‘ಎಮರ್ಜೆನ್ಸಿ’ ರಿಲೀಸ್‌ಗೆ ಮುಹೂರ್ತ ಫಿಕ್ಸ್- ಜ.17ಕ್ಕೆ ಕಂಗನಾ ಸಿನಿಮಾ ರಿಲೀಸ್

Public TV
1 Min Read
kangana ranaut

ಬಾಲಿವುಡ್ ಬೆಡಗಿ ಕಂಗನಾ ರಣಾವತ್ (Kangana Ranaut) ನಟಿಸಿ, ನಿರ್ದೇಶಿಸಿ, ನಿರ್ಮಾಣ ಮಾಡಿರುವ ‘ಎಮರ್ಜೆನ್ಸಿ’ (Emergency) ಚಿತ್ರ ಥಿಯೇಟರ್‌ಗೆ ಲಗ್ಗೆಯಿಡಲು ಸಿದ್ಧವಾಗಿದೆ. ಹೊಸ ರಿಲೀಸ್ ಡೇಟ್ ಅನೌನ್ಸ್ ಮಾಡುವ ಮೂಲಕ ಫ್ಯಾನ್ಸ್‌ಗೆ ಗುಡ್ ನ್ಯೂಸ್ ಕೊಟ್ಟಿದೆ. ಇದನ್ನೂ ಓದಿ:ದರ್ಶನ್‌ ನಟನೆಯ ‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ಚಿತ್ರ ನ.22ಕ್ಕೆ ರೀ ರಿಲೀಸ್‌

Kangana Ranaut

ಈ ಹಿಂದೆ ಟ್ರೈಲರ್ ಮೂಲಕ ರಿಲೀಸ್ ಡೇಟ್‌ನ್ನು ಚಿತ್ರತಂಡ ರಿವೀಲ್ ಮಾಡಿತ್ತು. ಎಲ್ಲಾ ಅಂದುಕೊಂಡಂತೆ ಆಗಿದ್ರೆ ಸೆಪ್ಟೆಂಬರ್ 6ರಂದು ಈ ಚಿತ್ರ ಬಿಡುಗಡೆಯಾಗಬೇಕಿತ್ತು. ಆದರೆ ಸಿನಿಮಾಕ್ಕೆ ಸೆನ್ಸಾರ್ ಸಿಗದೆ ರಿಲೀಸ್‌ಗೆ ವಿಳಂಬವಾಗಿತ್ತು. 2025ರ ಜನವರಿ 17ರಂದು ‘ಎಮರ್ಜೆನ್ಸಿ’ ಚಿತ್ರ ರಿಲೀಸ್ ಆಗಲಿದೆ ಎಂದು ಕಂಗನಾ ಅಪ್‌ಡೇಟ್ ಹಂಚಿಕೊಂಡಿದ್ದಾರೆ.

ಇನ್ನೂ ಸಿನಿಮಾದಲ್ಲಿ ಕಂಗನಾ ಅವರು ಇಂದಿರಾ ಗಾಂಧಿ ಪಾತ್ರಕ್ಕೆ ಜೀವ ತುಂಬಿದ್ದಾರೆ. ಅನುಪಮ್ ಖೇರ್ ಸೇರಿದಂತೆ ಅನೇಕರು ನಟಿಸಿದ್ದಾರೆ. ಕಂಗನಾ ನಟನೆಯ ಈ ಸಿನಿಮಾಗಾಗಿ ಎದುರು ನೋಡುತ್ತಿದ್ದಾರೆ.

Share This Article