ಬೆಳಗಾವಿ: 2ಎ ಮೀಸಲಾತಿಗಾಗಿ ಪಂಚಮಸಾಲಿ (Panchamasali Reservation) ಸಮುದಾಯದವರು ಒತ್ತಾಯ ಮಾಡುತ್ತಿರುವುದು ಸಂವಿಧಾನ ವಿರೋಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ತಿಳಿಸಿದ್ದಾರೆ. ಈ ಮೂಲಕ ಪಂಚಮಸಾಲಿಗಳಿಗೆ ಮೀಸಲಾತಿ ಕೊಡಲು ಸಾಧ್ಯವಿಲ್ಲ ಎಂದು ಪರೋಕ್ಷವಾಗಿ ಸಂದೇಶ ರವಾನೆ ಮಾಡಿದ್ದಾರೆ.
ವಿಧಾನ ಪರಿಷತ್ ಕಲಾಪದಲ್ಲಿ ಶೂನ್ಯವೇಳೆಯಲ್ಲಿ ಪ್ರಸ್ತಾಪವಾದ ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಮಾಡಿದ ಪ್ರಕರಣದ ಬಗ್ಗೆ ಉತ್ತರ ನೀಡುವ ವೇಳೆ ಸಿಎಂ ಸಿದ್ದರಾಮಯ್ಯ ಮೀಸಲಾತಿ ಸಂಬಂಧ ಉತ್ತರ ನೀಡಿದರು. ಈ ವೇಳೆ ಮಾತಾನಾಡಿದ ಸಿಎಂ, ಪಂಚಮಸಾಲಿ ಮೀಸಲಾತಿ ಸಾಧ್ಯವಿಲ್ಲ ಎಂದು ಸಂದೇಶ ಕೊಟ್ಟರು. ಇದನ್ನೂ ಓದಿ: 2024-25ರಲ್ಲಿ 1.4 ಲಕ್ಷ ಕೋಟಿ ಸಾಲ ಮಾಡಿದ್ದೇವೆ, ಬೇರೆ ರಾಜ್ಯಗಳಿಂದ ನಮ್ಮದು ಕಡಿಮೆ: ಸಿದ್ದರಾಮಯ್ಯ
ನಮ್ಮ ರಾಜ್ಯದಲ್ಲಿ 2002ರಲ್ಲಿ ಮೀಸಲಾತಿ ವಿಭಾಗ ಆಯಿತು. ಆಗ ಯಾಕೆ ಪಂಚಮಸಾಲಿ ಮೀಸಲಾತಿ ಬೇಕು ಎಂದು ಒತ್ತಾಯ ಹಾಕಲಿಲ್ಲ? 2021-22ರಲ್ಲಿ ಪಂಚಮಸಾಲಿಗಳಿಗೆ ಮೀಸಲಾತಿ ಬೇಕು ಎಂದು ಚಳುವಳಿ ಪ್ರಾರಂಭವಾಯಿತು. ಅಂದಿನ ಸರ್ಕಾರದಲ್ಲಿ ಮುರುಗೇಶ್ ನಿರಾಣಿಗೆ ಮಂತ್ರಿ ಸ್ಥಾನ ಸಿಗಲಿಲ್ಲ ಎಂದು ಈ ಹೋರಾಟ ಪ್ರಾರಂಭ ಮಾಡಿದ್ದು ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದರು. ಇದನ್ನೂ ಓದಿ: ಸೋನಿಯಾ ಗಾಂಧಿ ಮನವೊಲಿಸಲು ವಯನಾಡಿಗೆ ನೂರು ಮನೆ: ಈಶ್ವರಪ್ಪ ವ್ಯಂಗ್ಯ
ಬೊಮ್ಮಾಯಿ ಸರ್ಕಾರ 2ಸಿ ಮತ್ತು 2ಡಿ ಎಂದು ಹೊಸ ಮೀಸಲಾತಿ ವ್ಯವಸ್ಥೆ ಜಾರಿ ಮಾಡಿ ಒಕ್ಕಲಿಗರಿಗೂ ಮತ್ತು ಲಿಂಗಾಯತರಿಗೂ ಮುಸ್ಲಿಮರ 4% ಮೀಸಲಾತಿ ಕಡಿತ ಮಾಡಿ ತಲಾ 2% ಮೀಸಲಾತಿ ಕೊಟ್ಟಿದ್ದರು. ಇದನ್ನ ವಿರೋಧಿಸಿ ರಾಘವೇಂದ್ರ ಎಂಬವರು ಕೋರ್ಟ್‌ನಲ್ಲಿ ಕೇಸ್ ಹಾಕಿದರು. ಆಗ ಬೊಮ್ಮಾಯಿ ಸರ್ಕಾರದಲ್ಲಿ ಅಧಿಕಾರಿಯಾಗಿದ್ದ ತುಳಿಸಿ ಮದ್ದನೇನಿ ನಾವು 2002ರಲ್ಲಿ ಆಗಿರುವ ಜಾತಿ ವಿಭಾಗಗಳ ಮೀಸಲಾತಿ ವಿಂಗಡನೆಯನ್ನು ಯಾವುದೇ ಕಾರಣಕ್ಕೂ ಬದಲಾವಣೆ ಮಾಡೋದಿಲ್ಲ ಎಂದು ಅಫಿಡವಿಟ್ ಕೊಟ್ಟರು ಎಂದು ಸಿಎಂ ಅಫಿಡವಿಟ್ ಓದಿ ಹೇಳಿದರು. ಇದನ್ನೂ ಓದಿ: Ramanagara| ರೈಲಿಗೆ ತಲೆಕೊಟ್ಟು ಬಿ.ಇ ಪದವೀಧರ ಆತ್ಮಹತ್ಯೆ
ಬೊಮ್ಮಾಯಿ ಸರ್ಕಾರ ಮಾಡಿದ 2ಸಿ ಮತ್ತು 2ಡಿ ಯಾವ ಸಂವಿಧಾನ ಎಂದು ಗೊತ್ತಿಲ್ಲ. ಮುಸ್ಲಿಮರ 4% ಮೀಸಲಾತಿ ತೆಗೆದು ಒಕ್ಕಲಿಗ ಮತ್ತು ಲಿಂಗಾಯತರಿಗೆ ನೀಡಿದರು. ಮುಸ್ಲಿಮರ 4% ಬೊಮ್ಮಾಯಿ ಸರ್ಕಾರ ರದ್ದು ಯಾಕೆ ಮಾಡಿದರು? ಬೊಮ್ಮಾಯಿ ಸರ್ಕಾರದ 2ಸಿ ಮತ್ತು 2ಡಿ ವರ್ಗ ಮೀಸಲಾತಿ ವಿರೋಧಿಸಿ ಗುಲಾಂ ರಸೂಲ್ ಸುಪ್ರೀಂಕೋರ್ಟ್‌ಗೆ ಹೋದರು. ಅಲ್ಲಿ ಬೊಮ್ಮಾಯಿ ಸರ್ಕಾರ ಮುಂದಿನ ಆದೇಶದವರೆಗೂ 2ಸಿ ಮತ್ತು 2ಡಿ ಮೀಸಲಾತಿ ಜಾರಿ ಮಾಡಲ್ಲ ಎಂದು ಅಫಿಡವಿಟ್ ಕೊಟ್ಟಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಉಕ್ಕು ಕ್ಷೇತ್ರದಲ್ಲಿ ಹಸಿರು ಕ್ರಾಂತಿ – ಪ್ರಧಾನಿ ಮೋದಿ ಕನಸು ಅನಾವರಣಗೊಳಿಸಿದ ಹೆಚ್‌ಡಿಕೆ
ಸಿಎಂ ಮಾತಿಗೆ ವಿಪಕ್ಷಗಳು ವಿರೋಧ ವ್ಯಕ್ತಪಡಿಸಿದವು. ಮುಸ್ಲಿಮರಿಗೆ ಧರ್ಮದ ಆಧಾರದಲ್ಲಿ ಮೀಸಲಾತಿ ಕೊಟ್ಟಿದ್ದು ಸರಿಯಲ್ಲ. ಪಂಚಮಸಾಲಿಗಳಿಗೆ ಮೀಸಲಾತಿ ಕೊಡಿ ಎಂದು ಪಟ್ಟು ಹಿಡಿದರು. ಈ ವೇಳೆ ಸದನದಲ್ಲಿ ಗದ್ದಲ ಗಲಾಟೆ ಆಯಿತು. ಆಡಳಿತ-ವಿಪಕ್ಷಗಳ ನಡುವೆ ಪರಸ್ಪರ ಘೋಷಣೆಗಳು ಕೂಗಿದರು. ವಿಪಕ್ಷಗಳ ನಾಯಕರು ಸದನದ ಬಾವಿಗಳಿದು ಪ್ರತಿಭಟನೆ ಮಾಡಿದರು. ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ಇದನ್ನೂ ಓದಿ: ಒಂದು ದೇಶ, ಒಂದು ಚುನಾವಣೆ ಮಸೂದೆಗೆ ಮೋದಿ ಸಂಪುಟ ಅನುಮೋದನೆ