ಬೀದರ್: ರಸ್ತೆ ದಾಟುವಾಗ ಭೀಕರ ಅಪಘಾತದಲ್ಲಿ ಗಾಯಗೊಂಡು ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ ವಿದ್ಯಾರ್ಥಿ ಇಂದು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾನೆ.
ಮೃತ ವಿದ್ಯಾರ್ಥಿಯನ್ನು 16 ವರ್ಷದ ವಿಕಾಸ್ ಸೋಪಾನ್ ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಚಿಕ್ಕೋಡಿ| ಪ್ರೀತಿಗೆ ವಿರೋಧ; ಪ್ರಿಯಕರನಿಂದ ಡಬಲ್ ಮರ್ಡರ್
ಜಿರ್ಗಾ ಕ್ರಾಸ್ (Jirga Cross) ಬಳಿ ರಾಜ್ಯ ಹೆದ್ದಾರಿ ದಾಟುವಾಗ ರಸ್ತೆ ಅಪಘಾತ ನಡೆದಿತ್ತು. ಈ ವೇಳೆ ಕಾರೊಂದು ವಿದ್ಯಾರ್ಥಿಗೆ ಡಿಕ್ಕಿ ಹೊಡೆದಿತ್ತು. ಭೀಕರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸ್ಥಿತಿ ಚಿಂತಾಜನಕವಾಗಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಸದ್ಯ ಸಂತಪೂರ ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ.
ಘಟನೆ ಏನು?
ನ.26 ರಂದು ಬೀದರ್ (Bidar) ಜಿಲ್ಲೆಯ ಔರಾದ್ (Aurad) ತಾಲೂಕಿನ ಜಿರ್ಗಾ ಕ್ರಾಸ್ ಬಳಿ ರಾಜ್ಯ ಹೆದ್ದಾರಿ ದಾಟುವಾಗ ವಿದ್ಯಾರ್ಥಿಗೆ ಕಾರೊಂಡು ಡಿಕ್ಕಿ ಹೊಡೆದಿತ್ತು.
ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಶಾಲಾ ವಾಹನದ ಎದುರಿನಿಂದ ವಿದ್ಯಾರ್ಥಿ ಓಡಿಕೊಂಡು ಬರುತ್ತಿದ್ದ. ಈ ವೇಳೆ ಅದೇ ಶಾಲಾ ವಾಹನದ ಪಕ್ಕದಿಂದ ವೇಗವಾಗಿ ಕಾರೊಂದು ಬಂದು ವಿದ್ಯಾರ್ಥಿಗೆ ಡಿಕ್ಕಿ ಹೊಡೆದಿತ್ತು. ಡಿಕ್ಕಿ ಹೊಡೆದ ರಭಸಕ್ಕೆ ಗಾಳಿಯಲ್ಲಿ ಮೇಲಿಂದ ಹಾರಿ ಮುಂದೆ ಹೋಗಿ ಬಿದ್ದಿದ್ದ. ಈ ಅಪಘಾತದ ಭೀಕರ ದೃಶ್ಯಗಳು ಅಲ್ಲಿಯೇ ಇದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.
ತಕ್ಷಣವೇ ವಿದ್ಯಾರ್ಥಿಯನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗಿತ್ತು. ಇನ್ನೂ ಭೀಕರ ರಸ್ತೆ ಅಪಘಾತದಿಂದಾಗಿ ರೋಸಿ ಹೋಗಿದ್ದ ಗ್ರಾಮಸ್ಥರು, ರಸ್ತೆಯಲ್ಲಿಯೇ ಕುಳಿತು ಪ್ರತಿಭಟನೆ ನಡೆಸಿದ್ದರು. ರಸ್ತೆ ಕಾಮಗಾರಿ ಅವೈಜ್ಞಾನಿಕವಾಗಿ ಮಾಡಲಾಗಿದೆ. ಇದರಿಂದಾಗಿ ಅಪಘಾತಗಳು ಹೆಚ್ಚಾಗುತ್ತಿವೆ ಎಂದು ಆರೋಪಿಸಿದ್ದರು. ಜೊತೆಗ ವಿದ್ಯಾರ್ಥಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದರು. ಸಂತಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಇದನ್ನೂ ಓದಿ: ಕಚ್ಚಾಡುವುದರಿಂದ ಯಾರಿಗೂ ಲಾಭವಿಲ್ಲ: ಯತ್ನಾಳ್ ವಿಚಾರಕ್ಕೆ ಬಿಎಸ್‍ವೈ ಪ್ರತಿಕ್ರಿಯೆ