ಬೆಂಗಳೂರು: ವಕ್ಫ್ (Waqf) ನೀಡಿದ್ದ ನೋಟಿಸ್ ವಿಚಾರಕ್ಕೆ ಹಾವೇರಿಯಲ್ಲಿ (Haveri) ರೈತ ಆತ್ಮಹತ್ಯೆ ಮಾಡಿಕೊಂಡಿದ್ದ ಎಂದು ಟ್ವೀಟ್ ಮಾಡಿದ್ದಕ್ಕೆ ಸಂಸದ ತೇಜಸ್ವಿ ಸೂರ್ಯ (Tejasvi Surya) ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದು ಮಾಡಿ ಆದೇಶ ಹೊರಡಿಸಿದೆ.
ತಮ್ಮ ವಿರುದ್ಧದ ಪ್ರಕರಣ ರದ್ದುಗೊಳಿಸುವಂತೆ ಕೋರಿ ಹೈಕೋರ್ಟ್‌ಗೆ ಸಂಸದ ತೇಜಸ್ವಿ ಸೂರ್ಯ ಮೇಲ್ಮನವಿ ಸಲ್ಲಿಸಿದ್ದರು. ಕಳೆದ ವಾರ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾ.ನಾಗಪ್ರಸನ್ನ ಏಕಸದಸ್ಯ ಪೀಠವು ಆದೇಶ ಕಾಯ್ದಿರಿಸಿತ್ತು. ಗುರುವಾರ ತೀರ್ಪು ನೀಡಿದ್ದು, ಸಂಸದರ ಮೇಲಿನ ಸುಳ್ಳು ಸುದ್ದಿ ಹರಡುವಿಕೆ ಪ್ರಕರಣವನ್ನು ರದ್ದು ಮಾಡಿದೆ. ಇದನ್ನೂ ಓದಿ: 2ಎ ಮೀಸಲಾತಿಗಾಗಿ ಪಂಚಮಸಾಲಿಗಳ ಒತ್ತಾಯ ಸಂವಿಧಾನ ವಿರೋಧಿ: ಸಿಎಂ
ಹಾವೇರಿಯಲ್ಲಿ ರೈತ ಆತ್ಮಹತ್ಯೆ ಮಾಡಿಕೊಂಡ ವಿಚಾರಕ್ಕೆ ತೇಜಸ್ವಿ ಸೂರ್ಯ ಟ್ವೀಟ್ ಮಾಡಿದ್ದರು. ವಕ್ಫ್ ವಿಚಾರಕ್ಕೆ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಆರೋಪಿಸಿದ್ದರು. ಅದಾದ ಕೆಲವೇ ಹೊತ್ತಲ್ಲಿ ಟ್ವೀಟ್ ಡಿಲೀಟ್ ಮಾಡಿ ಕ್ಷಮಾಪಣೆ ಕೋರಿದ್ದರು.
ಸಂಸದರು ಸುಳ್ಳು ಸುದ್ದಿ ಹರಡಿದ್ದಾರೆಂದು ಹಾವೇರಿ ಸೆನ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿತ್ತು. ಎಫ್‌ಐಆರ್ ಪ್ರಶ್ನಿಸಿ ತೇಜಸ್ವಿ ಸೂರ್ಯ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದನ್ನೂ ಓದಿ: ಹಿಂದೂ ಪದ ವಿವಾದ – ಸಚಿವ ಸತೀಶ್ ಜಾರಕಿಹೊಳಿಗೆ ಬಿಗ್ ರಿಲೀಫ್