ಅದಾನಿ ತಮ್ಮ ಮೇಲಿನ ಆರೋಪ ಒಪ್ಪಿಕೊಳ್ಳಲ್ಲ, ಕೇಂದ್ರ ಸರ್ಕಾರವೇ ರಕ್ಷಿಸುತ್ತಿದೆ: ರಾಗಾ ಕಿಡಿ

Public TV
2 Min Read
Rahul Gandhi 4

ನವದೆಹಲಿ: ಉದ್ಯಮಿ ಗೌತಮ್‌ ಅದಾನಿ ಅವರು ಎಂದಿಗೂ ತಮ್ಮ ಮೇಲಿನ ಆರೋಪಗಳನ್ನು ಒಪ್ಪಿಕೊಳ್ಳಲ್ಲ. ನ್ಯಾಯಯುತವಾಗಿ ಅವರು ಜೈಲಿನಲ್ಲಿರಬೇಕು, ಆದ್ರೆ ಕೇಂದ್ರ ಸರ್ಕಾರವೇ ಅವರನ್ನ ರಕ್ಷಿಸುತ್ತಿದೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ‌ಗಾಂಧಿ (Rahul Gandhi) ಕಿಡಿ ಕಾರಿದ್ದಾರೆ.

ಉದ್ಯಮಿ ಗೌತಮ್‌ ಅದಾನಿ (Gautam Adani) ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಸೇರಿದಂತೆ ಇತರ ಏಳು ಅಧಿಕಾರಿಗಳು ಸೌರ ಶಕ್ತಿಯ ಒಪ್ಪಂದಗಳನ್ನು ಪಡೆಯಲು ಭಾರತೀಯ ಸರ್ಕಾರಿ ಅಧಿಕಾರಿಗಳಿಗೆ 265 ಮಿಲಿಯನ್ ಡಾಲರ್‌ಗೂ (ಅಂದಾಜು 2238 ಕೋಟಿ ರೂ.) ಹೆಚ್ಚು ಲಂಚದ (Bribe) ಭರವಸೆ ನೀಡಿದ್ದಾರೆ ಎಂಬ ಆರೋಪವನ್ನು ಅದಾನಿ ಸಮೂಹ ತಳ್ಳಿಹಾಕಿದ ನಂತರ ರಾಹುಲ್‌ ಗಾಂಧಿ ಪ್ರತಿಕ್ರಿಯೆ ನೀಡಿದ್ದಾರೆ.

gautam adani

ಅದಾನಿ ಆರೋಪಗಳನ್ನು ಒಪ್ಪಿಕೊಳ್ಳುತ್ತಾರೆ ಎಂದು ನೀವು ಭಾವಿಸುತ್ತೀರಾ? ನಿಸ್ಸಂಶಯವಾಗಿ ಅವರು ಆರೋಪಗಳನ್ನು ನಿರಾಕರಿಸುತ್ತಾರೆ. ಹಾಗಾಗಿ ನಾವು ಹೇಳಿದಂತೆ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಕೇಂದ್ರದಿಂದ ಅನುದಾನ ತಂದು ಸಂಪನ್ಮೂಲ ಹೆಚ್ಚಿಸಿಕೊಳ್ತೇವೆ – ಪರಮೇಶ್ವರ್‌

ಸಣ್ಣ ಸಣ್ಣ ಆರೋಪದಲ್ಲಿ ನೂರಾರು ಜನರನ್ನು ಬಂಧಿಸಲಾಗುತ್ತಿದೆ. ಆದ್ರೆ ಯುನೈಟೆಡ್ ಸ್ಟೇಟ್ಸ್‌ನಲ್ಲಿ ಸಾವಿರಾರು ಕೋಟಿ ರೂ.ಗಳ ಆರೋಪ ಹೊರಿಸಲ್ಪಟ್ಟಿದೆ. ನ್ಯಾಯಯುತವಾಗಿ ಅವರು ಜೈಲಿನಲ್ಲಿರಬೇಕು, ಆದ್ರೆ ಕೇಂದ್ರ ಸರ್ಕಾರವೇ ಅವರನ್ನು ರಕ್ಷಿಸುತ್ತಿದೆ ಎಂದು ದೂರಿದ್ದಾರೆ.

ಬುಧವಾರ ಬೆಳಗ್ಗಯಷ್ಟೇ ತಮ್ಮ ವಿರುದ್ಧದ ಆರೋಪಗಳನ್ನು ಅದಾನಿ ಗ್ರೀನ್‌ ಎನರ್ಜಿ ಲಿಮಿಟೆಡ್‌ (AGEL) ತಳ್ಳಿಹಾಕಿದೆ. ಗೌತಮ್ ಅದಾನಿ, ಸಾಗರ್ ಅದಾನಿ ಮತ್ತು ಹಿರಿಯ ಕಾರ್ಯನಿರ್ವಹಣಾಧಿಕಾರಿ ವನೀತ್ ಜೈನ್ ವಿರುದ್ಧ ಯುಎಸ್ ಫಾರಿನ್ ಕರಪ್ಟ್ ಪ್ರಾಕ್ಟೀಸಸ್ ಆಕ್ಟ್ (ಎಫ್‌ಸಿಪಿಎ) ಉಲ್ಲಂಘನೆಯ ಆರೋಪ ಹೊರಿಸಲಾಗಿಲ್ಲ ಎಜಿಇಎಲ್ ಸ್ಪಷ್ಟನೆ ನೀಡಿದೆ. ಇದನ್ನೂ ಓದಿ: ಸಿಎಂ ಪತ್ನಿಗೆ ಮತ್ತೊಂದು ಕಾನೂನು ಸಂಕಷ್ಟ – ತವರಿನಿಂದ ಉಡುಗೊರೆಯಾಗಿ ಪಡೆದಿದ್ದ ಭೂಮಿ ಮೇಲೆ ಕೇಸ್‌

ಇಂಡಿಯಾ ಒಕ್ಕೂಟ ಸಭೆ:
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿಂದು ಇಂಡಿಯಾ ಮೈತ್ರಿಕೂಟದ ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೂಡ ಉಪಸ್ಥಿತರಿದ್ದರು. ಸಂಸತ್ ಅಧಿವೇಶನದಲ್ಲಿ ಪ್ರಸ್ತಾಪಿಸಬೇಕಾದ ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

Share This Article