Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸೂರ್ಯ ಘರ್: ಇನ್ನೆಂಟು ತಿಂಗಳಲ್ಲಿ 2 ಲಕ್ಷ ತಂತ್ರಜ್ಞರಿಗೆ ತರಬೇತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಸೂರ್ಯ ಘರ್: ಇನ್ನೆಂಟು ತಿಂಗಳಲ್ಲಿ 2 ಲಕ್ಷ ತಂತ್ರಜ್ಞರಿಗೆ ತರಬೇತಿ

Latest

ಸೂರ್ಯ ಘರ್: ಇನ್ನೆಂಟು ತಿಂಗಳಲ್ಲಿ 2 ಲಕ್ಷ ತಂತ್ರಜ್ಞರಿಗೆ ತರಬೇತಿ

Public TV
Last updated: December 5, 2024 11:22 am
Public TV
Share
3 Min Read
PMSGMBY
SHARE

– ಈಗಾಗಲೇ ತರಬೇತಿ ಪಡೆದ 40 ಸಾವಿರ ಸಿಬ್ಬಂದಿ
– 50,000ಕ್ಕೂ ಅಧಿಕ ಎಂಜಿನಿಯರ್‌ಗಳಿಗೂ ವಿಶೇಷ ತರಬೇತಿ
– ಈ ಯೋಜನೆಗಾಗಿ ವೆಬ್‌ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಲು ಕೇವಲ ಐದೇ ನಿಮಿಷ

ನವದೆಹಲಿ: ಕೇಂದ್ರ ಸರ್ಕಾರ, ಪ್ರಧಾನ ಮಂತ್ರಿ ಸೂರ್ಯ ಘರ್ ಮಫ್ತಿ ಬಿಜ್ಲಿ ಯೋಜನೆಯಡಿಯಲ್ಲಿ (PM Surya Ghar Muft Bijli Yojana) 2 ಲಕ್ಷ ತಂತ್ರಜ್ಞರಿಗೆ ತರಬೇತಿ ನೀಡಲು ಮುಂದಾಗಿದೆ.

DISCOMಗಳು (ವಿತರಣಾ ಕಂಪೆನಿ) ಈ ಯೋಜನೆಯಡಿ ಈಗಾಗಲೇ 40,000 ಸಿಬ್ಬಂದಿಗೆ ಅಗತ್ಯ ತರಬೇತಿ ನೀಡಿವೆ. ಮುಂದಿನ 8 ತಿಂಗಳಲ್ಲಿ ಹೆಚ್ಚುವರಿ 2 ಲಕ್ಷ ತಂತ್ರಜ್ಞರಿಗೆ ತರಬೇತಿ ನೀಡಲಾಗುವುದು ಎಂದು ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.ಇದನ್ನೂ ಓದಿ: ದೆಹಲಿಯಲ್ಲಿ ಅಪ್ಪ-ಅಮ್ಮ, ಸಹೋದರಿ ಹತ್ಯೆ ಪ್ರಕರಣ – ಮಗನಿಂದಲೇ ಕೃತ್ಯ

ಎಂಜಿನಿಯರ್ ಗಳಿಗೂ ತರಬೇತಿ:
ಇದರ ಜೊತೆಗೆ 50,000ಕ್ಕೂ ಹೆಚ್ಚು ಡಿಸ್ಕಾಂ ಎಂಜಿನಿಯರ್‌ಗಳು ಮೇಲ್ಛಾವಣಿ ಸೌರ ಸ್ಥಾವರಗಳ ಪರಿಶೀಲನೆ ಮತ್ತು ಕಮಿಷನ್ ಮಾಡಲು ಹಾಗೂ ನೆಟ್ ಮೀಟರ್‌ಗಳನ್ನು ಒದಗಿಸಲು ವಿಶೇಷ ತರಬೇತಿ ಸಹ ಪಡೆಯುತ್ತಿದ್ದಾರೆ.

90ಕ್ಕೂ ಅಧಿಕ ಡಿಸ್ಕಾಂಗಳು ಕಾರ್ಯನಿರ್ವಹಣೆ:
ದೇಶದಲ್ಲಿ 90ಕ್ಕೂ ಹೆಚ್ಚು ಡಿಸ್ಕಾಂಗಳು, ಬ್ಯಾಂಕ್‌ಗಳು ಮತ್ತು ಮಧ್ಯವರ್ತಿಗಳನ್ನು ಸಂಯೋಜಿಸಲು ಅನುವಾಗುವಂತೆ ಐಟಿ ವ್ಯವಸ್ಥೆ ನಿರ್ಮಿಸುವಲ್ಲಿ ಕಾರ್ಯಾಚರಣೆ ನಡೆಸಿವೆ. ಸೂರ್ಯ ಘರ್ ಯೋಜನೆ ಫಲಾನುಭವಿಗಳಲ್ಲಿ ವಿದ್ಯುತ್ ಮಾರಾಟಗಾರರ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಸುಮಾರು 9,000 ಮಾರಾಟಗಾರರು ಸಕ್ರಿಯರಾಗಿದ್ದಾರೆ ಮತ್ತು ಪ್ರತಿ ದಿನ ಹೆಚ್ಚು ಹೆಚ್ಚು ಸೇರ್ಪಡೆಯಾಗುತ್ತಿದ್ದಾರೆ ಎಂದು ಇಂಧನ ಸಚಿವಾಲಯ ಮಾಹಿತಿ ಹಂಚಿಕೊಂಡಿದೆ.

ಗುರಿ ಸಾಧನೆಯತ್ತ ಮಹತ್ವದ ಹೆಜ್ಜೆ:
ಈ ಯೋಜನೆಯ ತನ್ನ ಮಹತ್ವಾಕಾಂಕ್ಷಿ ಗುರಿ ಸಾಧನೆಯತ್ತ ಮಹತ್ವದ ಹೆಜ್ಜೆ ಇರಿಸಿದೆ. 2025ರ ಮಾರ್ಚ್ ವೇಳೆಗೆ 10 ಲಕ್ಷ ಸೌರ ಮೇಲ್ಛಾವಣಿ ಸ್ಥಾಪನೆಗೆ ಗುರಿ ಹಾಕಿಕೊಂಡಿದ್ದು, 2027ರ ವೇಳೆಗೆ ಒಂದು ಕೋಟಿ ಘಟಕಗಳ ಸ್ಥಾಪನೆ ಪೂರೈಸಲು ಮುಂದಾಗಿದೆ. ಯೋಜನೆ ಪ್ರಾರಂಭವಾದ ಬಳಿಕ ಮೇಲ್ಛಾವಣಿ ಸೌರ ಘಟಕ ಸ್ಥಾಪನೆ ಮಾಸಿಕವಾಗಿ ಹತ್ತು ಪಟ್ಟು ಹೆಚ್ಚಾಗುತ್ತಿವೆ. ಇನ್ನು ಮೂರು ತಿಂಗಳಲ್ಲಿ 10 ಲಕ್ಷ ಮೀರುವ ನಿರೀಕ್ಷೆಯಿದೆ. 2025ರ ಅಕ್ಟೋಬರ್ ವೇಳೆಗೆ 20 ಲಕ್ಷ, 2026ರ ಮಾರ್ಚ್ ವೇಳೆಗೆ 40 ಲಕ್ಷ ಮತ್ತು 2027ರ ಮಾರ್ಚ್ ವೇಳೆಗೆ ಒಂದು ಕೋಟಿ ಗುರಿ ತಲುಪುತ್ತದೆ ಎಂದು ನವೀಕರಿಸಬಹುದಾದ ಇಂಧನ ಸಚಿವಾಲಯ ವಿವರಣೆ ನೀಡಿದೆ.

9 ತಿಂಗಳಲ್ಲಿ 6.3 ಲಕ್ಷ ಸ್ಥಾಪನೆ:
ಈ ಯೋಜನೆಯ ಕೇವಲ 9 ತಿಂಗಳಲ್ಲಿ 6.3 ಲಕ್ಷ ಸೌರ ಮೇಲ್ಛಾವಣಿ ಸ್ಥಾಪಿಸಿದೆ. ಗುಜರಾತ್, ಮಹಾರಾಷ್ಟ್ರ, ಕೇರಳ ಮತ್ತು ಉತ್ತರ ಪ್ರದೇಶದಂತಹ ರಾಜ್ಯಗಳು ಅಸಾಧಾರಣ ಪ್ರಗತಿ ಪ್ರದರ್ಶಿಸಿವೆ.

4 ಲಕ್ಷ ಗ್ರಾಹಕರಿಗೆ ಸಬ್ಸಿಡಿ ಸಂದಾಯ:
ನವೆಂಬರ್ 2024ರ ವೇಳೆಗೆ 4 ಲಕ್ಷಕ್ಕೂ ಹೆಚ್ಚು ಗ್ರಾಹಕರಿಗೆ 3,100 ಕೋಟಿ ರೂ.ಗೂ ಹೆಚ್ಚು ಸಬ್ಸಿಡಿ ಹಣ ವಿತರಿಸಲಾಗಿದೆ. ಮಾಸಿಕ ಸರಾಸರಿ 67,000 ಕುಟುಂಬಗಳು ಸಬ್ಸಿಡಿ ಪಡೆದಿವೆ. ಯೋಜನೆ ಅಳವಡಿಸಿಕೊಂಡ ಮನೆಗಳಿಗೆ 15 ದಿನಗಳಲ್ಲೇ ಸಬ್ಸಿಡಿ ಸಿಗುತ್ತಿರುವುದರಿಂದ ಗಣನೀಯ ಪ್ರಮಾಣದಲ್ಲಿ ಅರ್ಜಿಗಳು ಹರಿದು ಬರುತ್ತಿವೆ. ಈಗಾಗಲೇ ಶೇ.28ರಷ್ಟು ಕುಟುಂಬಗಳು ಶೂನ್ಯ ವಿದ್ಯುತ್ ಬಿಲ್ ಪಡೆಯುತ್ತಿವೆ ಎಂದು ಮಾಹಿತಿ ನೀಡಿದೆ

ಜನ್ ಸಮರ್ಥ್ ಪೋರ್ಟಲ್:
ಸೂರ್ಯ ಘರ್ ಯೋಜನೆಯಡಿ ವಿದ್ಯುತ್ ಮಾರಾಟಗಾರರನ್ನು ಪ್ರೋತ್ಸಾಹಿಸಲು 3 ಕಿಲೋ ವ್ಯಾಟ್ ವರೆಗಿನ ಸಿಸ್ಟಮ್‌ಗಳಿಗಾಗಿ “ಜನ್ ಸಮರ್ಥ್ ಪೋರ್ಟಲ್” ಆರಂಭಿಸಿದ್ದು, ಫಲಾನುಭವಿಗಳಿಗೆ ಇದು ಕೈಗೆಟುಕುವ ಹಣಕಾಸು ಸೌಲಭ್ಯ ಆಯ್ಕೆ ಮಾಡಿಕೊಳ್ಳಲು ಪೂರಕವಾಗಿದೆ.

ಡಿಜಿಟಲೀಕರಣ-ಗ್ರಾಹಕ ಪ್ರಕ್ರಿಯೆ ಸರಳೀಕರಣ:
ಗ್ರಾಹಕರ ನೋಂದಣಿ ಪ್ರಕ್ರಿಯೆ ಸರಳಗೊಳಿಸಲಾಗಿದೆ. ಸೂರ್ಯ ಘರ್ ಯೋಜನೆ ನೋಂದಣಿಗೆ ಈ ಹಿಂದೆ, ಅರ್ಜಿದಾರರು ಬಹು ದಾಖಲೆಗಲೊಂದಿಗೆ ಡಿಸ್ಕಾಂ ಕಚೇರಿಗಳಿಗೆ ಅಲೆಯಬೇಕಿತ್ತು. ಈಗ ಆ ತಾಪತ್ರಯವಿಲ್ಲ. ಎಲ್ಲದನ್ನೂ ಡಿಜಿಟಲೀಕರಣಗೊಳಿಸುವ ಮೂಲಕ ಪ್ರಕ್ರಿಯೆ ಸರಳಗೊಳಿಸಲಾಗಿದೆ.

ಐದೇ ನಿಮಿಷದಲ್ಲಿ ಅರ್ಜಿ ಸಲ್ಲಿಸಿ:
ಸೂರ್ಯ ಘರ್ ಯೋಜನೆ ಆಕಾಂಕ್ಷಿಗಳು ವೆಬ್‌ಸೈಟ್ ಅಲ್ಲಿ ನೇರವಾಗಿ ಮತ್ತು ಅಷ್ಟೇ ತ್ವರಿತವಾಗಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. https://www.pmsuryaghar.gov.in/ನಲ್ಲಿ ಈಗ ಐದೇ ನಿಮಿಷಗಳಲ್ಲಿ ಅರ್ಜಿ ಸಲ್ಲಿಸಬಹುದು.

ಅರ್ಜಿದಾರರು ತಮ್ಮ ಮೇಲ್ಛಾವಣಿಯನ್ನು ನೋಡಲು ಮತ್ತು ಮೇಲ್ಛಾವಣಿಯ ಸೌರವ್ಯೂಹದ ಸಾಮರ್ಥ್ಯವನ್ನು ಯೋಜಿಸಲು ಪೋರ್ಟಲ್‌ನ ಜಿಐಎಸ್ ವೈಶಿಷ್ಟ್ಯವನ್ನು ಸಹ ಬಳಸಬಹುದು. ಅಲ್ಲದೇ, ಶೇ.7ರ ಬಡ್ಡಿದರದಲ್ಲಿ ಸಾಲವನ್ನು ಸಹ ಈ ಪೋರ್ಟಲ್‌ನಲ್ಲಿ ಆಯ್ಕೆ ಮಾಡಿಕೊಳ್ಳಬಹುದಾಗಿದೆ. ಅನುಸ್ಥಾಪನೆ ನಂತರ ವಿವರಗಳನ್ನು ನಿಮಿಷಗಳಲ್ಲಿ ಅಪ್ಲೋಡ್ ಮಾಡಬಹುದು. ಪೋರ್ಟಲ್ ಸ್ವಯಂ ಚಾಲಿತವಾಗಿ ಡಿಸ್ಕಾಂಗೆ ಪರಿಶೀಲಿಸಲು ತಿಳಿಸುತ್ತದೆ. ನಂತರ ಅರ್ಜಿದಾರರು ಪೋರ್ಟಲ್‌ನಲ್ಲಿ ಸಬ್ಸಿಡಿ ಪಡೆದುಕೊಳ್ಳಬಹುದು.ಇದನ್ನೂ ಓದಿ: ಕಳೆದ 50 ವರ್ಷದಲ್ಲಿ ಹಾಸನಕ್ಕೆ ಕಾಂಗ್ರೆಸ್ ಕೊಡುಗೆ ಏನು: ಹೆಚ್‌ಡಿ ರೇವಣ್ಣ ಪ್ರಶ್ನೆ

TAGGED:DISCOMnewdelhiPM Surya Ghar Muft Bijli YojanaPMSGMBYನವದೆಹಲಿಪ್ರಧಾನ ಮಂತ್ರಿ ಸೂರ್ಯ ಘರ್ ಮಫ್ತಿ ಬಿಜ್ಲಿ ಯೋಜನೆ
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

supreme Court 1
Court

ಏಕರೂಪ ನಾಗರಿಕ ಸಂಹಿತೆ ಜಾರಿಗೆ ‘ಸುಪ್ರೀಂ’ ಅಸ್ತು

Public TV
By Public TV
8 hours ago
d.k.shivakumar dinner party
Bengaluru City

ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ 6 ವರ್ಷ – ಕಾಂಗ್ರೆಸ್ ಶಾಸಕರಿಗೆ ಡಿನ್ನರ್ ಪಾರ್ಟಿ

Public TV
By Public TV
8 hours ago
Gas Emergency
Latest

ಎಲ್‌ಪಿಜಿ ಸಿಲಿಂಡರ್‌ಗಳ ಕೃತಕ ಅಭಾವ – ಬುಕ್ಕಿಂಗ್ ಅವಧಿಯನ್ನು 21ರಿಂದ 25 ದಿನಕ್ಕೆ ಹೆಚ್ಚಿಸಿದ ಕೇಂದ್ರ

Public TV
By Public TV
9 hours ago
OPD
Bengaluru City

ಮುಷ್ಕರದಿಂದ ಹಿಂದೆ ಸರಿದ ವೈದ್ಯರು – ನಾಳೆಯಿಂದ ಎಂದಿನಂತೆ ಓಪಿಡಿ ಓಪನ್

Public TV
By Public TV
9 hours ago
smriti irani lakshmi hebbalkar
Bengaluru City

ಸ್ಮೃತಿ ಇರಾನಿ ಕಾಣುತ್ತಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವ್ಯಂಗ್ಯ

Public TV
By Public TV
10 hours ago
Eshwar Khandre
Bengaluru City

1 ಮರ ಕಡಿದರೆ 10 ಸಸಿ ನೆಡಲು ವಿಧಿಸುವ ಶುಲ್ಕಕ್ಕೆ ವಿನಾಯಿತಿ ಇಲ್ಲ: ಈಶ್ವರ ಖಂಡ್ರೆ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?