– ನೋಟಿಸ್ ರದ್ದು ಪಡಿಸದೇ ಇದ್ದರೆ ಅಹೋರಾತ್ರಿ ಧರಣಿಯ ಎಚ್ಚರಿಕೆ
ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಅಥಣಿ (Athani) ತಾಲೂಕಿನ ಅನಂತಪುರ ಗ್ರಾಮದಲ್ಲಿ ವಕ್ಫ್ ಬೋರ್ಡ್ (Waqf Board) ವಿರುದ್ಧ ಈಗ ಮುಸ್ಲಿಂ ಸಮುದಾಯವೇ (Muslim Community) ತಿರುಗಿಬಿದ್ದಿದೆ.
ಅನಂತಪುರ ಗ್ರಾಮದ ದರ್ಗಾದಲ್ಲಿ ಸಭೆ ಮಾಡಿದ ರೈತರು, ಕಾಗವಾಡ ಹಾಗೂ ಅಥಣಿ ಶಾಸಕರಿಗೆ ಬರುವ ನವೆಂಬರ್ 25ರ ಒಳಗಾಗಿ ಅನಂತಪುರ, ಬಳ್ಳಿಗೇರಿ ಗ್ರಾಮದ 60 ಕ್ಕೂ ಅಧಿಕ ಜನ ರೈತರ ಜಮೀನಿನ (Farmers Land) ಪಹಣಿಯಲ್ಲಿ ನೊಂದಣಿಯಾದ ವಕ್ಫ್ ಹೆಸರು ತೆರವುಗೊಳಿಸಬೇಕು. ಇಲ್ಲವಾದರೆ ಸರ್ಕಾರದ ವಿರುದ್ಧ ಅಹೋರಾತ್ರಿ ಧರಣಿ ನಡೆಸಿ ಹೋರಾಟ ಮಾಡುವ ತೀರ್ಮಾನವನ್ನು ಸಭೆಯಲ್ಲಿ ಕೈಗೊಳ್ಳಲಾಗಿದೆ. ಇದನ್ನೂ ಓದಿ: ಬಳ್ಳಾರಿಯಲ್ಲೂ ವಕ್ಫ್ ವಿವಾದ – ರೈತರ ಪಿತ್ರಾರ್ಜಿತ ಆಸ್ತಿಗೆ ನೋಟಿಸ್
- Advertisement
60ಕ್ಕೂ ಹೆಚ್ಚು ಮುಸ್ಲಿಂ ಹಾಗೂ ಇನ್ನುಳಿದ ರೈತರ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಾಗಿದೆ. 2018 ರಲ್ಲಿ ರೈತರ ಜಾಗದ ಪಹಣಿಯಲ್ಲಿ ಇದ್ದಕ್ಕಿದ್ದಂತೆ ವಕ್ಫ್ ಎಂದು ಸೇರ್ಪಡೆಯಾಗಿದೆ ಎಂದು ದೂರಿದ್ದಾರೆ. ವಕ್ಫ್ ಹೆಸರು ಸೇರ್ಪಡೆಯಿಂದ ಸಾಲ ಸೌಲಭ್ಯ ಸಿಗುತ್ತಿಲ್ಲ. ಸರ್ಕಾರ ಯೋಜನೆಯಿಂದ ನಾವು ವಂಚಿತರಾಗಿದ್ದೇವೆ. ಆದಷ್ಟು ಬೇಗನೆ ಪಹಣಿಯಲ್ಲಿ ವಕ್ಫ್ ಹೆಸರು ತೆರವು ಮಾಡಬೇಕು ಎಂದು ಆಗ್ರಹಿಸಿದ್ದಾರೆ.
- Advertisement
ಇಲ್ಲಿಯವರೆಗೆ ತಹಶೀಲ್ದಾರ್ ಕಚೇರಿ ಅಲೆದಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಮ್ಮ ಅವಧಿಯಲ್ಲಿ ನೀಡಲಾದ ನೋಟಿಸ್ ಮರಳಿ ಪಡೆಯಲು ತಿಳಿಸಿದ್ದಾರೆ. ಆದರೆ ಈ ಹಿಂದೆ ನೋಟಿಸ್ ಬಂದಿರುವ ನಮ್ಮ ಪಾಡೇನು? ನಾವು ಯಾರನ್ನು ಕೇಳಬೇಕು? ನಮಗೆ ನ್ಯಾಯ ಕೊಡಿಸುವವರು ಯಾರು ಎಂದು ಪ್ರಶ್ನಿಸಿದರು.
ಸಭೆಯಲ್ಲಿ ಅಥಣಿ ಹಾಗೂ ಕಾಗವಾಡ ತಾಲೂಕಿನ ಅನೇಕ ಗ್ರಾಮಗಳ 60 ಕ್ಕೂ ಅಧಿಕ ಜನ ರೈತರು ಸಭೆ ಮಾಡಿ ನ. 25 ರವರೆಗೆ ಶಾಸಕರಾದ ಲಕ್ಷ್ಮಣ ಸವದಿ ಹಾಗೂ ರಾಜು ಕಾಗೆ ಅವರಿಗೆ ಗಡುವು ನೀಡಿದ್ದಾರೆ. ಇಬ್ಬರು ಶಾಸಕರು ಸ್ಪಂದಿಸದೇ ಇದ್ದರೆ ಅಹೋರಾತ್ರಿ ಧರಣಿ ಮಾಡುವುದಾಗಿ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದೆ.