ಶಿವಾಜಿ ಮಹಾರಾಜ್ ಬಯೋಪಿಕ್‌ನಲ್ಲಿ ನಟಿಸಲು ಒಪ್ಪಿಕೊಂಡ ರಿಷಬ್ ಶೆಟ್ಟಿ: ಪರ- ವಿರೋಧ ಚರ್ಚೆ

Public TV
3 Min Read
rishab shetty

ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ (Rishab Shetty) ಅವರು ಛತ್ರಪತಿ ಶಿವಾಜಿ ಮಹಾರಾಜ್ ಬಯೋಪಿಕ್‌ನಲ್ಲಿ (Chhatrapati Shivaji Maharaj) ನಟಿಸೋದಾಗಿ ಅನೌನ್ಸ್ ಮಾಡಿದ ಬೆನ್ನಲ್ಲೇ ತೀವ್ರ ಪರ ಮತ್ತು ವಿರೋಧದ ಚರ್ಚೆ ನಡೆಯುತ್ತಿದೆ. ಕರ್ನಾಟಕದ ಪಾಲಿಗೆ ಶಿವಾಜಿ ದಾಳಿಕೋರ, ಕರ್ನಾಟಕಕ್ಕೆ ಶಿವಾಜಿ ಕೊಡುಗೆ ಏನು ಅಂತ ಪ್ರಶ್ನಿಸಿ ಫ್ಯಾನ್ಸ್ ರಿಷಬ್ ಶೆಟ್ಟಿಗೆ ಟ್ಯಾಗ್ ಮಾಡಿದ್ದಾರೆ.‌ ಇದನ್ನೂ ಓದಿ:ದರ್ಶನ್‌ ಸೂಚನೆ ಮೇರೆಗೆ ಕಿಡ್ನಾಪ್‌ – ಕೊಲೆಯಲ್ಲಿ ಪವಿತ್ರಾ ಪಾತ್ರವಿಲ್ಲ: ವಕೀಲರ ವಾದ

ಭಾರತದ ಮಹಾನ್ ಯೋಧ, ರಾಜ ಶಿವಾಜಿಯ ಜೀವನಚರಿತ್ರೆಯನ್ನು ತೆರೆಗೆ ತರುತ್ತಿರುವುದು ನಮ್ಮ ಗೌರವ ಹಾಗೂ ಹೆಮ್ಮೆ. ಇದು ಬರೀ ಸಿನಿಮಾ ಅಲ್ಲ, ದುಷ್ಟರ ವಿರುದ್ಧ ಹೋರಾಡಿ ಮೊಘಲ್ ಸಾಮ್ರಾಜ್ಯವನ್ನು ಕಟ್ಟಿ ಬೆಳೆಸಿದ ವೀರ ಯೋಧನ ಕಥೆ. ತೆರೆಮೇಲೆ ಅದ್ಭುತ ಆ್ಯಕ್ಷನ್ ಡ್ರಾಮಾ ನೋಡಲು ಸಿದ್ಧರಾಗಿ ಎಂದು ರಿಷಬ್ ಸಿನಿಮಾ ಪೋಸ್ಟರ್ ಹಂಚಿಕೊಂಡ ಬೆನ್ನಲ್ಲೇ ಕೆಲ ಕನ್ನಡಿಗರಿಂದ ಅಸಮಾಧಾನ ವ್ಯಕ್ತವಾಗಿದೆ.

ರಿಷಬ್ ಶೆಟ್ಟಿ ಅವರೇ, ನಮ್ಮ ಕುಂದಾಪುರದ ಬಸ್ರೂರು ಒಂದು ಕಾಲದಲ್ಲಿ ಪ್ರಮುಖ ಒಳನಾಡ ಬಂದರಾಗಿತ್ತು ಎಂಬುದು ನಮ್ಮೆಲ್ಲರಿಗೂ ತಿಳಿದಿದೆ. ನಮ್ಮ ಬಸ್ರೂರರನ್ನು , ಕುಮಟಾ ವನ್ನು ಶಿವಾಜಿ ಮತ್ತು ಆತನ ಸೇನೆ ಲೂಟಿ ಮಾಡಿತ್ತು, ಅಪಾರವಾದ ಹತ್ಯೆ ಕೂಡ ಮಾಡಿತ್ತು ಎಂದು ಇತಿಹಾಸದ ದಾಖಲೆಗಳು ಹೇಳುತ್ತವೆ. ಅದೂ ಕೂಡ ಮಹಾ ಶಿವರಾತ್ರಿಯ ದಿನ. ನಮ್ಮೂರಿನ ಭೂತ, ಕೋಲವನ್ನು ಜಗತ್ಪçಸಿದ್ಧ ಮಾಡಿದವರು ನೀವು. ನಮ್ಮ ಹಿರಿಯರನ್ನು ದಂಡಿಸಿ, ಲೂಟಿ ಮಾಡಿದವರನ್ನು ನೀವು ವಿಜೃಂಭಿಸುವುದು ಸರಿಯೇ? ಹೇಳಲು ಹತ್ತಾರು ಕತೆಗಳಿವೆ. ಕನ್ನಡ ನಾಡಿನ ರಾಜರದ್ದೇ ಕತೆಗಳು ನೂರಾರು ಇವೆ. ಒಮ್ಮೆ ಯೋಚಿಸಿ ಎಂದು ಅಭಿಮಾನಿಯೊಬ್ಬ ಎಕ್ಸ್‌ನಲ್ಲಿ ರಿಷಬ್‌ಗೆ ಪ್ರಶ್ನಿಸಿದ್ದಾರೆ.

ಶಿವಾಜಿ ಮಹಾರಾಜ್ ಕುರಿತ ಈ ಸಿನಿಮಾವನ್ನು ಕೈಬಿಡಿ ಎಂದು ರಿಷಬ್‌ಗೆ ಅನೇಕರು ಮನವಿ ಮಾಡಿದ್ದಾರೆ. ನಮ್ಮ ಮಣ್ಣಿನ ಕಥೆಯನ್ನು ಹೇಳಿ ಎಂದು ರಿಷಬ್ ವಿರುದ್ಧ ಪರ ಮತ್ತು ವಿರೋಧ ಚರ್ಚೆ ನಡೆಯುತ್ತಿದೆ. ಛತ್ರಪತಿ ಶಿವಾಜಿ ಮಹಾರಾಜ್ ಬಯೋಪಿಕ್ ಮಾಡಿರುವ ಬಗ್ಗೆ ಕನ್ನಡಿಗರು ರಿಷಬ್ ಮೇಲೆ ಸಿಟ್ಟಾಗಿದ್ದಾರೆ. ಇದಕ್ಕೆಲ್ಲಾ ರಿಷಬ್ ಉತ್ತರ ನೀಡುತ್ತಾರಾ? ಸ್ಪಷ್ಟನೆ ಕೊಡುತ್ತಾರಾ? ಎಂದು ಕಾದು ನೋಡಬೇಕಿದೆ.

rishab

ಅಂದಹಾಗೆ, ಬಾಲಿವುಡ್ ಡೈರೆಕ್ಟರ್ ಸಂದೀಪ್ ಸಿಂಗ್ ಅವರ ಹಿಸ್ಟೋರಿಕಲ್ ಡ್ರಾಮಾ ಸಿನಿಮಾದಲ್ಲಿ ರಿಷಬ್ ನಟಿಸಲಿದ್ದಾರೆ. ಸದ್ಯ ಶಿವಾಜಿ ಮಹಾರಾಜ್ ಲುಕ್‌ನಲ್ಲಿ ಖಡ್ಗ ಹಿಡಿದು ರಿಷಬ್ ಕಾಣಿಸಿಕೊಂಡಿರುವ ಲುಕ್ ರಿವೀಲ್ ಆಗಿತ್ತು.

ಛತ್ರಪತಿ ಶಿವಾಜಿ ಮಹಾರಾಜ್ ಕುರಿತಾದ ಈ ಬಯೋಪಿಕ್ ಸಿನಿಮಾವು 2027ರ ಜನವರಿ 21ರಂದು ಬಿಡುಗಡೆಯಾಗುವುದಾಗಿ ಕೂಡ ಚಿತ್ರತಂಡ ಅನೌನ್ಸ್ ಮಾಡಿದೆ.

Share This Article