಿಳಿಸಿದರು.
ತುರುವೇಕೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನವೆಂಬರ್ 13 ರಂದು ನಡೆಯುವ ಉಪಚುನಾವಣೆಯಲ್ಲಿ ಶಿಗ್ಗಾಂವಿ ಕ್ಷೇತ್ರದಲ್ಲಿ ಭರತ್ ಬೊಮ್ಮಾಯಿ, ಸಂಡೂರಿನಲ್ಲಿ ಬಂಗಾರು ಹನುಮಂತು ಹಾಗೂ ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ಗೆಲುವು ಸಾಧಿಸಲಿದ್ದಾರೆ ಎಂದರು. ಇದನ್ನೂ ಓದಿ: 3 ತಿಂಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆ ಶವವಾಗಿ ಪತ್ತೆ
- Advertisement -
- Advertisement -
ಸರ್ಕಾರದ ಜನವಿರೋಧಿ, ಅಭಿವೃದ್ಧಿ ವಿರೋಧಿ ನೀತಿಗೆ ಜನತೆ ಈ ಮೂರು ಉಪಚುನಾವಣೆಯಲ್ಲಿ ತಕ್ಕಪಾಠ ಕಲಿಸಲಿದ್ದು, ಕಾಂಗ್ರೆಸ್ ಸರ್ಕಾರ ಮುಖಭಂಗ ಅನುಭವಿಸಲಿದೆ ಎಂದು ಹೇಳಿದರು. ಇದನ್ನೂ ಓದಿ: ಸ್ಥಳ ಮಹಜರ್ ವೇಳೆ ಪೊಲೀಸರಿಂದ ತಪ್ಪಿಸಿಕೊಂಡಿದ್ದ ಕೊಲೆ ಆರೋಪಿ ಬಂಧನ
- Advertisement -