ಕದಂಬ ಕನ್ನಡ ಜಿಲ್ಲೆ, ಬನವಾಸಿ ತಾಲೂಕು ರಚನೆಗೆ ಒತ್ತಾಯಿಸಿ ಪ್ರತಿಭಟನೆ

Public TV
0 Min Read
kadamba kannada district protest

ಕಾರವಾರ: ಕದಂಬ ಕನ್ನಡ ಜಿಲ್ಲೆ ಮತ್ತು ಬನವಾಸಿ ತಾಲೂಕು ರಚನೆಗಾಗಿ ಉತ್ತರ ಕನ್ನಡ ಜಿಲ್ಲೆಯ ಬನವಾಸಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗಿದೆ.

ಉತ್ತರಕನ್ನಡ ಜಿಲ್ಲೆಯ ಘಟ್ಟದ ಮೇಲಿನ 7 ತಾಲೂಕುಗಳ ಪ್ರತ್ಯೇಕ ಕದಂಬ ಕನ್ನಡ ಜಿಲ್ಲೆಗಾಗಿ ಒಕ್ಕೊರಲ ಆಗ್ರಹ ಕೇಳಿಬಂದಿದೆ. ಕನ್ನಡದ ಪ್ರಥಮ ರಾಜಧಾನಿ ಬನವಾಸಿಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು.

ಹೋರಾಟಗಾರ ಅನಂತಮೂರ್ತಿ ಹೆಗಡೆ ಪ್ರತಿಭಟನಾ ಮೆರವಣಿಗೆ ನೇತೃತ್ವ ವಹಿಸಿದ್ದರು. ಪ್ರತಿಭಟನೆಯಲ್ಲಿ ನೂರಾರು ಜನರು ಭಾಗಿಯಾಗಿದ್ದರು. ಪ್ರತಿಭಟನಾಕಾರರು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.

Share This Article