ತಿರುಪತಿ ತಿಮ್ಮಪ್ಪನಿಗೆ ಮುಡಿ ಕೊಟ್ಟ ಶಿವಣ್ಣ ದಂಪತಿ

Public TV
0 Min Read
SHIVARAJ KUMAR

ಟ ಶಿವರಾಜ್‌ಕುಮಾರ್‌ (Shivarajkumar) ಹಾಗೂ ಅವರ ಕುಟುಂಬಸ್ಥರು ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ಅಲ್ಲದೇ ಶಿವಣ್ಣ ಹಾಗೂ ಅವರ ಪತ್ನಿ ಗೀತಾ ಶಿವರಾಜ್‌ ಕುಮಾರ್‌ ತಿಮ್ಮಪ್ಪನಿಗೆ ಮುಡಿಕೊಟ್ಟಿದ್ದಾರೆ.

Shivarajkumar

ಇತ್ತೀಚೆಗೆ ಶಿವಣ್ಣ ನಟನೆಯ ಭೈರತಿ ರಣಗಲ್ ಸಿನಿಮಾ ಬಿಡುಗಡೆಯಾಗಿ ಯಶಸ್ಸು ಕಂಡಿದೆ. ಸಿನಿಮಾದ ಸಕ್ಸಸ್ ಒಂದು ಕಡೆಯಾದ್ರೆ, ಮತ್ತೊಂದೆಡೆ ಶಿವರಾಜ್‌ ಕುಮಾರ್‌ ಅವರಿಗೆ ಅನಾರೋಗ್ಯದ ಸಮಸ್ಯೆ ಕಾಡುತ್ತಿದೆ. ಈ ಹಿನ್ನೆಲೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ಮುಡಿ ಕೊಟ್ಟಿದ್ದಾರೆ.

ಶಿವಣ್ಣ ಕುಟುಂಬದ ಜೊತೆ ನಿರ್ಮಾಪಕ ಕೆ.ಪಿ.ಶ್ರೀಕಾಂತ್, ಹಾಗೂ ಶಿವಣ್ಣ ಪುತ್ರಿ ನಿವೇದಿತಾ ಸಹ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ.

Share This Article