– ಬಡವರ ಪಡಿತರ ಚೀಟಿ ರದ್ದು ಮಾಡಿದ್ರೆ ಅಧಿಕಾರಿಗಳ ವಿರುದ್ಧ ಕ್ರಮದ ಎಚ್ಚರಿಕೆ
ಬೆಂಗಳೂರು: ರೇಷನ್ ಕಾರ್ಡ್ ರದ್ದು ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದೆ. ರದ್ದಾದ ಅರ್ಹ ಬಿಪಿಎಲ್ (BPL) ಕಾರ್ಡ್ ವಾಪಸ್‌ಗೆ ಸಿಎಂ ಸಿದ್ದರಾಮಯ್ಯ (Siddaramaiah) ತುರ್ತು ಆದೇಶ ಹೊರಡಿಸಿದ್ದಾರೆ.
‘ಪಬ್ಲಿಕ್ ಟಿವಿ’ ನಿರಂತರ ಅಭಿಯಾನಕ್ಕೆ ಸಿಎಂ ಸಿದ್ದರಾಮಯ್ಯ ಸ್ಪಂದಿಸಿದ್ದಾರೆ. ಈ ಕುರಿತು ಸಿಎಂ ಕಚೇರಿ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಇದನ್ನೂ ಓದಿ: ಬಿಪಿಎಲ್, ಎಪಿಎಲ್ ಯಾವ ಕಾರ್ಡ್ ರದ್ದಾಗಲ್ಲ: ಕೆ.ಹೆಚ್.ಮುನಿಯಪ್ಪ
ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಹಾರ ಇಲಾಖೆ ಅಧಿಕಾರಿಗಳಿಗೆ ಕಟ್ಡುನಿಟ್ಡಿನ ಸೂಚನೆ ನೀಡಿದ್ದಾರೆ.
ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರನ್ನು ಹೊರತುಪಡಿಸಿದಂತೆ ಉಳಿದ ಯಾವುದೇ ಕುಟುಂಬದವರ ಪಡಿತರ ಚೀಟಿ ರದ್ದಾಗಿದ್ದರೆ, ತಕ್ಷಣ ವಾಪಸ್ ನೀಡುವಂತೆ ಮುಖ್ಯಮಂತ್ರಿಗಳು ಆದೇಶಿಸಿದ್ದಾರೆ. ಇದನ್ನೂ ಓದಿ: ಆಹಾರ ಸುರಕ್ಷತಾ ಇಲಾಖೆಯಿಂದ ರಾಜ್ಯದ 127 ಪಿಜಿಗಳಿಗೆ ನೋಟಿಸ್ – 4 ಪಿಜಿಗಳಿಗೆ ದಂಡ
ಬಡ ಕುಟುಂಗಳ ಪಡಿತರ ಚೀಟಿಗಳನ್ನು ವಿನಾಕಾರಣ ರದ್ದು ಮಾಡಿದರೆ ಆಹಾರ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವುದಾಗಿ ಮುಖ್ಯಮಂತ್ರಿಗಳು ಎಚ್ವರಿಕೆ ನೀಡಿದ್ದಾರೆ.