ನಮ್ಮ ಹೋರಾಟ ವಕ್ಫ್ ವಿರುದ್ಧ, ಯಾವುದೇ ಕುಟುಂಬದ ವಿರುದ್ಧವಲ್ಲ: ಯತ್ನಾಳ್

Public TV
1 Min Read
Basangouda Patil Yatnal

ಕಲಬುರಗಿ: ನಾವು ರಾಜ್ಯದ ರೈತರಿಗಾಗಿ ಹೋರಾಟ ಮಾಡುತ್ತಿದ್ದೇವೆಯೇ ಹೊರತು ಯಾವುದೇ ಕುಟುಂಬದ ವಿರುದ್ಧವಾಗಿ ಅಲ್ಲ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಸ್ಪಷ್ಟಪಡಿಸಿದರು.

ಕಲಬುರಗಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವೇನೂ ಮುಖ್ಯಮಂತ್ರಿಯಾಗಲು ಹೋರಾಟ ನಡೆಸುತ್ತಿಲ್ಲ. ರಾಜ್ಯದ ರೈತರಿಗೆ ಸಂಕಷ್ಟ ಬಂದಿದೆ. ಸಂಕಷ್ಟಕ್ಕೆ ಕಾರಣವಾಗಿರುವ ವಕ್ಫ್ ವಿರುದ್ಧ ಜನಜಾಗೃತಿಗಾಗಿ ಹೋರಾಟ ನಡೆಸಲಾಗುತ್ತಿದೆ ಹೊರತು ಯಾವುದೇ ರಾಜಕೀಯ ಲಾಭಕ್ಕಾಗಿ ಅಲ್ಲ ಎಂದು ಹೇಳಿದರು. ಇದನ್ನೂ ಓದಿ: ಸ್ಕ್ಯಾನ್‌ ಮಾಡಿ, ಹಂಪಿ ಶಿಲೆಗಳ ಸಂಗಿತ ಕೇಳಿ!

ಉಪಚುನಾವಣೆಯಲ್ಲಿ ಆಗಿರುವ ಸೋಲಿನ ಹೊಣೆಯನ್ನು ಎಲ್ಲಾ ನಾಯಕರು ಹೊರಬೇಕು ಎಂಬ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಗೆದ್ದರೆ ಅವರು ಹೊರಬೇಕು. ಸೋತರೆ ನಾವು ಹೊರಬೇಕು. ಹಿರಿಯರು ಹೇಳಿದ ಮಾತ್ರಕ್ಕೆ ನಾವೆಲ್ಲ ಕೇಳಬೇಕು ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ರಾಹುಲ್‌ ದ್ವಿ ಪೌರತ್ವ ಕೇಸ್‌ – ಪರಿಶೀಲನೆ ನಡೆಸುತ್ತಿದ್ದೇವೆ ಎಂದ ಕೇಂದ್ರ ಸರ್ಕಾರ

ನಾವು ಯಾರೂ ಪಕ್ಷ ಬಿಟ್ಟು ಹೋಗಿಲ್ಲ. ನಾವು ಪಕ್ಷದಲ್ಲೇ ಇದ್ದೇವೆ. ಭಾರತ ಮಾತಾ ಕೀ ಜೈ, ಅಟಲ್ ಬಿಹಾರಿ ವಾಜಪೇಯಿ ಕೀ ಜೈ, ಪ್ರಧಾನಿ ನರೇಂದ್ರ ಮೋದಿ ಕೀ ಜೈ ಅಂತಾನೇ ಹೇಳುತ್ತಿದ್ದೇವೆ. ನಮ್ಮ ಮೇಲೆ ಯಾಕೆ ಕ್ರಮ ಕೈಗೊಳ್ಳುತ್ತಾರೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಳಪೆ ಬೀಜಗಳ ಮಾರಾಟ ಹೆಚ್ಚಳ – ರೈತರಿಗೆ ಭಾರೀ ನಷ್ಟ

ನನ್ನ ವಿರುದ್ಧ ಹೈಕಮಾಂಡ್‌ಗೆ ಪತ್ರ ಬರೆಯುತ್ತಿರುವುದು ಹೊಸದೇನಲ್ಲ. ಬಹಳ ಸಲ ಬರೆಯಲಾಗಿದೆ. ನನ್ನ ವಿರುದ್ಧ ನೀಡಿರುವ ದೂರುಗಳು ಒಂದು ರೂಂ ತುಂಬಿ ಹೋಗಿವೆ. ಆದರೆ ಏನೂ ಮಾಡಲು ಆಗಲ್ಲ. ಮುಂದೊಂದು ದಿನ ಟಿಕೆಟ್ ಕೊಡುವ ಅಧಿಕಾರ ನಮಗೆ ಬರುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಬ್ರಹ್ಮಾವರ ಲಾಕಪ್ ಡೆತ್ ಕೇಸ್ ಕೇರಳ ಸಿಎಂ ಅಂಗಳಕ್ಕೆ

Share This Article