ಯಾಸೀರ್ ಪಠಾಣ್ ಮೇಲೆ ಯಾವುದೇ ರೌಡಿಶೀಟ್ ಇಲ್ಲ: ಎಸ್ಪಿ ಸ್ಪಷ್ಟನೆ

Public TV
1 Min Read
Yasir Khan Pathan 1

ಹಾವೇರಿ: ಶಿಗ್ಗಾಂವಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ (Yasir Khan Pathan) ಮೇಲೆ ಯಾವುದೇ ರೀತಿಯ ರೌಡಿಶೀಟ್ ಇರುವುದಿಲ್ಲ ಎಂದು ಹಾವೇರಿ (Haveri) ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದವರಾದ ಯಾಸೀರ್ ಪಠಾಣ್ ಮೇಲೆ ರೌಡಿಶೀಟ್ (Rowdy Sheet) ಇದೆ ಎಂದು ಕೆಲವು ಮಾಧ್ಯಮಗಳಲ್ಲಿ ಪ್ರಸಾರವಾಗಿರುತ್ತದೆ. ಶಿಗ್ಗಾಂವಿಯ (Shiggaon) ಡಿಎಸ್‌ಪಿ ಮತ್ತು ಪೊಲೀಸ್ ಇನ್ಸಪೆಕ್ಟರ್ (ಪಿಐ) ಅವರ ಕಚೇರಿಯ ದಾಖಲಾತಿಗಳನ್ನು ಪರಿಶೀಲಿಸಲಾಗಿದ್ದು, ಪ್ರಸ್ತುತ ಯಾಸೀರ್ ಪಠಾಣ್ ಅವರ ಮೇಲೆ ಯಾವುದೇ ರೌಡಿ ಶೀಟ್ ಇರುವುದಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯ ಪ್ರಕಟಣೆ ತಿಳಿಸಿದೆ. ಇದನ್ನೂ ಓದಿ: ಜಮೀರ್‌ಗೆ ಮತ್ತೊಂದು ಸಂಕಷ್ಟ; ಸಚಿವರ ವಿರುದ್ಧ ಚುನಾವಣಾಧಿಕಾರಿಗಳಿಂದ ದೂರು

ಈ ಮೊದಲು ಎಸ್ಪಿ ಅಂಶುಕುಮಾರ್ ಮಾಧ್ಯಮಗಳೊಂದಿಗೆ ಮಾತನಾಡಿದ್ದ ವೇಳೆ, ಪಠಾಣ್ ನಾಮಪತ್ರ ಸಲ್ಲಿಸುವ ವೇಳೆ ಅಫಿಡವಿಟ್‌ನಲ್ಲಿ ಯಾವುದೇ ಪ್ರಕರಣ ಇಲ್ಲ ಎಂದು ಹೇಳಿದ್ದರು. ಆದರೆ ಅವರ ಮೇಲೆ ರೌಡಿಶೀಟರ್ ಪ್ರಕರಣ ಇದೆ ಎಂದು ಗಂಭೀರ ಆರೋಪ ಮಾಡಿದ್ದರು. ಇದನ್ನೂ ಓದಿ: ಪ್ರೇಮಿ ಮದುವೆಗೆ ನಿರಾಕರಿಸಿದ ಆರೋಪ- ಯುವತಿ ಆತ್ಮಹತ್ಯೆಗೆ ಶರಣು

Share This Article