ಬೆಳಗಾವಿ: ತಾಲೂಕಿನ ಕಲಕಾಂಬ ಗ್ರಾಮ ಪಂಚಾಯಿತಿ ಕಟ್ಟಡದ ಮೇಲೆ ತಡರಾತ್ರಿ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ಎಸೆದಿರುವ ಘಟನೆ ನಡೆದಿದೆ.
ನಿನ್ನೆ ರಾತ್ರಿ ಗ್ರಾಮ ಪಂಚಾಯಿತಿಯಲ್ಲಿ ಎರಡು ಗುಂಪುಗಳ ಮಧ್ಯೆ ತೀವ್ರ ಗಲಾಟೆ ಆಗಿರುವ ಮಾಹಿತಿ ಲಭ್ಯವಾಗಿದೆ. ಅದೇ ವಿಚಾರಕ್ಕೆ ತಡರಾತ್ರಿ ಕಿಡಿಗೇಡಿಗಳಿಂದ ಗ್ರಾಮ ಪಂಚಾಯಿತಿ ಕಟ್ಟಡಕ್ಕೆ ಬೆಂಕಿ ಹಚ್ಚಲಾಗಿದೆ ಎನ್ನುವ ಆರೋಪ ಕೇಳಿಬಂದಿದೆ.
ತಡರಾತ್ರಿ ಆಗಮಿಸಿದ್ದ ಕಿಡಿಗೇಡಿಗಳು ಬಿಯರ್ ಬಾಟಲ್‌ನಲ್ಲಿ ಪೆಟ್ರೋಲ್ ಸುರಿದು ಬಟ್ಟೆ ಹಾಕಿ ಬೆಂಕಿ ಹಚ್ಚಿ ಎಸ್ಕೇಪ್ ಆಗಿದ್ದಾರೆ. ಅಲ್ಲದೇ, ಗ್ರಾಮ ಪಂಚಾಯಿತಿ ಆವರಣ ಹಾಗೂ ಒಳಗಡೆ ಬಿಯರ್ ಬಾಟಲ್‌ಗಳನ್ನು ಎಸೆಯಲಾಗಿದೆ. ಕೃತ್ಯ ಎಸಗಿ ಸಿಕ್ಕಿಬಿಳುತ್ತೇವೆ ಎಂದು ಗ್ರಾಪಂ ಕಟ್ಟಡದ ಸಿಸಿಟಿವಿ ಕ್ಯಾಮೆರಾ ತೆಗೆದುಕೊಂಡು ಹೋಗಿದ್ದಾರೆ.
ಮಾರಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಗ್ರಾಮದಲ್ಲಿ ಪೊಲೀಸರು ಠಿಕಾಣಿ ಹೂಡಿದ್ದಾರೆ.