ಮುಂಬೈ: ಸ್ವತಃ ಇಂದಿರಾ ಗಾಂಧಿ (Indira Gandhi) ಅವರೇ ಸ್ವರ್ಗದಿಂದ ಹಿಂತಿರುಗಿ ಬಂದರೂ ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿ ಮರುಸ್ಥಾಪಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ (Amit Shah) ಗುಡುಗಿದರು.
ಮಹಾರಾಷ್ಟ್ರದ ಚುನಾವಣಾ (Maharashtra Elections) ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್-ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿ ಸರ್ಕಾರವು 370ನೇ ವಿಧಿಯನ್ನು (Article 370) ಮರುಸ್ಥಾಪಿಸಲು ನಿರ್ಣಯ ಮಂಡಿಸಿದೆ. ನಾನು ಈಗಲೂ ಹೇಳುತ್ತೇನೆ ಸ್ವತಃ ಇಂದಿರಾ ಗಾಂಧಿ ಅವರೇ ಸ್ವರ್ಗದಿಂದ ಹಿಂತಿರುಗಿ ಬಂದರೂ 370ನೇ ವಿಧಿ ಮರುಸ್ಥಾಪಿಸಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದರು. ಇದನ್ನೂ ಓದಿ: ಮೈಕೆಲ್ ಕುನ್ಹಾ 7,223 ಕೋಟಿ ಅವ್ಯವಹಾರದ ಸತ್ಯಶೋಧನೆ ನಡೆಸಿದ್ದಾರೆ: ಹೆಚ್.ಕೆ ಪಾಟೀಲ್
ಇದೇ ವೇಳೆ ಶ್ರೀನಗರದ ಲಾಲ್ ಚೌಕ್‌ಗೆ ಭೇಟಿ ನೀಡಿದಾಗ ನನಗೆ ಭಯವಾಗಿತ್ತು ಎಂಬ ಮಾಜಿ ಕೇಂದ್ರ ಸಚಿವ ಸುಶೀಲ್‌ಕುಮಾರ್ ಶಿಂಧೆ ಹೇಳಿಕೆಗೆ ಪ್ರತಿಕ್ರಿಯಿಸಿ, ಮನಮೋಹನ್ ಆಡಳಿತದ 10 ವರ್ಷಗಳ ಅವಧಿಯಲ್ಲಿ, ಭಯೋತ್ಪಾದಕರು ಪಾಕಿಸ್ತಾನದಿಂದ ಮುಕ್ತವಾಗಿ ಬಂದು ಇಲ್ಲಿ ಬಾಂಬ್ ಸ್ಫೋಟ ಮಾಡುತ್ತಿದ್ದರು, ಬಾಂಬ್ ಸ್ಫೋಟಕ್ಕೂ ಪ್ರಚೋದನೆ ನೀಡುತ್ತಿದ್ದರು. ಶಿಂಧೇ ಜೀ, ಈಗ ನಿಮ್ಮ ಮೊಮ್ಮಕ್ಕಳೊಂದಿಗೆ ಈಗ ಕಾಶ್ಮೀರಕ್ಕೆ ಬೇಕಾದ್ರೂ ಹೋಗಿ, ನಿಮಗೆ ಏನೂ ಆಗುವುದಿಲ್ಲ ಎಂದು ಹೇಳಿದರು.
ಇತ್ತೀಚೆಗೆ ಮುಂಬೈನಲ್ಲಿ ನಡೆದ ರ‍್ಯಾಲಿಯಲ್ಲೂ ಇದೇ ರೀತಿಯ ಹೇಳಿಕೆಗಳನ್ನು ಸಚಿವರು ನೀಡಿದ್ದರು. ರಾಹುಲ್ ಗಾಂಧಿಯವರ 4ನೇ ತಲೆಮಾರಿನವರು ಬಂದರೂ ಸಹ ಕಾಶ್ಮೀರದಲ್ಲಿ 370ನೇ ವಿಧಿ ಮರುಸ್ಥಾಪನೆ ಸಾಧ್ಯವಿಲ್ಲ ಎಂದು ಗುಡುಗಿದ್ದರು. ಇದನ್ನೂ ಓದಿ: ರಾಜ್ಯದ ಜನತೆಗೆ ಮುಜರಾಯಿ ಇಲಾಖೆ ಗುಡ್‌ನ್ಯೂಸ್ – ವೈಷ್ಣೋದೇವಿಗೆ ತೆರಳುವ ಭಕ್ತರಿಗೆ 5,000 ಸಹಾಯಧನ