ಶಿವಮೊಗ್ಗ | ದಾನವಾಡಿ ಅರಣ್ಯದಲ್ಲಿ ಕಡವೆ ಬೇಟೆ – ಆರೋಪಿ ಅರೆಸ್ಟ್

Public TV
1 Min Read
sambar deer hunting accused arrested in shivamogga

ಶಿವಮೊಗ್ಗ: ದಾನವಾಡಿ ಕಿರು ಅರಣ್ಯ ಪ್ರದೇಶದಲ್ಲಿ ಕಡವೆ (Sambar deer) ಬೇಟೆಯಾಡಿದ್ದ ಆರೋಪಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಮಂಜುನಾಥ್ ಎಂದು ಗುರುತಿಸಲಾಗಿದೆ. ಐವರು ದುಷ್ಕರ್ಮಿಗಳು ಸೇರಿ ಭದ್ರಾವತಿ (Bhadravathi) ತಾಲೂಕಿನ ದಾನವಾಡಿ ಕಿರು ಅರಣ್ಯ ಪ್ರದೇಶದಲ್ಲಿ ಕಡವೆಯನ್ನು ಬೇಟೆಯಾಡಿದ್ದಾರೆ. ಈ ಮಾಹಿತಿ ತಿಳಿದು ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಅಧಿಕಾರಿಗಳು ನಡೆಸಿದ ದಾಳಿ ವೇಳೆ ಉಳಿದ ನಾಲ್ವರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ಕಾರ್ಯಾಚರಣೆ ವೇಳೆ ಕಡವೆಯ ಮಾಂಸವನ್ನ ಅರಣ್ಯ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಭದ್ರಾವತಿ ವಲಯ ಅರಣ್ಯ ಇಲಾಖೆ ಅಧಿಕಾರಿಗಳಿಂದ ಈ ದಾಳಿ ನಡೆದಿದೆ. ಉಪ ಅರಣ್ಯ ಸಂರಕ್ಷಣಾಧಿಕಾರಿ ಅಶಿಶ್ ರೆಡ್ಡಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಆರೋಪಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ.

ಉಳಿದ ಆರೋಪಿಗಳ ಬಂಧನಕ್ಕೆ ಅರಣ್ಯ ಅಧಿಕಾರಿಗಳು ಬಲೆ ಬೀಸಿದ್ದಾರೆ.

Share This Article