ಕೆರೆಗೆ ಬಿದ್ದ ಮಗನನ್ನು ರಕ್ಷಿಸಲು ಹೋಗಿ ತಾಯಿಯೂ ಸಾವು

Public TV
1 Min Read
raichuru Death

ರಾಯಚೂರು: ಕೆರೆಗೆ ಬಿದ್ದ ಮಗನನ್ನು ರಕ್ಷಿಸಲು ಹೋಗಿ ಕಾಲು ಜಾರಿ ಬಿದ್ದು ತಾಯಿ, ಮಗ ಇಬ್ಬರೂ ಸಾವನ್ನಪ್ಪಿರುವ ಘಟನೆ ರಾಯಚೂರು (Raichuru) ಜಿಲ್ಲೆಯ ಮಲಿಯಾಬಾದ್ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಮಲಿಯಾಬಾದ್ (Maliabad) ಗ್ರಾಮದ ನಿವಾಸಿ ತಾಯಿ ರಾಧಮ್ಮ (32) ಹಾಗೂ ಮಗ ಕೆ.ಸಂಜು (5) ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಮೊದಲ ದಿನವೇ ಬಿಜೆಪಿ ಶಾಸಕರಲ್ಲಿ ಸಮನ್ವಯದ ಕೊರತೆ

ಇಂದು (ಡಿ.9) ಬೆಳಿಗ್ಗೆ ತಾಯಿ ಬಟ್ಟೆ ತೊಳೆಯಲು ಕೆರೆಗೆ ಹೋಗಿದ್ದರು. ತಾಯಿಯ ಜೊತೆಗೆ ಸಂಜು ಜೊತೆಗೆ ಹೋಗಿದ್ದ. ಈ ವೇಳೆ ಕಾಲು ಜಾರಿ ಕೆರೆಗೆ ಬಿದ್ದ ಸಂಜನನ್ನ ಕಾಪಾಡಲು ತಾಯಿ ನೀರಿಗಿಳಿದಿದ್ದಾರೆ. ಈ ವೇಳೆ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾರೆ.

ಕೂಡಲೇ ಸ್ಥಳೀಯರು ರಕ್ಷಿಸಲು ಮುಂದಾಗಿದ್ದು, ಏನು ಪ್ರಯೋಜನವಾಗಿಲ್ಲ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಯರಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.ಇದನ್ನೂ ಓದಿ: ಐಸಿಸಿ ಅಂಗಳ ತಲುಪಿದ ಸಿರಾಜ್‌ vs ಹೆಡ್‌ ವಾಗ್ವಾದ – ಇಬ್ಬರಿಗೂ ಬ್ಯಾನ್‌ ಭೀತಿ?

Share This Article